• search
For sirsi Updates
Allow Notification  

  ಚಿನ್ಮಯ ರಾವ್ ಅವರ 'ಗುರುಸಂಹಿತಾ' ವರ್ಲ್ಡ್ ರೆಕಾರ್ಡ್ಸ್ ಪಟ್ಟಿಗೆ

  |

  ಸಾಗರ, ಫೆಬ್ರವರಿ 14 : ಇತ್ತೀಚೆಗಷ್ಟೇ ವಿಶ್ವದ ಅತಿ ಹೆಚ್ಚು ಅವಧಿಯ ಆಡಿಯೋ ಡಿವಿಡಿ ಎಂದು ಹಲವಾರು ವಿಶ್ವ ದಾಖಲೆಗಳ ಪಟ್ಟಿಗೆ ಸೇರ್ಪಡೆಯಾಗಿದ್ದ ಹೊನಗೋಡಿನ ಚಿನ್ಮಯ ಎಂ.ರಾವ್ ಅವರ ಗಾಯನದ ಶ್ರೀ ಗುರುಸಂಹಿತಾ ಎಂಬ ಆಡಿಯೋ ಡಿ.ವಿ.ಡಿ ಈಗ ತೆಲಂಗಾಣದ ಹೈ ರೇಂಜ್ ಬುಕ್ ಆಫ್ ವರ್ಡ್ ರೆಕಾರ್ಡ್ಸ್ ಪಟ್ಟಿಗೆ ಸೇರ್ಪಡೆಗೊಂಡಿದೆ.

  ಚಿನ್ಮಯ ಎಂ.ರಾವ್ ಅತಿ ಹೆಚ್ಚು ಅಂದರೆ 6621 ಶ್ಲೋಕಗಳನ್ನು ಒಂದು ಧ್ವನಿಮುದ್ರಿಕೆಗಾಗಿ ಒಂದೇ ಗಾಯಕ ಹಾಡಿರುವ ವಿಶ್ವದ ಪ್ರಪ್ರಥಮ ಗಾಯಕ ಎಂದು ಪ್ರಶಸ್ತಿ ಪತ್ರದಲ್ಲಿ ನಮೂದಿಸಲಾಗಿದೆ. ಒಟ್ಟು 28 ಗಂಟೆ 8 ನಿಮಿಷ 38 ಸೆಕೆಂಡ್ ಧ್ವನಿಮುದ್ರಣವಾಗಿರುವ ಈ ಡಿ.ವಿ.ಡಿಯನ್ನು 2017ರ ಮೇ ತಿಂಗಳ 24 ರಂದು ಹರಿಹರದ ನಾರಾಯಣಾಶ್ರಮದಲ್ಲಿ ದತ್ತ ಪರಂಪರೆಯ ಶ್ರೀ ಪ್ರಭುದತ್ ಮಹರಾಜ್ ಲೋಕಾರ್ಪಣೆಗೊಳಿಸಿದ್ದರು.

  ಶ್ರೀ ಗುರುಸಂಹಿತಾ ಎಂಬ ಹೆಸರಿನ ಶ್ರೀ ವಾಸುದೇವಾನಂದ ಸರಸ್ವತಿ ವಿರಚಿತ ಪವಿತ್ರ ಗ್ರಂಥದಲ್ಲಿನ ೫೨ ಅಧ್ಯಾಯಗಳಲ್ಲಿರುವ ಅನುಷ್ಟುಪ್ ಛಂದಸ್ಸಿನ ಒಟ್ಟು 6,621 ಸಂಸ್ಕೃತ ಶ್ಲೋಕಗಳನ್ನು ಚಿನ್ಮಯ ಎಂ.ರಾವ್ ತಮ್ಮ ಹೊನಗೋಡಿನ ಮನೆಯಲ್ಲಿರುವ ಪುಟ್ಟ ಸ್ಟುಡಿಯೋದಲ್ಲಿ ತಾವೇ ಧ್ವನಿಮುದ್ರಣ ಮಾಡಿಕೊಂಡು ಇದರ ಸಂಕಲನದ ಕೆಲಸವನ್ನೂ ತಾವೇ ಮಾಡಿಕೊಂಡು ಅಂತಿಮ ಹಂತದ ಮಾಸ್ಟರ್ ಡಿ.ವಿ.ಡಿ ಸಿದ್ಧಪಡಿಸಿ ಬಿಡುಗಡೆ ಮಾಡಿದ್ದಾರೆ. ಚಿನ್ಮಯ ಎಂ.ರಾವ್ 2010 ರಿಂದ 2013 ರವರೆಗೆ 3 ವರ್ಷ ಈ ಅಡಕ ಮುದ್ರಿಕೆಯ ಧ್ವನಿಮುದ್ರಣಕ್ಕಾಗಿ ಒಟ್ಟು2,400 ಗಂಟೆಗಳ ಕಾಲ ಕೆಲಸ ಮಾಡಿದ್ದಾರೆ.

  ಮೂಲತಹ ಮರಾಠಿ ಭಾಷೆಯ ಗಂಗಾಧರ ಸರಸ್ವತಿ ಎಂಬ ಕವಿಯಿಂದ ರಚಿಸಲ್ಪಟ್ಟ ಶ್ರೀ ಗುರುಚರಿತ್ರಾ ಎಂಬ ಈ ಪವಿತ್ರ ಗ್ರಂಥ ಇಂದಿಗೂ ಮಹಾರಾಷ್ಟ್ರದಾದ್ಯಂತ ಪ್ರಚಲಿತವಾಗಿದೆ. ಶ್ರೀ ಗುರುಚರಿತ್ರೆಯು, ಶ್ರೀ ದತ್ತಾತ್ರೇಯರ, ಶ್ರೀಪಾದಶ್ರೀವಲ್ಲಭರ, ಶ್ರೀ ನೃಸಿಂಹ ಸರಸ್ವತಿಗಳ ಅದ್ಭುತವೂ ಪರಮಾನಂದವೂ ಆದ ದಿವ್ಯ ಚರಿತ್ರೆ. ಶ್ರೀ ವಾಸುದೇವಾನಂದ ಸರಸ್ವತಿಗಳು ದತ್ತನ ಪ್ರೇರಣೆಯಿಂದ ಸಂಸ್ಕೃತ ಭಾಷೆಗೆ ಇದನ್ನು ಅನುವಾದಿಸಿದ್ದಾರೆ. ಚಿತ್ರದುರ್ಗದ ಹಿರಿಯ ಜ್ಯೋತಿಷಿ ಎಸ್ ಶ್ರೀಧರ ಮೂರ್ತಿ ನಿರ್ಮಾಣದ ಈ ಆಡಿಯೋ ಡಿ.ವಿ.ಡಿಯನ್ನು ಸ್ವರಮೇಧಾ ಇಂಟರ್ ನ್ಯಾಷನಲ್ ಮ್ಯೂಸಿಕ್ ಅಕಾಡೆಮಿ ಹೊರತಂದಿದೆ.

  ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

  ಇನ್ನಷ್ಟು ಶಿರಸಿ ಸುದ್ದಿಗಳುView All

  English summary
  Singer Chinmay Rao gets Telangana High range book of world records recognition for his DVD called Gurusamhita. Earlier he made world record of longest Audio DVD.

  Oneindia ಬ್ರೇಕಿಂಗ್ ನ್ಯೂಸ್,
  ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X
  We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more