ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಬಜೆಟ್ ಕುರಿತು ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಮಹತ್ವದ ಮಾತು!

|
Google Oneindia Kannada News

ಬೆಂಗಳೂರು, ಫೆ. 15: ಸ್ವಕ್ಷೇತ್ರ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಕೆಡಿಪಿ ಸಭೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಖಡಕ್ ಆದೇಶ ಮಾಡಿದ್ದಾರೆ. ಸಭೆ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ಅಧಿಕಾರಿಗಳು ಭ್ರಷ್ಟಾಚಾರಕ್ಕೆ ಆಸ್ಪದವಾಗದಂತೆ, ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ತಾಕೀತು ಮಾಡಿದ್ದಾರೆ. ಜೊತೆಗೆ ಕಳಪೆ ಕಾಮಗಾರಿಯನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.

ಶಿಕಾರಿಪುರ ತಾಲೂಕಿನ ಸಮಸ್ಯೆಗಳನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ನನ್ನ ಆಡಳಿತದಲ್ಲಿ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಿದ್ದೇನೆ. ಹೀಗಾಗಿ ತಾಲೂಕಿನಲ್ಲಿನ ನೀರಾವರಿ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ವಿಳಂಬವನ್ನು ನಾನು ಸಹಿಸುವುದಿಲ್ಲ. ಶಿಕಾರಿಪುರ ಮಾದರಿ ತಾಲೂಕು ಮಾಡುವುದು ನನ್ನ ಗುರಿ. ಅಧಿಕಾರಿಗಳು ಇದಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ!ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ!

ಜೊತೆಗೆ ಲಿಂಗಾಯತ ಪಂಚಮಸಾಲಿ ಹಾಗೂ ಕುರುಬ ಸಮುದಾಯಗಳಿಂದ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿಗಾಗಿ ನಡೆಯುತ್ತಿರುವ ಹೋರಾಟ ನ್ಯಾಯಬದ್ಧವಾಗಿದೆ. ಕಾನೂನೂ ಚೌಕಟ್ಟಿನಲ್ಲಿ ನ್ಯಾಯ ಒದಗಿಸುವ ಮೂಲಕ ಈ ಹೋರಾಟಗಳನ್ನು ತುದಿ ಮುಟ್ಟಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Yediyurappa makes a significant statement on the state budget at Shikarimpur

ಜೊತೆಗೆ ತಾವು ಇದೇ ಮಾರ್ಚ್‌ ತಿಂಗಳಿನಲ್ಲಿ ಮಂಡಿಸಲಿರುವ ಬಜೆಟ್ ಕುರಿತು ಮಾತನಾಡಿರುವ ಸಿಎಂ ಅವರು, ಈ ಬಾರಿ ಒಳ್ಳೆಯ ಬಜೆಟ್ ಕೊಡುತ್ತೇನೆ. ಜೊತೆಗೆ ಬಜೆಟ್ ರೈತಪರವೂ ಇರಲಿದೆ ಎಂದು ಭರವಸೆ ನೀಡಿದ್ದಾರೆ.

English summary
CM Yediyurappa makes a significant statement on the state budget at Shikarimpur in Shimoga district, Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X