ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ: ಯಡಿಯೂರಪ್ಪ ಪತ್ರದಲ್ಲೇನಿದೆ?

|
Google Oneindia Kannada News

ಶಿವಮೊಗ್ಗ, ಏಪ್ರಿಲ್ 24: ''ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ಯಡಿಯೂರಪ್ಪ ಹೆಸರನ್ನು ಇಡುತ್ತಿರುವುದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕುರ್ಚಿ ಕಸರತ್ತಿನ ರಾಜಕಾರಣ'' ಎಂದು ಕಾಂಗ್ರೆಸ್ ದೂರಿದೆ. ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಸೂಕ್ತ ಎಂಬ ಚರ್ಚೆಯ ಪರ ವಿರೋಧ ವಾದ ಮುಂದುವರೆದಿರುವ ಸಂದರ್ಭದಲ್ಲೇ ಮಹತ್ವದ ತಿರುವು ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮಾಡಿರುವ ಘೋಷಣೆಗೆ ಪ್ರತಿಕ್ರಿಯಿಸಿದ್ದು, ಗೊಂದಲಕ್ಕೆ ತೆರೆಯಲು ಪತ್ರ ಬರೆದಿದ್ದಾರೆ. ಪತ್ರದಲ್ಲಿ ತಮ್ಮ ಹೆಸರು ಪರಿಗಣಿಸದಂತೆ ಕೋರಿದ್ದಾರೆ.

ಶಿವಮೊಗ್ಗದಲ್ಲಿ ಏಪ್ರಿಲ್ 20ರಂದು ನೂತನ ವಿಮಾನ ನಿಲ್ದಾಣದ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದರು. ಇದೇ ಡಿಸೆಂಬರ್ ತಿಂಗಳಲ್ಲಿ ನೂತನ ವಿಮಾನ ನಿಲ್ದಾಣವು ಉದ್ಘಾಟನೆಗೆ ಸಜ್ಜಾಗಲಿದೆ. ಎಲ್ಲಾ ಕಾಮಗಾರಿಗಳನ್ನು ಜೊತೆಯಾಗಿ ನಿರ್ವಹಿಸಿ ಲೋಕಾರ್ಪಣೆ ಮಾಡಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುವುದಾಗಿ ತಿಳಿಸಿದ್ದರು. ಕೇಂದ್ರ ವಿಮಾನಯಾನ ಸಚಿವರಿಗೆ ಪ್ರಸ್ತಾವನೆ ಕಳುಹಿಸಿ ಅನುಮೋದನೆ ಪಡೆದ ಕೂಡಲೇ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ಆದೇಶ ಪಡೆದುಕೊಳ್ಳುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದರು.

 Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮ; ಸಿಎಂ ಘೋಷಣೆ Shivamogga Airport: ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಹೆಸರು ಅಂತಿಮ; ಸಿಎಂ ಘೋಷಣೆ

ಮುಖ್ಯಮಂತ್ರಿಗಳ ಹೆಸರಿಗೆ ಯಡಿಯೂರಪ್ಪ ಬರೆದಿರುವ ಪತ್ರದ ಸಾರಾಂಶ ಹೀಗಿದೆ:

ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು

Yediyurappa request CM Basavaraj Bommai not to consider his name for Shivamogga Airport

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರಿಡುವುದಾಗಿ ತಾವು ಘೋಷಿಸಿರುತ್ತೀರಿ, ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಘ ಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರು; ಕಾಂಗ್ರೆಸ್ ಕೆಂಡಾಮಂಡಲ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಿಎಸ್ ವೈ ಹೆಸರು; ಕಾಂಗ್ರೆಸ್ ಕೆಂಡಾಮಂಡಲ

ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ ಅವರು ನೀಡಿರುವ ಕೊಡುಗೆಗೆ ಹೋಲಿಸಿದ್ದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು. ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.

Yediyurappa request CM Basavaraj Bommai not to consider his name for Shivamogga Airport

ಆದುದರಿಂದ ತಮ್ಮ ಈ ನಿರ್ಧಾರವನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕಾರಣ ಮಾದಬೇಕೆಂದು ಕೋರುತ್ತೇನೆ ಎಂದು ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

2006-07ರಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಪ್ರಾರಂಭಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಯೋಜನೆ ರೂಪಿಸಿದ್ದರು. 2020ರಲ್ಲಿ ಈ ಯೋಜನೆಗೆ ಅನುಮೋದನೆ ನೀಡಿ ಹಣ ಬಿಡುಗಡೆ ಮಾಡಿದ್ದಾರೆ. ಬೆಂಗಳೂರು ನಂತರ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ 3200 ಮೀಟರ್ ಉದ್ದದ ರನ್ ವೇ ಇರಲಿದೆ. ಏರ್ ಬಸ್ ಲ್ಯಾಂಡ್ ಆಗುವ ವ್ಯವಸ್ಥೆ ಆಗುತ್ತಿದೆ. ಅಂತರರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಲು ಎಲ್ಲ ಮೂಲಸೌಕರ್ಯಗಳನ್ನು ವ್ಯವಸ್ಥೆಗೊಳಿಸಲಾಗಿದೆ.

English summary
Former CM BS Yediyurappa writes a letter requesting CM Basavaraj Bommai not to consider his name for Shivamogga Airport. Bommai recently announced that proposed airport will be named after Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X