ವಿಡಿಯೋ; ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ

ಶಿವಮೊಗ್ಗ, ಫೆಬ್ರವರಿ 17; ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿ ಮತ್ತು ವಿಧಾನಸಭೆಯಲ್ಲಿ ನಾಲಗೆ ಹರಿಬಿಟ್ಟ ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಗುರುವಾರ ಜಿಲ್ಲಾ ಬಿಜೆಪಿ ಕಚೇರಿ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಾಕಲು ಮುಂದಾದ ಹಿನ್ನಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು.

ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು. 'ಹರಕು ನಾಲಗೆ ಈಶ್ವರಪ್ಪ' ಎಂದು ಬ್ಯಾನರ್ ಹಿಡಿದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದರು.

Youth Congress Protest Against Minister KS Eshwarappa

ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು.

ಕಾಂಗ್ರೆಸ್ ಮುಖಂಡ ರಂಗನಾಥ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಿರೀಶ್, ಪ್ರಮುಖರಾದ ಪ್ರವೀಣ್, ಲೋಕೇಶ್, ನಿತಿನ್, ಕುಮರೇಶ್ ಸೇರಿದಂತೆ ಹಲವರನ್ನು ಪೊಲೀಸರನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+