ಶಿರಸಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಹೇಳಿಕೆ ಏನು?

|
Google Oneindia Kannada News

ಶಿರಸಿ, ಮಾರ್ಚ್ 1: "ಕೊರೊನಾ ಸೋಂಕು ಇರುವ ರಾಜ್ಯದಿಂದ ಬರುವವರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿಕೊಂಡು ಬರಲು ಸೂಚಿಸಲಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಆಗೋ ಸ್ಥಿತಿ ಇನ್ನೂ ಬಂದಿಲ್ಲ. ಜನರು ಜವಾಬ್ದಾರಿಯುತವಾಗಿ ಈ ಸ್ಥಿತಿ ಬರದಂತೆ ನೋಡಿಕೊಳ್ಳಬೇಕು" ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಶಿರಸಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸೋಮವಾರ ಆಯೋಜಿಸಿದ್ದ 45 ವರ್ಷ ಮೇಲ್ಪಟ್ಟ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಹಾಗೂ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ರಾಮನಗರ: 3ನೇ ಹಂತದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆರಾಮನಗರ: 3ನೇ ಹಂತದ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾಲನೆ

"ಕೋವಿಡ್ ಎರಡನೇ ಅಲೆ ಹೆಚ್ಚಾಗಿ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಮಾಡುವಂಥ ಪರಿಸ್ಥಿತಿ ಸೃಷ್ಟಿಯಾಗಿಲ್ಲ. ಹೀಗಾಗಿ ಪ್ರತಿಯೊಬ್ಬ ನಾಗರಿಕರೂ ಎರಡನೇ ಅಲೆ ಬಗ್ಗೆ ಜಾಗೃತರಾಗಿರಬೇಕು" ಎಂದರು.

Health Minister Sudhakar Reaction About Again Lockdown In The Karnataka

"ಏಮ್ಸ್ ಸಂಸ್ಥೆಗೆ ಸೋಮವಾರ ಭೇಟಿ ನೀಡಿ ಪ್ರಧಾನಿ ಮೋದಿಯವರೇ ಖುದ್ದಾಗಿ ಲಸಿಕೆ ತೆಗೆದುಕೊಂಡಿದ್ದು, ದೇಶದ ಜನರಿಗೆ ಪ್ರೇರಣೆಯಾಗಿದ್ದಾರೆ. ಜೊತೆಗೆ ರಾಜ್ಯದ ಮುಖ್ಯಮಂತ್ರಿಗಳು ಕೂಡಾ ಎರಡು‌ ಹಂತದ ಲಸಿಕೆ ವಿತರಣೆಗೆ ಚಾಲನೆ ನೀಡಿದ್ದಾರೆ. ದೇಶದಲ್ಲಿ ಈಗಾಗಲೇ ಮೂರನೇ ಹಂತದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ" ಎಂದು ತಿಳಿಸಿದರು.

"ಕೊರೊನಾ ಲಸಿಕೆ ಪಡೆಯಲು 60 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರು ಹಾಗೂ 45 ವರ್ಷ ಮೇಲ್ಪಟ್ಟ ಜನರು ಸ್ವಯಂಪ್ರೇರಿತರಾಗಿ ಬರುತ್ತಿದ್ದಾರೆ. ಇದಕ್ಕಾಗಿ 270ಕ್ಕೂ ಹೆಚ್ಚು ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ. 50 ಲಕ್ಷ ‌ಜನರು ಹಿರಿಯ ನಾಗರಿಕರಿದ್ದು, 16 ಲಕ್ಷ ಜನರು ಇತರ ರೋಗದ ಸಮಸ್ಯೆ ಇರುವವರು ಇದ್ದಾರೆ ಎಂದು ಅಂದಾಜಿಸಲಾಗಿದೆ" ಎಂದು ಮಾಹಿತಿ ನೀಡಿದರು.

ಲಸಿಕೆ ವಿತರಣೆ ಹಾಗೂ ತೆಗೆದುಕೊಳ್ಳುವ ಹಂತದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳಿಲ್ಲ. ಜನರು ಆನ್‌ಲೈನ್ ಮೂಲಕ ಹೆಸರು ದಾಖಲು ಮಾಡಿಕೊಳ್ಳಬಹುದು. ಅನಕ್ಷರಸ್ಥರು ಸಹ ನೇರವಾಗಿ ಹತ್ತಿರದ ಪ್ರಾಥಮಿಕ ಕೇಂದ್ರಕ್ಕೆ ಭೇಟಿ ನೀಡಿ ಲಸಿಕೆ ಪಡೆಯಬಹುದು ಎಂದರು.

Health Minister Sudhakar Reaction About Again Lockdown In The Karnataka

ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ, ಜೀವ ವೈವಿಧ್ಯ ಮಂಡಳಿ ಅಧ್ಯಕ್ಷ ಅನಂತ ಹೆಗಡೆ ಅಶೀಸರ್, ತಾಲ್ಲೂಕು ಪಂಚಾಯತ ಅಧ್ಯಕ್ಷೆ ಲಲಿತಾ ತಾಳೇರಮನೆ, ನಗರಸಭೆ ಅಧ್ಯಕ್ಷ ಗಣಪತಿ ನಾಯ್ಕ, ಬೆಳಗಾವಿ ವಿಭಾಗೀಯ ನಿರ್ದೇಶಕ ಡಾ.ವಿಜಯಕುಮಾರ್ ಬಿರಾದಾರ, ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ, ಜಿಲ್ಲಾ ಪಂಚಾಯತ್ ಸಿಇಒ ಪ್ರಿಯಾಂಗಾ ಎಂ., ಶಿರಸಿ ಉಪ ವಿಭಾಗಾಧಿಕಾರಿ ಆಕೃತಿ ಬನ್ಸಾಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರದ್ ನಾಯಕ, ಶಿರಸಿ ತಾಲೂಕಾ ಆರೋಗ್ಯಾಧಿಕಾರಿ ಡಾ.ವಿನಾಯಕ ಭಟ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

English summary
Again Lockdown situation in the state has not created. every citizens should be aware of Covid second wave, Health Minister Dr K Sudhakar said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X