ಶಿವಮೊಗ್ಗ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಶಿವಮೊಗ್ಗ ಸಂಸದ ರಾಘವೇಂದ್ರ ಮನೆಗೆ ಮುತ್ತಿಗೆ ಯತ್ನ; ಕಾರಣವೇನು?

By ಶಿವಮೊಗ್ಗ ಪ್ರತಿನಿಧಿ
|
Google Oneindia Kannada News

ಶಿವಮೊಗ್ಗ, ಆಗಸ್ಟ್ 05: ಶಿವಮೊಗ್ಗ ಲೋಕಸಭಾ ಸಂಸದ ಬಿ.ವೈ. ರಾಘವೇಂದ್ರರವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ಬಂಧನಕ್ಕೀಡಾಗಿದ್ದಾರೆ.

ಪೆಟ್ರೋಲ್, ಡೀಸೆಲ್, ಗ್ಯಾಸ್ ಹಾಗೂ ದಿನಬಳಕೆ ವಸ್ತಗಳ ಏರಿಕೆ ಖಂಡಿಸಿ ದೇಶಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸಂಸದರ ಮನೆಗಳಿಗೆ ಮುತ್ತಿಗೆ ಹಾಕುತ್ತಿದ್ದಾರೆ. ಅದರಂತೆ ಶಿವಮೊಗ್ಗದ ವಿನೋಬನಗರದಲ್ಲಿರುವ ಸಂಸದ ಬಿ.ವೈ. ರಾಘವೇಂದ್ರ ನಿವಾಸಕ್ಕೂ ಮುತ್ತಿಗೆ ಹಾಕಲು ಯತ್ನಿಸಲಾಯಿತು.

ಭದ್ರಾ ಜಲಾಶಯದ 4 ಕ್ರಸ್ಟ್‌ಗೇಟ್ ಓಪನ್; ವಾರಾಂತ್ಯದಲ್ಲಿ ಸಿಗಂದೂರು ದೇವಿ ದರ್ಶನವಿಲ್ಲಭದ್ರಾ ಜಲಾಶಯದ 4 ಕ್ರಸ್ಟ್‌ಗೇಟ್ ಓಪನ್; ವಾರಾಂತ್ಯದಲ್ಲಿ ಸಿಗಂದೂರು ದೇವಿ ದರ್ಶನವಿಲ್ಲ

ಮುತ್ತಿಗೆ ಹಾಕಲು ಕಾರಣವೇನು?

"ಎನ್‌ಡಿಎ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ರೈತರು, ಕಾರ್ಮಿಕರು, ಜನಸಾಮಾನ್ಯರ ವಿರೋಧಿಯಾಗಿದೆ. ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತಲು ಬಿಜೆಪಿ ಸಂಸದರುಗಳು ಮೌನವಾಗಿದ್ದಾರೆ. ಇನ್ನು ಪೆಟ್ರೋಲ್, ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯು ಏರಿಕೆಯಾಗಿದೆ. ಕೋವಿಡ್ ನಿಯಂತ್ರಣ ಮತ್ತು ಲಸಿಕೆ ಪೂರೈಕೆಯಲ್ಲೂ ಸರ್ಕಾರ ವಿಫಲವಾಗಿದೆ. ಇದ್ಯಾವ ವಿಚಾರದಲ್ಲೂ ಸಂಸದರು ರಾಜ್ಯದ ಪರವಾಗಿ ಸಂಸತ್ತಿನಲ್ಲಿ ಮಾತನಾಡುತ್ತಿಲ್ಲ. ಹಾಗಾಗಿ ಸಂಸದರ ಮನೆಗಳಿಗೆ ಮುತ್ತಿಗೆ ಹಾಕಲಾಗುತ್ತಿದೆ,'' ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು.

 Shivamogga: Youth Congress Protest Infront Of MP BY Raghavendra House For Petrol Price Hike

ಚೌಕಿ ಬಳಿ ಪ್ರತಿಭಟನೆ

ಸಂಸದ ಬಿ.ವೈ. ರಾಘವೇಂದ್ರ ಮೌನ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ವಿನೋಬನಗರ ಪೊಲೀಸ್ ಚೌಕಿ ಬಳಿ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಸರ್ಕಾರ ಮತ್ತು ಸಂಸದರ ವಿರುದ್ಧ ಘೋಷಣೆ ಕೂಗಿದ ಕಾರ್ಯಕರ್ತರು, ಕೇಂದ್ರ, ರಾಜ್ಯ ಸರ್ಕಾರಗಳ ಜನ ವಿರೋಧಿ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸಂಸದರ ಮನೆಯತ್ತ ಹೆಜ್ಜೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಈ ವೇಳೆ ಪೊಲೀಸರು ಮತ್ತು ಯುವ ಕಾಂಗ್ರೆಸ್ ಕಾಯರ್ಕತರ ಮಧ್ಯೆ ನೂಕಾಟ, ತಳ್ಳಾಟ ಉಂಟಾಯಿತು. ಇದರಿಂದ ಕೆಲಕಾಲ ಸ್ಥಳದಲ್ಲಿ ಗೊಂದಲ ಉಂಟಾಗಿತ್ತು.

ಸಂಸದರ ಮನೆ ದಾರಿಯುದ್ದಕ್ಕೂ ಬ್ಯಾರಿಕೇಡ್

ಯುವ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ ಹಿನ್ನೆಲೆ ವಿನೋಬನಗರದಲ್ಲಿರುವ ಸಂಸದ ರಾಘವೇಂದ್ರ ಮನೆಗೆ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಸಂಸದರ ಮನೆಗೆ ಸಂಪರ್ಕ ಕಲ್ಪಿಸುವ ದಾರಿಯುದ್ದಕ್ಕೂ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದ್ ಮಾಡಿದ್ದರು. ಈ ಮಾರ್ಗದಲ್ಲಿ ಸಂಚರಿಸುವ ವಾಹನಗಳ ಪರಿಶೀಲನೆ ನಡೆಸಿದರು. ನಂತರ ಪರಿಸ್ಥಿತಿ ತಿಳಿಯಾಯಿತು.

 Shivamogga: Youth Congress Protest Infront Of MP BY Raghavendra House For Petrol Price Hike

ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಪಿ. ಗಿರೀಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್, ಪ್ರಮುಖರಾದ ರಂಗನಾಥ್, ರವಿಕುಮಾರ್, ಕಾರ್ಪೊರೇಟರ್ ಯೋಗೇಶ್, ಪ್ರವೀಣ್ ಕುಮಾರ್, ಲೋಕೇಶ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಧಾರವಾಡದಲ್ಲೂ ಕಾಂಗ್ರೆಸ್ ಪ್ರತಿಭಟನೆ

ದೇಶದಲ್ಲಿ ಅಡುಗೆ ಅನಿಲ, ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ಧಾರವಾಡ ನಗರದ ಅಂಬೇಡ್ಕರ್ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತೆಯರು, ತಕ್ಷಣ ಅಡುಗೆ ಅನಿಲ ಹಾಗೂ ಪೆಟ್ರೋಲ್ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

 Shivamogga: Youth Congress Protest Infront Of MP BY Raghavendra House For Petrol Price Hike

ಪೆಟ್ರೋಲ್ ದರ ನೂರರ ಗಡಿ ದಾಟಿದೆ, ಅದೇ ರೀತಿ ಅಡುಗೆ ಅನಿಲ ದರ ಸಹ 800 ಗಡಿ ದಾಟಿದೆ. ಸರ್ಕಾರ ರಚನೆಯಾಗುವ ಮೊದಲು ಇದೇ ಬಿಜೆಪಿ ಸರ್ಕಾರಗಳು ಜನರಿಗೆ ಸುಳ್ಳು ಬರವಸೆ ನೀಡಿ, ಈಗ ಬೆಲೆ ಹೆಚ್ಚಳ ಮಾಡಿವೆ ಎಂದು ಕಾಂಗ್ರೆಸ್ ಮಹಿಳಾ ಮುಖಂಡೆ ಶಾಂತಮ್ಮ ಗುಜ್ಜಳ ಆರೋಪಿಸಿದರು.

English summary
Youth Congress activists arrested for attempting to besiege Shivamogga Lok Sabha MP BY Raghavendra's house in Shivamogga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X