ಶಿರಸಿ ಬಿಜೆಪಿ ಕಾರ್ಯಕರ್ತರಿಂದ ವಿಜಯಾಚರಣೆ ಇಲ್ಲ
ಶಿರಸಿ, ಡಿಸೆಂಬರ್ 18: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿ ಸ್ಪಷ್ಟ ಬಹುಮತದತ್ತ ಹೆಜ್ಜೆ ಇಟ್ಟಿರುವುದರಿಂದ ಸಂತೋಷಗೊಂಡಿರುವ ಬಿಜೆಪಿ ಕಾರ್ಯಕರ್ತರು ರಾಜ್ಯದೆಲ್ಲೆಡೆ ಸಂಭ್ರಮ ಆಚರಿಸುತ್ತಿದ್ದಾರೆ ಆದರೆ ಶಿರಸಿ ಬಿಜೆಪಿ ಕಾರ್ಯಕತರು ಮಾತ್ರ ವಿಜಯೋತ್ಸವ ಆಚರಿಸುತ್ತಿಲ್ಲ.
ಹೌದು, ಬಿಜೆಪಿ ಭದ್ರಕೋಟೆ ಎನಿಸಿಕೊಂಡಿರುವ ಕರಾವಳಿಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆ ಮಾಡಲಾಗುತ್ತಿಲ್ಲ, ಪರೇಶ್ ಮೇಸ್ತ ಸಾವು ಆ ನಂತರದ ಗಲಭೆಗಳಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಕೇಸುಗಳನ್ನು ಹಾಕಿರುವುದರಿಂದ ಬೇಸರಗೊಂಡಿರುವ ಶಿರಸಿ ಬಿಜೆಪಿ ಕಾರ್ಯಕರ್ತರು ಗುಜರಾತ್, ಹಿಮಾಚಲ ಪ್ರದೇಶ ಚುನಾವಣಾ ವಿಜಯವನ್ನು ಸಂಭ್ರಮಿಸದಿರಲು ನಿರ್ಧರಿಸಿದ್ದಾರೆ.

ಈ ವಿಷಯವನ್ನು ಸ್ಪಷ್ಟಪಡಿಸಿದ ಬಿಜೆಪಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು 'ಪರೇಶ ಮೇಸ್ತ ಸಾವಿನ ನೋವು, ಶಿರಸಿ ಗಲಭೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿರುವ ಬೇಸರದಿಂದ ವಿಜಯೋತ್ಸವ ಆಚರಿಸುತ್ತಿಲ್ಲ' ಎಂದು ಹೇಳಿದ್ದಾರೆ.
ಆದರೆ ಬಿಜೆಪಿ ಪರವಾಗಿ ಮತ್ತೆ ಜನಾಭ್ರಿಪ್ರಾಯ ಬಂದಿರುವ ಕಾರಣ ಪಟಾಕಿ, ಸಿಹಿ ಹಂಚಿಕೆ ಮಾಡುವ ಬದಲಿಗೆ ಇಲ್ಲಿನ ಮಾರಿಕಾಂಬಾ ದೇವಾಲಯಕ್ಕೆ ತೆರಳಿ ಪಕ್ಷದ ಕಾರ್ಯಕರ್ತರು ಸರಳವಾಗಿ ಪೂಜೆ ಸಲ್ಲಿಸಿದ್ದಾರೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆ ಮತಎಣಿಕೆಯಲ್ಲಿ ಉತ್ತಮ ಮುನ್ನಡೆಗಳಿಸಿಕೊಂಡುವ ಬಿಜೆಪಿ ಸ್ಪಷ್ಟ ಬಹುಮತ ಪಡೆಯುತ್ತ ಮುನ್ನಡೆದಿದೆ.












Click it and Unblock the Notifications