ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿಕಾರಿಪುರದಲ್ಲಿ ಸಿಎಂ ಯಡಿಯೂರಪ್ಪ ಖಡಕ್ ಸೂಚನೆ!

|
Google Oneindia Kannada News

ಬೆಂಗಳೂರು, ಫೆ.14: ಈ ಹಣಕಾಸು ಸಾಲಿನಲ್ಲಿ ಅನುಮೋದನೆಗೊಂಡಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ, ಮಾರ್ಚ್ ಒಳಗಾಗಿ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೂಚನೆ ನೀಡಿದರು. ಭಾನುವಾರ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಕೆಡಿಪಿ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು.

ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಗುಣಮಟ್ಟದಲ್ಲಿ ಯಾವುದೇ ರಾಜಿ ಮಾಡದೆ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಆದೇಶ ಮಾಡಿದರು. ಜಿಲ್ಲೆಯಲ್ಲಿ ತೋಟಗಾರಿಕಾ ಬೆಳೆಗಳನ್ನು ಹೆಚ್ಚು ಬೆಳೆಯಲು ರೈತರಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ವರ್ಷ ತೋಟಗಾರಿಕಾ ಬೆಳೆಗಳ ಕ್ಷೇತ್ರ ಹೆಚ್ಚಳವಾಗಬೇಕು.

ರೈತರು ಮಿಶ್ರ ಬೆಳೆ ಬೆಳೆಯುವುದರಿಂದ ಹೆಚ್ಚಿನ ಆರ್ಥಿಕ ಲಾಭ ಪಡೆಯಲು ಸಾಧ್ಯವಿದೆ. ಒಂದೆರಡು ಎಕ್ರೆ ಜಮೀನಿನಲ್ಲಿ ಮಾವು, ಬಾಳೆ, ಶುಂಠಿ, ತೆಂಗು ಮೊದಲಾದ ಮಿಶ್ರ ಬೆಳೆಗಳನ್ನು ಬೆಳೆದು ಲಕ್ಷಾಂತರ ರೂ. ಲಾಭ ಪಡೆಯಲು ಸಾಧ್ಯವಿದೆ. ಆ ಬಗ್ಗೆ ಅಧಿಕಾರಿಗಳು ಸೂಕ್ತ ತಿಳಿವಳಿಕೆ ಕೊಟ್ಟು, ರೈತರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು ಎಂದರು.

ಹನಿ ನೀರಾವರಿಗೆ ಆದ್ಯತೆ

ಹನಿ ನೀರಾವರಿಗೆ ಆದ್ಯತೆ

ಹನಿ ನೀರಾವರಿಗೆ ಹೆಚ್ಚಿನ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಹನಿ ನೀರಾವರಿ ಸೌಲಭ್ಯಕ್ಕಾಗಿ ಬಾಕಿ ಇರುವ ಅರ್ಜಿಗಳ ಮಾಹಿತಿ ಒದಗಿಸಬೇಕು. ಈಗಾಗಲೇ ಹನಿ ನೀರಾವರಿ ಅಳವಡಿಸಿರುವ ರೈತರಿಗೆ ಸಬ್ಸಿಡಿ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ರೈತರಿಗೆ ಅನುಕೂಲವಾಗುವಂತೆ ತಾಲೂಕಿನಲ್ಲಿ ಹೆಚ್ಚುವರಿಯಾಗಿ ಎರಡು ಪಶು ವೈದ್ಯ ಆಸ್ಪತ್ರೆ ಆರಂಭಿಸಲು ಅನುಮೋದನೆ ನೀಡಲಾಗುವುದು ಎಂದರು.

ದುರುಪಯೋಗ ನಡೆದರೆ ಕಠಿಣಕ್ರಮ

ದುರುಪಯೋಗ ನಡೆದರೆ ಕಠಿಣಕ್ರಮ

ಈ ಬಾರಿ ಉತ್ತಮ ಮಳೆಯಾಗಿರುವ ಕಾರಣ ಎಲ್ಲಾ ಕೆರೆ ಕಟ್ಟೆಗಳು ತುಂಬಿವೆ. ಆದ್ದರಿಂದ ಕೆರೆ ಹೂಳು ತೆಗೆಯುವ ಕಾಮಗಾರಿಗಳನ್ನು ಸಧ್ಯಕ್ಕೆ ಕೈಗೆತ್ತಿಕೊಳ್ಳಬಾರದು. ಹೂಳೆತ್ತುವ ಕಾಮಗಾರಿಗಳಿಗೆ ಈಗಾಗಲೆ ಟೆಂಡರ್ ಆಗಿದ್ದರೂ, ನೀರು ಖಾಲಿಯಾದರೆ ಮಾತ್ರ ಕಾಮಗಾರಿ ಆರಂಭಿಸಿ. ಅನುದಾನ ದುರುಪಯೋಗಕ್ಕೆ ಯಾವುದೇ ಇಲಾಖೆಗಳು ಆಸ್ಪದ ನೀಡಬಾರದು ಎಂದು ಹೇಳಿದರು.

ಗಣಿಗಾರಿಕೆ ಓಕೆ ಎಂದ ಸಿಎಂ

ಗಣಿಗಾರಿಕೆ ಓಕೆ ಎಂದ ಸಿಎಂ

ನಿಯಮಾನುಸಾರ ಮರಳು ಮತ್ತು ಜಲ್ಲಿ ಸಾಗಾಟಕ್ಕೆ ಅಡ್ಡಿ ಉಂಟು ಮಾಡಬಾರದು. ಯಾವುದೇ ಕಾರಣಕ್ಕೂ ಮರಳು ಮತ್ತು ಜಲ್ಲಿ ಪೂರೈಕೆಗೆ ತೊಂದರೆಯಾಗಬಾರದು.

ಕಾನೂನುಬಾಹಿರವಾಗಿ ನಡೆಯುತ್ತಿರುವ ಚಟುವಟಿಕೆಗಳನ್ನು ಮಾತ್ರ ತಡೆಯಿರಿ. ಪರವಾನಿಗೆ ಪಡೆದು ನಡೆಯುತ್ತಿರುವ ಕಲ್ಲುಗಣಿ, ಕ್ರಷರ್ ಕಾರ್ಯ ನಿಲ್ಲಬಾರದು. ಅನುಮತಿಗಾಗಿ ಬಾಕಿ ಇರುವ ನಿರಪೇಕ್ಷಣಾ ಪತ್ರಗಳನ್ನು ತಕ್ಷಣ ನೀಡಬೇಕು ಎಂದು ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಅವರು ಸೂಚಿಸಿದರು.

ಜಲಜೀವನ ಮಿಷನ್ ಯೋಜನೆ

ಜಲಜೀವನ ಮಿಷನ್ ಯೋಜನೆ

ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಫಲಾನುಭವಿ ಮನೆಯವರು ನೀಡಬೇಕಾಗಿರುವ ಕಾಮಗಾರಿಯ ಶೇ.10 ರಷ್ಟು ಹಣವನ್ನು ಸರಕಾರದಿಂದ ನೇರವಾಗಿ ಪಾವತಿಸುವ ಕುರಿತು ಈ ಬಾರಿಯ ಬಜೆಟ್‌ನಲ್ಲಿ ಕ್ರಮ ಕೈಗೊಳ್ಳಲಾಗುವುದು. ಜಲಜೀವನ್ ಮಿಷನ್ ಅಡಿ ಮನೆ ಮನೆಗೆ ನೀರು ಪೂರೈಕೆ ಮಾಡುವ ಯೋಜನೆಯನ್ನು ತ್ವರಿತವಾಗಿ ಅನುಷ್ಟಾನಗೊಳಿಸಬೇಕು ಎಂದು ಹೇಳಿದರು. ಜೊತೆಗೆ ಜಿಲ್ಲೆಯಲ್ಲಿ ಎಲ್ಲಾ ಹಳ್ಳಿಗಳಲ್ಲೂ ಸ್ಮಶಾನ ಜಾಗ ಗುರುತಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಲೋಕಸಬಾ ಸದಸ್ಯ ಬಿ.ವೈ. ರಾಘವೇಂದ್ರ, ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ, ತಾ.ಪಂ ಅಧ್ಯಕ್ಷ ಸುರೇಶ್ ನಾಯ್ಕ್, ಜಿಲ್ಲಾಧಿಕಾರಿ ಶಿವಕುಮಾರ್, ಸಿಇಒ ವೈಶಾಲಿ, ಎಸ್ಪಿ ಶಾಂತರಾಜು ಉಪಸ್ಥಿತರಿದ್ದರು.

English summary
B.S. Yediyurappa instructed that all the works approved in this financial department should be completed by March, without any compromise on quality. The progress review of various departments was held at the Shikaripura Taluk KDP meeting in Shimoga district on Sunday. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X