ಶಿವಮೊಗ್ಗ : ಯುವಕ ಕೊಲೆ, ಪಶು ವೈದ್ಯರಿಗೆ ಚಾಕು ಇರಿತ

ಶಿವಮೊಗ್ಗ, ಫೆ. 21 : ಶಿವಮೊಗ್ಗ ನಗರದಲ್ಲಿ ಶುಕ್ರವಾರ ರಾತ್ರಿ ಕರ್ತವ್ಯ ಮುಗಿಸಿ ಬರುತ್ತಿದ್ದ ಪಶು ವೈದ್ಯರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಶನಿವಾರ ಬೆಳಗ್ಗೆ ಯುವಕನನ್ನು ಕೊಲೆ ಮಾಡಲಾಗಿದೆ. ಈ ಘಟನೆಗೂ ನಗರದಲ್ಲಿ ನಡೆಯುತ್ತಿರುವ ಗಲಾಟೆಗೂ ಸಂಬಂಧವಿದೆಯೇ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಶನಿವಾರ ಬೆಳಗ್ಗೆ ಪದ್ಮಾ ಟಾಕೀಸ್ ಹಿಂಭಾಗ ಯುವಕನ ಶವ ಪತ್ತೆಯಾಗಿದೆ. ರಾಡ್‌ನಿಂದ ತಲೆಗೆ ಹೊಡೆದು ಯುವಕನನ್ನು ಕೊಲೆ ಮಾಡಲಾಗಿದೆ. ಮೃತಪಟ್ಟ ಯುವಕನನ್ನು ಮಲ್ಲಿಕಾರ್ಜುನನಗರದ ನಿವಾಸಿ ಮಂಜುನಾಥ್ (32) ಎಂದು ಗುರುತಿಸಲಾಗಿದೆ. [ಇಂದು ಶಿವಮೊಗ್ಗ ಬಂದ್]

Shivamogga

ಪಶುವೈದ್ಯರಿಗೆ ಚಾಕು ಇರಿತ : ಶುಕ್ರವಾರ ರಾತ್ರಿ ಕರ್ತವ್ಯ ಮುಗಿಸಿ ಬರುತ್ತಿದ್ದ ಪಶುವೈದ್ಯ ಜಯಕಾಂತ್ ಅವರ ಮೇಲೆ ಚಾಕುವಿನಿಂದ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ತಾವರೆ ಚಟ್ನಹಳ್ಳಿ ಬಳಿ ಈ ಘಟನೆ ನಡೆದಿದೆ. ಜಯಕಾಂತ್ ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. [ಗುರುವಾರ ಶಿವಮೊಗ್ಗದಲ್ಲಿ ನಡೆದದ್ದೇನು?]

ನಗರದಲ್ಲಿ ನಡೆಯುತ್ತಿರುವ ಗಲಾಟೆಗಳಿಗೂ ಈ ಇರಿತ ಮತ್ತು ಕೊಲೆ ಪ್ರಕರಣಕ್ಕೂ ಸಂಬಂಧವಿದೆಯೇ? ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶನಿವಾರ ವಿಶ್ವ ಹಿಂದೂ ಪರಿಷತ್ ಶಿವಮೊಗ್ಗ ಬಂದ್‌ಗೆ ಕರೆ ನೀಡಿದ್ದು, ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಗುರುವಾರ ಸಂಜೆ ಪಾಪ್ಯುಲರ್ ಫ್ರಂಟ್ ಮೆರವಣಿಗೆ ನಡೆಸುತ್ತಿದ್ದ ವೇಳೆ ಅವಹೇಳನಕಾರಿ ಘೋಷಣೆ ಕೂಗಿದ್ದರು. ಆ ನಂತರದಲ್ಲಿ ನಗರದಲ್ಲಿ ಗಲಾಟೆ ನಡೆಯುತ್ತಿದ್ದು ಫೆ.25ರ ತನಕ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+