ಯುವನಿಧಿ ಕಾರ್ಯಕ್ರಮ; ಶಿವಮೊಗ್ಗದ ವಾಹನ ಸವಾರರೇ ಗಮನಿಸಿ
ಶಿವಮೊಗ್ಗ, ಜನವರಿ 11: ಕರ್ನಾಟಕ ಸರ್ಕಾರದ 5ನೇ ಗ್ಯಾರಂಟಿ ಯೋಜನೆ 'ಯುವನಿಧಿ'ಗೆ ಶಿವಮೊಗ್ಗದಲ್ಲಿ ಜನವರಿ 12ರ ಶುಕ್ರವಾರ ಚಾಲನೆ ದೊರೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಸಚಿವರು, ಶಾಸಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‍ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಗಣ್ಯರು ಆಗಮಿಸುತ್ತಿರುವುದರಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ನಿಲುಗಡೆ ಹಾಗೂ ತಾತ್ಕಾಲಿಕವಾಗಿ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್. ಆದೇಶಿಸಿದ್ದಾರೆ.

ನಗರದಲ್ಲಿ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಜನವರಿ 12ರ ಬೆಳಗ್ಗೆ 6 ರಿಂದ ಸಂಜೆ 6.30ರ ತನಕ ಜಾರಿಯಲ್ಲಿರುತ್ತದೆ. ಶಿವಮೊಗ್ಗದಲ್ಲಿ ಶುಕ್ರವಾರ ಸಂಚಾರ ನಡೆಸುವ ಜನರು ಈ ಬಗ್ಗೆ ಮಾಹಿತಿ ತಿಳಿಯಿರಿ.
ಸಂಚಾರ ಮಾರ್ಗ ಬದಲಾವಣೆಯ ವಿವರ
* ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್, ಗೋಪಾಳ ಸರ್ಕಲ್, ನ್ಯೂಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.
* ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್, ಗೋಪಾಳ ಸರ್ಕಲ್, ಆಲ್ಕೊಳ ಮಾರ್ಗವಾಗಿ ಸಾಗರ ರಸ್ತೆ ಬಂದು ಸೇರುವುದು.
* ಶಿವಮೊಗ್ಗದಿಂದ ಶಿಕಾರಿಪುರ, ನ್ಯಾಮತಿ, ಸೊರಬ ಕಡೆ ಹೋಗುವ ಎಲ್ಲಾ ವಾಹನಗಳು ಆಯನೂರು-ಹಾರ್ನಳ್ಳಿ-ಸವಳಂಗ ಮಾರ್ಗವಾಗಿ ಚಲಿಸುವುದು. ಶಿಕಾರಿಪುರ-ನ್ಯಾಮತಿ-ಸೊರಬ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಎಲ್ಲಾ ವಾಹನಗಳು ಸವಳಂಗ-ಹಾರ್ನಳ್ಳಿ-ಆಯನೂರು ಮಾರ್ಗವಾಗಿ ಶಿವಮೊಗ್ಗಕ್ಕೆ ಬರುವುದು.
* ಶಿವಮೊಗ್ಗ ನಗರದಿಂದ ಅಬ್ಬಲಗೆರೆ-ಕೊಮ್ಮನಾಳ್-ಕುಂಚೇನಹಳ್ಳಿ ತಾಂಡಗಳಿಗೆ ಹೋಗುವ ಎಲ್ಲಾ ವಾಹನಗಳು ರಾಗಿಗುಡ್ಡ ಕುವೆಂಪು ನಗರದ ಮುಖಾಂತರ ಚಲಿಸುವುದು. ಅಬ್ಬಲಗೆರೆ, ಕೊಮ್ಮನಾಳ್, ಕುಂಚೇನಹಳ್ಳಿ ತಾಂಡಗಳಿಂದ ಶಿವಮೊಗ್ಗ ನಗರಕ್ಕೆ ಬರುವ ಎಲ್ಲಾ ವಾಹನಗಳು ಕುವೆಂಪು ನಗರ, ರಾಗಿಗುಡ್ಡ, ಸಂಗೊಳ್ಳಿ ರಾಯಣ್ಣ ಸರ್ಕಲ್ ಮುಖಾಂತರ ಚಲಿಸುವುದು.
ವಾಹನ ನಿಲುಗಡೆ ನಿಷೇಧದ ಸ್ಥಳಗಳು
* ಆಲ್ಕೊಳ ಸರ್ಕಲ್‍ನಿಂದ ಪೊಲೀಸ್ ಚೌಕಿ ಮಾರ್ಗವಾಗಿ ಉಷಾ ಸರ್ಕಲ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಹೆಲಿಪ್ಯಾಡ್ ಸರ್ಕಲ್‍ನಿಂದ ಜೈಲ್ ಸರ್ಕಲ್‍ವರೆಗೆ ಹಾಗೂ ಜೈಲ್ ಸರ್ಕಲ್‍ನಿಂದ ಲಕ್ಷ್ಮೀ ಟಾಕೀಸ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
* ಎಂ. ಆರ್. ಎಸ್ ಸರ್ಕಲ್ ಬೈಪಾಸ್ ರಸ್ತೆ ಸಂದೇಶ್ ಮೋಟಾರ್ ಸರ್ಕಲ್‍ನಿಂದ ಅಶೋಕ ಸರ್ಕಲ್ ಮೂಲಕ ಹೆಲಿಪ್ಯಾಡ್ ಮಾರ್ಗವಾಗಿ ವಿನೋಬನಗರ ಕೆಳದಿ ಚೆನ್ನಮ್ಮ ರಸ್ತೆ ಸೈಕಲೋತ್ಸವ ಸರ್ಕಲ್‍ನಿಂದ ವಿನೋಬನಗರ ಕೆ.ಇ.ಬಿ ಆಫೀಸ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
* ರಾಜ್‍ಕುಮಾರ್ ಸರ್ಕಲ್‍ನಿಂದ ಮೇದಾರಿ ಕೇರಿ ರಸ್ತೆ ಬೊಮ್ಮನಕಟ್ಟೆ ರೈಲ್ವೆ ಗೇಟ್‍ವರೆಗೆ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಪೊಲೀಸ್ ಚೌಕಿಯಿಂದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿ ಶನೇಶ್ವರ ದೇವಸ್ಥಾನ ರಸ್ತೆ ಮಾರ್ಗವಾಗಿ ಬೊಮ್ಮನಕಟ್ಟೆ ರೈಲ್ವೆ ಗೇಟ್‍ಗೆ ಹೋಗುವ ರಸ್ತೆಯ ಎರಡೂ ಬದಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಕಾರ್ಯಕ್ರಮಕ್ಕೆ ಆಗಮಿಸಲಿರುವ ವಾಹನಗಳ ಮಾರ್ಗ, ಪಾರ್ಕಿಂಗ್; ತೀರ್ಥಹಳ್ಳಿ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ನ್ಯೂಮಂಡ್ಲಿ ಎಡಕ್ಕೆ ತಿರುಗಿ ಗೋಪಾಳ ಸರ್ಕಲ್, ಆಲ್ಕೊಳ ಸರ್ಕಲ್ ಬಲಕ್ಕೆ ತಿರುಗಿ ಎ.ಪಿ.ಎಂ.ಸಿ ಒಳಭಾಗಕ್ಕೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಒಳಭಾಗದಲ್ಲಿ ಪಾರ್ಕಿಂಗ್ ಮಾಡುವುದು.
ಸಾಗರ, ಹೊಸನಗರ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಆಲ್ಕೊಳ ಸರ್ಕಲ್, ಸಾಗರ ರಸ್ತೆ, ಆಲ್ಕೊಳ ಸರ್ಕಲ್ ಪೊಲೀಸ್ ಚೌಕಿಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಮತ್ತು ಸೋಮಿನಕೊಪ್ಪ ಆದರ್ಶನಗರ ಲೇಔಟ್‍ನಲ್ಲಿ ಪಾರ್ಕಿಂಗ್ ಮಾಡುವುದು.
ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಬಸವನಗಂಗೂರು ಬೊಮ್ಮನಕಟ್ಟೆ ಮಾರ್ಗವಾಗಿ ಬೊಮ್ಮನಕಟ್ಟೆಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಬೊಮ್ಮನಕಟ್ಟೆ ಎಸ್.ಎಲ್.ಕೆ ಲೇಔಟ್‍ನಲ್ಲಿ ಪಾರ್ಕಿಂಗ್ ಮಾಡುವುದು.
ಹೊನ್ನಾಳಿ, ಹರಿಹರ, ದಾವಣಗೆರೆ, ಹಾವೇರಿ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಸವಳಂಗ ಬಸವನಗಂಗೂರು ಬೊಮ್ಮನಕಟ್ಟೆ ಮಾರ್ಗವಾಗಿ ಬೊಮ್ಮನಕಟ್ಟೆಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಬೊಮ್ಮನಕಟ್ಟೆ ಎಸ್.ಎಲ್.ಕೆ ಲೇಔಟ್‍ನಲ್ಲಿ ಪಾರ್ಕಿಂಗ್ ಮಾಡುವುದು.
ಭದ್ರಾವತಿ, ಚಿಕ್ಕಮಗಳೂರು, ಎನ್. ಆರ್. ಪುರ, ಕೊಪ್ಪ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್ ಬೈಪಾಸ್ ರಸ್ತೆ ಸಂದೇಶ್ ಮೋಟರ್ಸ್ ಸರ್ಕಲ್ ನ್ಯೂಮಂಡ್ಲಿ ಸರ್ಕಲ್ ಗೋಪಾಳ ಸರ್ಕಲ್ ಆಲ್ಕೊಳ ಸರ್ಕಲ್ ಬಲಕ್ಕೆ ಎ.ಪಿ.ಎಂ.ಸಿ ಒಳಭಾಗಕ್ಕೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ಎ.ಪಿ.ಎಂ.ಸಿ ಒಳಭಾಗದಲ್ಲಿ ಪಾರ್ಕಿಂಗ್ ಮಾಡುವುದು.
ಹೊಳೆಹೊನ್ನೂರು, ಚನ್ನಗಿರಿ, ಚಿತ್ರದುರ್ಗದ ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಹೊಳೆಹೊನ್ನೂರು ಸರ್ಕಲ್ ಶಂಕರಮಠ ಸರ್ಕಲ್ ಕೆ.ಇ.ಬಿ ಸರ್ಕಲ್ ರೈಲ್ವೆ ನಿಲ್ದಾಣದ ರಸ್ತೆ ಉಷಾ ಸರ್ಕಲ್‍ಗೆ ಬಂದು ಸಾರ್ವಜನಿಕರನ್ನು ಇಳಿಸಿದ ನಂತರ ಪಾರ್ಕಿಂಗ್ ಸ್ಥಳ ಗುರುತಿಸಿದ ನೆಹರು ಕ್ರೀಡಾಂಗಣ ಕುವೆಂಪು ರಂಗಮಂದಿರ ಎನ್.ಇ.ಎಸ್ ಮೈದಾನ ಶೇಷಾದ್ರಿಪುರಂ ಗೂಡ್ಸ್ ಶೇಡ್ ಸೈನ್ಸ್ ಮೈದಾನದಲ್ಲಿ ಪಾರ್ಕಿಂಗ್ ಮಾಡುವುದು.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications