ಸಂಸದ ಹೆಗಡೆಗೆ ಮತ್ತೆ ಜೀವ ಬೆದರಿಕೆ: ಆಪ್ತ ಸಹಾಯಕನಿಂದ ದೂರು
ಶಿರಸಿ , ಏಪ್ರಿಲ್ 07; ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆಗೆ ಮತ್ತೆ ಜೀವ ಬೆದರಿಕೆ ಕರೆ ಬಂದಿದೆ. ಉರ್ದು ಮಿಶ್ರಿತ ಹಿಂದಿ ಭಾಷೆಯಲ್ಲಿ ಕರೆ ಮಾಡಿದ ಅನಾಮಧೇಯ ವ್ಯಕ್ತಿಯೋರ್ವ ಜೀವ ಬೆದರಿಕೆ ಹಾಕಿದ್ದು, ಈ ಬಗ್ಗೆ ಸಂಸದರ ಆಪ್ತ ಕಾರ್ಯದರ್ಶಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಏಪ್ರಿಲ್ 5ರ ಮುಂಜಾನೆ ಎರಡು ಘಂಟೆ ವೇಳೆಗೆ ಸಂಸದರ ಮನೆಯ ಲ್ಯಾಂಡ್ ಲೈನ್‌ಗೆ ಅನಾಮಧೇಯ ವ್ಯಕ್ತಿಯೋರ್ವ ಕರೆ ಮಾಡಿದ್ದಾನೆ. ಮೊದಲು ರಿಂಗ್ ಮಾಡಿ ಕಟ್ ಮಾಡಿದ್ದು, ನಂತರ ಕರೆಯನ್ನ ಸ್ವತಃ ಸಂಸದರೇ ಸ್ವೀಕರಿಸಿದ್ದರು.
ಈ ಸಂದರ್ಭದಲ್ಲಿ ಕರೆ ಮಾಡಿದ ಅನಾಮಧೇಯ ವ್ಯಕ್ತಿ, ನೀನು ಎಂಪಿ ಅನಂತಕುಮಾರ್ ಹೆಗಡೆ ಅಲ್ವಾ? ನೀನು ಈ ಬಾರಿ ಏನು ಮಾಡುತ್ತೀಯಾ? ಹಿಂದಿನ ಬಾರಿ ಫೋನ್ ಮಾಡಿದಾಗ ಪೊಲೀಸರಿಗೆ ದೂರು ನೀಡಿದ್ದೀಯಾ. ಪತ್ರಿಕೆಗಳಲ್ಲಿ ಸುದ್ದಿ ಸಹ ಆಗಿತ್ತು. ಈಗ ನಿನ್ನನ್ನು ಏನು ಮಾಡುತ್ತೇನೆ ನೋಡು. ನಿನ್ನನ್ನು ಸುಮ್ಮನೇ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ.

ಸುಮಾರು ಎರಡು ನಿಮಿಷಗಳ ಕಾಲ ಮಾತನಾಡಿದ್ದು, ಅದರ ನಂತರ ಕೆಲವು ಮಾತುಗಳು ಸ್ಪಷ್ಟವಾಗಿ ಕೇಳಿಸದೇ ಫೋನ್ ಖಡಿತಗೊಂಡಿದೆ. ಈ ಬಗ್ಗೆ ಸಂಸದರ ಆಪ್ತ ಕಾರ್ಯದರ್ಶಿ ಸುರೇಶ್ ಶೆಟ್ಟಿ ಮಾರುಕಟ್ಟೆ ಠಾಣೆಗೆ ಸಂಸದರ ಪರವಾಗಿ ದೂರನ್ನು ನೀಡಿದ್ದು, ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ.
ಈ ಹಿಂದೆ ಸಹ ಕರೆ ಬಂದಿತ್ತು; ಅನಂತಕುಮಾರ್ ಹೆಗಡೆಗೆ ಜೀವ ಬೆದರಿಕೆ ಕರೆಗಳು ಬರುತ್ತಿರುವುದು ಇದು ಮೊದಲ ಬಾರಿಯಲ್ಲ. ಈ ಹಿಂದೆ ಸಹ ಹಲವು ಬಾರಿ ಕರೆಗಳು ಬಂದಿದ್ದು, ಸಂಸದರ ಆಪ್ತ ಸಹಾಯಕ ಸುರೇಶ್ ಶೆಟ್ಟಿ ಶಿರಸಿ ಮಾರುಕಟ್ಟೆ ಪೊಲೀಸ್ ಠಾಣೆಗೆ ದೂರನ್ನು ನೀಡಿದ್ದರು.
ಅಲ್ಲದೇ ಒಮ್ಮೆ ಅನಾಮಧೇಯ ಬೆದರಿಕೆ ಪತ್ರ ಸಹ ಬಂದಿದ್ದು, ಆಗ ಸಹ ದೂರು ದಾಖಲಿಸಲಾಗಿತ್ತು. ಇಂಟರ್‌ನೆಟ್ ಕರೆ ಅಥವಾ ವಿದೇಶಿ ನಂಬರ್‌ನಿಂದ ಕರೆ ಬರುತ್ತಿದ್ದು, ಈ ಬಗ್ಗೆ ಪೊಲೀಸ್ ಇಲಾಖೆ ಕೇವಲ ದೂರು ದಾಖಲಿಸಿಕೊಳ್ಳುವುದನ್ನು ಮಾತ್ರ ಮಾಡದೇ ತನಿಖೆಯನ್ನು ಮಾಡಿ, ಕರೆ ಮಾಡಿದವರ ಬಂಧನವನ್ನು ಮಾಡಬೇಕಾಗಿದೆ.
ಸಂಸದರಿಗೆ ಹಲವು ಬೆದರಿಕೆ ಕರೆ ಬರುತ್ತಿದ್ದರೂ ಪೊಲೀಸರು ಆರೋಪಿಗಳನ್ನು ಹಿಡಿಯುತ್ತಿಲ್ಲ. ಪ್ರಕರಣವನ್ನು ಪೊಲೀಸರು ಗಂಭೀರವಾಗಿ ತೆಗೆದುಕೊಳ್ಳಬೇಕು ಎನ್ನುವ ಅಭಿಪ್ರಾಯ ಸಾರ್ವಜನಿಕರಿಂದ ಕೇಳಿಬಂದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications