ಶಿವಮೊಗ್ಗ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ; ಕಾರಣವೇನು?
ಶಿವಮೊಗ್ಗ, ಆಗಸ್ಟ್ 05: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರರವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಬಂಧನಕ್ಕೀಡಾಗಿದ್ದಾರೆ.
ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ದಿನಬಳಕೆ ವಸ್ತಗಳ ಏರಿಕೆ ಖಂಡಿಸಿ ದೇಶಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸಂಸದರ ಮನೆಗಳಿಗೆ ಮುತ್ತಿಗೆ ಹಾಕುತ್ತಿದ್ದಾರೆ. ಅದರಂತೆ ಶಿವಮೊಗ್ಗದ ವಿನೋಬನಗರದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೂ ಮುತ್ತಿಗೆ ಹಾಕಲು ಯತ್ನಿಸಲಾಯಿತು.
ಮುತ್ತಿಗೆ ಹಾಕಲು ಕಾರಣವೇನು?
"ಎನ್‌ಡಿಎ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ರೈತರು, ಕಾರ್ಮಿಕರು, ಜನಸಾಮಾನ್ಯರ ವಿರೋಧಿಯಾಗಿದೆ. ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲು ಬಿಜೆಪಿ ಸಂಸದರುಗಳು ಮೌನವಾಗಿದ್ದಾರೆ. ಇನ್ನು ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಕೋವಿಡ್ ನಿಯಂತ್ರಣ ಮತ್ತು ಲಸಿಕೆ ಪೂರೈಕೆಯಲ್ಲೂ ಸರ್ಕಾರ ವಿಫಲವಾಗಿದೆ. ಇದ್ಯಾವ ವಿಚಾರದಲ್ಲೂ ಸಂಸದರು ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲಾಗುತ್ತಿದೆ,'' ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು.

ಚೌಕಿ ಬಳಿ ಪ್ರತಿಭಟನೆ
ಸಂಸದ ಬಿ.ವೈ. ರಾಘವೇಂದ್ರ ಮೌನ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೋಬನಗರ ಪೊಲೀಸ್ ಚೌಕಿ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರ ಮತ್ತು ಸಂಸದರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಂಸದರ ಮನೆಯತ್ತ ಹೆಜ್ಜೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಪೊಲೀಸರು ಮತ್ತು ಯುವ ಕಾಂಗ್ರೆಸ್ ಕಾಯರ್ಕತರ ಮಧ್ಯೆ ನೂಕಾಟ, ತಳ್ಳಾಟ ಉಂಟಾಯಿತು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲ ಉಂಟಾಗಿತ್ತು.
ಸಂಸದರ ಮನೆ ದಾರಿಯುದ್ದಕ್ಕೂ ಬ್ಯಾರಿಕೇಡ್
ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ವಿನೋಬನಗರದಲ್ಲಿರುವ ಸಂಸದ ರಾಘವೇಂದ್ರ ಮನೆಗೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸಂಸದರ ಮನೆಗೆ ಸಂಪರ್ಕ ಕಲ್ಪಿಸುವ ದಾರಿಯುದ್ದಕ್ಕೂ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರು. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಪರಿಶೀಲನೆ ನಡೆಸಿದರು. ನಂತರ ಪರಿಸ್ಥಿತಿ ತಿಳಿಯಾಯಿತು.

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಪ್ರಮುಖರಾದ ರಂಗನಾಥ್, ರವಿಕುಮಾರ್, ಕಾರ್ಪೊರೇಟರ್ ಯೋಗೇಶ್, ಪ್ರವೀಣ್ ಕುಮಾರ್, ಲೋಕೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಧಾರವಾಡದಲ್ಲೂ ಕಾಂಗ್ರೆಸ್ ಪ್ರತಿಭಟನೆ
ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.
ಧಾರವಾಡ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತೆಯರು, ತಕ್ಷಣ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಪೆಟ್ರೋಲ್ ದರ ನೂರರ ಗಡಿ ದಾಟಿದೆ, ಅದೇ ರೀತಿ ಅಡುಗೆ ಅನಿಲ ದರ ಸಹ 800 ಗಡಿ ದಾಟಿದೆ. ಸರ್ಕಾರ ರಚನೆಯಾಗುವ ಮೊದಲು ಇದೇ ಬಿಜೆಪಿ ಸರ್ಕಾರಗಳು ಜನರಿಗೆ ಸುಳ್ಳು ಬರವಸೆ ನೀಡಿ, ಈಗ ಬೆಲೆ ಹೆಚ್ಚಳ ಮಾಡಿವೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡೆ ಶಾಂತಮ್ಮ ಗುಜ್ಜಳ ಆರೋಪಿಸಿದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications