ಶಿರಸಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್‌ಎಸ್‌ಎಲ್‌ಸಿ ಫಲಿತಾಂಶ: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಶಿರಸಿಯ ಸನ್ನಿಧಿ ಹೆಗಡೆ

By ಕಾರವಾರ ಪ್ರತಿನಿಧಿ
|
Google Oneindia Kannada News

ಶಿರಸಿ, ಆಗಸ್ಟ್ 10: ಕೊರೊನಾ ವೈರಸ್ ಆತಂಕದ ನಡುವೆಯೇ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಉತ್ತರ ಕನ್ನಡ ಜಿಲ್ಲೆ ಶಿರಸಿಯ ಸನ್ನಿಧಿ ಎಂಬ ವಿದ್ಯಾರ್ಥಿನಿಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದವರಲ್ಲಿ ಒಬ್ಬರಾಗಿದ್ದಾರೆ.

Recommended Video

SSLC Results : Chikkaballapura ರಾಜ್ಯಕ್ಕೆ ಫರ್ಸ್ಟ್ | Oneindia Kannada

ಶಿರಸಿಯ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಸನ್ನಿಧಿ ಹೆಗಡೆ, 625ಕ್ಕೆ 625 ಅಂಕ ಪಡೆದಿದ್ದಾರೆ. ಯಾವುದೇ ವಿಶೇಷ ಟ್ಯೂಷನ್ ಪಡೆಯದೇ, ಶಿಕ್ಷಕರು ಹಾಗೂ ಪಾಲಕರ ಮಾರ್ಗದರ್ಶನದಿಂದ ಉತ್ತಮವಾಗಿ ಅಭ್ಯಾಸ ಮಾಡುತ್ತಿದ್ದಳು. ಶಿರಸಿಯ ಪ್ರಗತಿ ನಗರದ ನಿವಾಸಿಯಾಗಿರುವ ಈಕೆಯ ತಂದೆ ಡಾ.ಮಹಾಬಲೇಶ್ವರ ಹೆಗಡೆ ಕಾರವಾರದಲ್ಲಿ ಜಿಲ್ಲಾ ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ವೈದ್ಯಾಧಿಕಾರಿಯಾಗಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಅಧಿಕ ಅಂಕ ಪಡೆದವರ ವಿವರಎಸ್‌ಎಸ್‌ಎಲ್‌ಸಿ ಪರೀಕ್ಷೆ: ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳಲ್ಲಿ ಅಧಿಕ ಅಂಕ ಪಡೆದವರ ವಿವರ

ಕೋವಿಡ್ ನಿಂದಾಗಿ ಕಾರವಾರದಲ್ಲಿ ಕರ್ತವ್ಯ ನಿರತರಾಗಿರುವ ಅವರು, ಮಗಳು ಪ್ರಥಮ ಸ್ಥಾನ ಬಂದಿದ್ದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಶಾಲೆಯಿಂದಲೂ ಉತ್ತಮ ಮಾರ್ಗದರ್ಶನ ಸಿಕ್ಕಿರುವುದಕ್ಕಾಗಿ ಪ್ರಥಮ ಸ್ಥಾನ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದ್ದಾರೆ.

 Karnataka SSLC Results 2020: Sannidhi Hegde From Sirsi- State Topper From Uttara Kannada

ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡಿಕೊಂಡು ಬಂದಿರುವ ಶಿರಸಿಯ ಮಾರಿಕಾಂಬಾ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯಾಗಿರುವ ಈಕೆ ಹಲವು ಚಟುವಟಿಕೆಗಳಲ್ಲಿ ಸಾಧನೆಗೈದಿದ್ದಾಳೆ.

ಎಸ್‌ಎಸ್‌ಎಲ್‌ಸಿ; 501 ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶಎಸ್‌ಎಸ್‌ಎಲ್‌ಸಿ; 501 ಶಾಲೆಗಳಲ್ಲಿ ಶೇ 100ರಷ್ಟು ಫಲಿತಾಂಶ

ಇನ್ನು 625ಕ್ಕೆ 624 ಅಂಕ ಗಳಿಸಿರುವ ಸಿದ್ದಾಪುರದ ಪ್ರಶಾಂತಿ ಇಂಗ್ಲಿಷ್ ಮೀಡಿಯಮ್ ಶಾಲೆಯ ಅನಿರುದ್ಧ್ ಸುರೇಶ್ ಗುಟ್ಟಿಕರ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ.

English summary
Karnataka SSLC Results 2020: Sannidhi, a student from Sirsi, Uttara Kannada district, is one of the State Topper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X