• search
  • Live TV
ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯಡಿಯೂರಪ್ಪ ರಾಜೀನಾಮೆ; ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತ ಬಂದ್

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಜುಲೈ 26; ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿದ್ದು, ಶಿಕಾರಿಪುರದಲ್ಲಿ ನೀರವ ಮೌನ ಆವರಿಸಿದೆ.

ಬಿಎಸ್‌ವೈ ರಾಜೀನಾಮೆ; ದೆಹಲಿಯಿಂದ ಬರಲಿದ್ದಾರೆ ಬಿಜೆಪಿ ವೀಕ್ಷಕರು ಬಿಎಸ್‌ವೈ ರಾಜೀನಾಮೆ; ದೆಹಲಿಯಿಂದ ಬರಲಿದ್ದಾರೆ ಬಿಜೆಪಿ ವೀಕ್ಷಕರು

ಯಡಿಯೂರಪ್ಪ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ. ಆದರೆ ಅವರು ರಾಜಕೀಯವಾಗಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದರು.

 ರಾಜೀನಾಮೆ ಸಲ್ಲಿಕೆ ನಂತರ ಯಡಿಯೂರಪ್ಪ ಆಡಿದ ಮೊದಲ ಮಾತು... ರಾಜೀನಾಮೆ ಸಲ್ಲಿಕೆ ನಂತರ ಯಡಿಯೂರಪ್ಪ ಆಡಿದ ಮೊದಲ ಮಾತು...

ಪ್ರಸ್ತುತ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದ ಶಾಸಕರು. ತಮ್ಮ ನೆಚ್ಚಿನ ನಾಯಕನ ರಾಜೀನಾಮೆ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಬಂದ್ ಮಾಡಿದ್ದಾರೆ.

 ಮುಂದಿನ ಸಿಎಂ ಘೋಷಣೆವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರಿಕೆ ಮುಂದಿನ ಸಿಎಂ ಘೋಷಣೆವರೆಗೂ ಹಂಗಾಮಿ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಮುಂದುವರಿಕೆ

ಯಡಿಯೂರಪ್ಪ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾದರೂ ಒಂದು ಬಾರಿಯೂ ಸಹ ಅಧಿಕಾರ ಪೂರ್ಣಗೊಳಿಸಿಲ್ಲ ಎಂಬುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಶಿಕಾರಿಪುರದ ಶಾಸಕರಾಗಿ, ಶಿವಮೊಗ್ಗದ ಸಂಸದರಾಗಿ ಯಡಿಯೂರಪ್ಪ ಕಾರ್ಯ ನಿರ್ವಹಣೆ ಮಾಡಿದ್ದಾರೆ.

English summary
A self-imposed bandh in Shikaripura on Monday after Yediyurappa resignation. Shops closed in Shikaripura home town of Yediyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X