ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಬೆದರಿಕೆ ಕರೆ
ಶಿರಸಿ, ಫೆಬ್ರವರಿ 18: ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆಗೆ ಬೆದರಿಕೆ ಕರೆಯೊಂದು ಬಂದಿದ್ದು ಈ ಕುರಿತು ಶಿರಸಿಯ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಅನಂತ್ ಕುಮಾರ್ ಹೆಗಡೆಯವರು ಹಲವು ವಿವಾದಾತ್ಮಕ ಹೇಳಿಕೆಗಳನ್ನು ನೀಡು ಕೆಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇದೇ ಮೊದಲಲ್ಲ ಈ ಹಿಂದೆಯೂ ಕೂಡ ಅವರಿಗೆ ಸಾಕಷ್ಟು ಬೆದರಿಕೆ ಕರೆಗಳು ಬಂದಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹೆಗಡೆಯವರು ಊರಿನಲ್ಲಿ ಇಲ್ಲದಿರುವಾಗ ಭಾನುವಾರ ಕರೆ ಬಂದಿದ್ದು ಅವರ ಪತ್ನಿ ಕರೆ ಸ್ವೀಕರಿಸಿದ್ದಾರೆ, ಆಗ ಜೀವಬೆದರಿಕೆ ಹಾಕಿದ್ದಾರೆ. ಬಳಿಕ ಅವರು ಹೆಗಡೆಯವರ ಆಪ್ತ ಸಹಾಯಕ ಸುರೇಶ್ ಶೆಟ್ಟಿ ಅವರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಬಳಿಕ ಸುರೇಶ್ ಶೆಟ್ಟಿಯವರು ಶಿರಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.











Click it and Unblock the Notifications