ಶಿವಮೊಗ್ಗ; ಯುವನಿಧಿಗೆ ಚಾಲನೆ, 1 ಲಕ್ಷಕ್ಕೂ ಹೆಚ್ಚಿನ ಜನ ಸೇರುವ ನಿರೀಕ್ಷೆ

ಶಿವಮೊಗ್ಗ, ಡಿಸೆಂಬರ್ 28; ಕರ್ನಾಟಕ ಕಾಂಗ್ರೆಸ್ ಸರ್ಕಾರದ 5ನೇ ಗ್ಯಾರಂಟಿ 'ಯುವನಿಧಿ' ನೋಂದಣಿಗೆ ಈಗಾಗಲೇ ಚಾಲನೆ ಸಿಕ್ಕಿದೆ. ಜನವರಿ 12ರಂದು ಈ ಯೋಜನೆಗೆ ಶಿವಮೊಗ್ಗ ನಗರದಲ್ಲಿ ಚಾಲನೆ ನೀಡಲಾಗುತ್ತದೆ.

ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ 'ಯುವನಿಧಿ' ಕಾರ್ಯಕ್ರಮದ ಉದ್ಘಾಟನೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವ ತಯಾರಿ ಸಭೆಯನ್ನು ನಡೆಸಿದರು.

Yuva Nidhi Scheme Inauguration At Shivamogga Preparations

ಈ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್‍ಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.

ಸುಮಾರು 1 ಲಕ್ಷ ಜನರು ಸೇರುವ ನಿರೀಕ್ಷೆ; ಸಭೆಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, "ಜನವರಿ 12ರಂದು ನಗರದ ಫ್ರೀಡಂ ಪಾರ್ಕ್ ಆವರಣದಲ್ಲಿ ಯುವನಿಧಿ ಸರ್ಕಾರದ 5ನೇ ಮಹತ್ವಾಕಾಂಕ್ಷಿ ಯೋಜನೆಯ ಅನುಷ್ಠಾನ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಸಚಿವ ಸಂಪುಟದ ಸದಸ್ಯರ ಉಪಸ್ಥಿತಿಯಲ್ಲಿ ಉದ್ಘಾಟಿಸಲಿದ್ದಾರೆ" ಎಂದರು.

"ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತಿನಂತೆ ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಈಗಾಗಲೇ ಅನುಷ್ಠಾನಗೊಳಿಸಲಾಗಿದೆ. 5ನೇ ಗ್ಯಾರಂಟಿ ಯೋಜನೆಯನ್ನು ಜನವರಿ 12ರಂದು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ" ಎಂದು ಸಚಿವರು ಹೇಳಿದರು.

"ಪ್ರಗತಿ ಎಂಬುದು ಒಂದು ನಿರಂತರ ಪ್ರಕ್ರಿಯೆ. ಈ ಹಾದಿಯಲ್ಲಿ ಯಾರೂ ಅವಕಾಶ ವಂಚಿತರಾಗಬಾರದು. ಸಮಾಜದ ಪ್ರತಿಯೊಬ್ಬರಿಗೂ ಪ್ರಗತಿಯ ಫಲಗಳು ದೊರೆಯಬೇಕು ಹಾಗೂ ಅಭಿವೃದ್ಧಿಯ ಪಾಲುದಾರರಾಗಬೇಕೆಂಬ ಆಶಯ ನಮ್ಮದಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆಗಳು ಸಫಲವಾಗಿವೆ" ಎಂದು ಬಣ್ಣಿಸಿದರು.

ಯುವನಿಧಿ ಯೋಜನೆಯ ರಾಜ್ಯ ಮಟ್ಟದ ಅನುಷ್ಠಾನ ಕಾರ್ಯಕ್ರಮಕ್ಕೆ ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಜನರು ಸೇರುವ ನಿರೀಕ್ಷೆ ಇದೆ. ಇದರ ವ್ಯವಸ್ಥಿತ ಅನುಷ್ಟಾನ, ವೇದಿಕೆ ನಿರ್ಮಾಣ ಮತ್ತು ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೆ ಯಾವುದೇ ತೊಂದರೆಗದಂತೆ ಕ್ರಮ ವಹಿಸಬೇಕು. ವಾಹನ ನಿಲುಗಡೆಗೆ ಪ್ರತ್ಯೇಕ ವ್ಯವಸ್ಥೆ ಮತ್ತಿತರ ವಿಷಯಗಳ ಕುರಿತು ಸೂಕ್ಷ್ಮವಾಗಿ ಗಮನಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು, ವಿಶೇಷವಾಗಿ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರಣಗಳಿಂದಾಗಿ ಅಲ್ಲಲ್ಲಿ ದೂರುಗಳು ಕೇಳಿ ಬರುತ್ತಿವೆ. ಇಂತಹ ಯಾವುದೇ ದೂರುಗಳು ಬಾರದಂತೆ, ಈ ಯೋಜನೆಯಡಿ ಸೌಲಭ್ಯ ಪಡೆಯದೇ ಬಾಕಿ ಉಳಿದಿರುವ ಅರ್ಹರನ್ನು ಗುರುತಿಸಿ, ಯೋಜನೆಯ ವ್ಯಾಪ್ತಿಗೊಳಪಡಿಸುವಲ್ಲಿ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.

'ಶಕ್ತಿ' ಯೋಜನೆಯಡಿ ಜಿಲ್ಲೆಯ ಅನೇಕ ಕಡೆಗಳಿಂದ ಹೆಚ್ಚುವರಿ ಬಸ್‍ಗಳಿಗಾಗಿ ಬೇಡಿಕೆ ಇದ್ದು, ಸುಮಾರು 250ಕ್ಕೂ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಇವುಗಳನ್ನು ಹಂತಹಂತವಾಗಿ ಒದಗಿಸುವಲ್ಲಿ ವೈಯಕ್ತಿಕವಾಗಿ ಗಮನಹರಿಸಲಾಗುವುದು. ಅಗತ್ಯವಿರುವ ಬಸ್‍ಗಳಿಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಾರಿಗೆ ನಿಗಮದ ಜಿಲ್ಲಾ ಅಧಿಕಾರಿಗಳಿಗೆ ಸಚಿವ ಮಧು ಬಂಗಾರಪ್ಪ ನಿರ್ದೇಶನ ನೀಡಿದರು.

ಶಿವಮೊಗ್ಗ ಜಿಲ್ಲೆಯಲ್ಲಿ 'ಯುವನಿಧಿ' ಯೋಜನೆಯಡಿ ಸೌಲಭ್ಯ ಪಡೆದುಕೊಳ್ಳಬಯಸುವ ನಿರುದ್ಯೋಗಿ ಯುವಕರು ತಮ್ಮ ಪ್ರಸ್ತಾವನೆಯನ್ನು ಇಂದಿನಿಂದಲೇ ಆನ್‍ಲೈನ್ ಮೂಲಕ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಹೆಚ್ಚು ಸಂಖ್ಯೆಯ ಅಭ್ಯರ್ಥಿಗಳು ಈ ಯೋಜನೆಯ ಲಾಭ ಪಡೆದುಕೊಳ್ಳುವಂತೆ ಅವರು ಕರೆ ನೀಡಿದರು.

ಅರ್ಜಿ ಸಲ್ಲಿಕೆ ಹೇಗೆ?: ಈಗಾಗಲೇ 'ಯುವನಿಧಿ' ಯೋಜನೆಯ ನೋಂದಣಿಗೆ ಚಾಲನೆ ಸಿಕ್ಕಿದೆ. ಆನ್‍ಲೈನ್ ಮೂಲಕ ಯೋಜನೆ ಫಲಾನುಭವಿಗಳಾಗಲು ಅರ್ಜಿ ಸಲ್ಲಿಕೆ ಮಾಡಬಹುದು. 2022-23ನೇ ಸಾಲಿನಲ್ಲಿ ಯಾವುದೇ ಡಿಪ್ಲೊಮಾ ಹಾಗೂ ಪದವಿ ಉತ್ತೀರ್ಣರಾಗಿ ಆರು ತಿಂಗಳಲ್ಲಿ ಉದ್ಯೋಗ ಸಿಗದವರಿಗೆ ಈ ಯೋಜನೆ ಅನ್ವಯ.

ಯೋಜನೆಯಡಿ ಅಭ್ಯರ್ಥಿಗಳಿಗೆ ಮುಂದಿನ 24 ತಿಂಗಳು ಪದವೀಧರರಿಗೆ ಮಾಸಿಕ ರೂ. 3000 ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ಮಾಸಿಕ ರೂ. 1500 ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಉದ್ಯೋಗ ಸಿಕ್ಕಿದ ಕೂಡಲೇ ಈ ಸೌಲಭ್ಯ ಸ್ಥಗಿತಗೊಳ್ಳಲಿದೆ.

ಅರ್ಜಿ ಸಲ್ಲಿಸುವವರು ಕರ್ನಾಟಕದ ನಿವಾಸಿಯಾಗಿರಬೇಕು. 2023ರಲ್ಲಿ ಪದವಿ/ ಡಿಪ್ಲೊಮಾ ಉತ್ತೀರ್ಣರಾಗಿರಬೇಕು. ಉತ್ತೀರ್ಣರಾಗಿ 180 ದಿನಗಳಾದರೂ ಉದ್ಯೋಗ ಸಿಗದೆ ನಿರುದ್ಯೋಗಿಯಾಗಿರಬೇಕು. ಅರ್ಜಿ ಸಲ್ಲಿಸಿದ ದಿನದಿಂದ ಹುದ್ದೆ ಸಿಗುವವರೆಗೂ ಅಥವಾ 2 ವರ್ಷ ಗರಿಷ್ಠ ಅವಧಿವರೆಗೆ ಮಾತ್ರ ನಿರುದ್ಯೋಗ ಭತ್ಯೆ ಸಿಗಲಿದೆ.

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್‍ ಅಗತ್ಯ. ಅರ್ಜಿಯನ್ನು ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‍ನಲ್ಲಿ ಯುವನಿಧಿ ಯೋಜನೆ ಸೇವೆ ಆಯ್ಕೆ ಮಾಡಿಕೊಂಡು ಸಲ್ಲಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+