ಶಿವಮೊಗ್ಗದಲ್ಲಿ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಿದ ಯುವ ಕಾಂಗ್ರೆಸ್ ಕಾರ್ಯಕರ್ತರು
ಶಿವಮೊಗ್ಗ, ಜನವರಿ 17: ಕರ್ನಾಟಕ ರಾಜ್ಯದಲ್ಲಿ ಸುಲಲಿತವಾಗಿ ನಡೆಯುತ್ತಿರುವ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಅಮಿಷ ಒಡ್ಡಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ನಡೆಸಲು ಹೊರಟಿದೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿ.ಎಸ್.ಯಡಿಯೂರಪ್ಪ ಅವರ ಶಿವಮೊಗ್ಗದ ವಿನೋಬನಗರ ನಿವಾಸಕ್ಕೆ ಮುತ್ತಿಗೆ ಹಾಕಿದರು.
ಯಡಿಯೂರಪ್ಪ ಹಾಗೂ ಅವರ ಮಕ್ಕಳು ಕುದುರೆ ವ್ಯಾಪಾರದಲ್ಲಿ ತಲ್ಲೀನರಾಗಿದ್ದಾರೆ. ಯುಡಿಯೂರಪ್ಪನವರು ಬುದ್ಧಿ ಭ್ರಮಣೆ ಆಗಿರುವಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮೆಗ್ಗಾನ್ ಆಸ್ಪತ್ರೆಯ OPD ಚೀಟಿ ಸಮೇತ ಬಿಎಸ್ ವೈ ಮನೆಗೆ ಮುತ್ತಿಗೆ ಹಾಕಿದರು. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಬಂಧಿಸಲಾಯಿತು.

ಪ್ರತಿಭಟನೆ ನೇತೃತ್ವವನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ವಹಿಸಿದ್ದರು. ಸದಸ್ಯರಾದ ಎಚ್.ಸಿ. ಯೋಗೀಶ್ ಕೆ.ರಂಗನಾಥ್ , ಹೆಚ್.ಪಿ.ಗಿರೀಶ್ , ನಿತಿನ್ ರಾವ್, ಮಯೂರ ದರ್ಶನ್ , ಆರ್.ಕಿರಣ್ ,ಟಿವಿ ರಂಜಿತ್ , ಬಿ ಲೋಕೇಶ್, ಶ್ರೀಧರ್ ರಾಹುಲ್, ಭದ್ರಾವತಿ ಲೋಕೇಶ್ , ಡಿ.ಆರ್ ಗಿರೀಶ್ , ಮೊಹಮ್ಮದ್ ಇಯಾತ್, ಉಡುಗಣಿ , ದಯಾನಂದ್ ಗಾಮ , ಗಜೇಂದ್ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.












Click it and Unblock the Notifications