ಯಡಿಯೂರಪ್ಪ ರಾಜೀನಾಮೆ; ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್

ಶಿವಮೊಗ್ಗ, ಜುಲೈ 26; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿದ್ದು, ಶಿಕಾರಿಪುರದಲ್ಲಿ ನೀರವ ಮೌನ ಆವರಿಸಿದೆ.

ಯಡಿಯೂರಪ್ಪ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ. ಆದರೆ ಅವರು ರಾಜಕೀಯವಾಗಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದರು.

 Yediyurappa Resignation Self Motivated Bandh In Shikaripura

ಪ್ರಸ್ತುತ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದ ಶಾಸಕರು. ತಮ್ಮ ನೆಚ್ಚಿನ ನಾಯಕನ ರಾಜೀನಾಮೆ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಬಂದ್ ಮಾಡಿದ್ದಾರೆ.

ಯಡಿಯೂರಪ್ಪ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾದರೂ ಒಂದು ಬಾರಿಯೂ ಸಹ ಅಧಿಕಾರ ಪೂರ್ಣಗೊಳಿಸಿಲ್ಲ ಎಂಬುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಶಿಕಾರಿಪುರದ ಶಾಸಕರಾಗಿ, ಶಿವಮೊಗ್ಗದ ಸಂಸದರಾಗಿ ಯಡಿಯೂರಪ್ಪ ಕಾರ್ಯ ನಿರ್ವಹಣೆ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+