ಫೆಬ್ರವರಿ 4, 5ರಂದು ಕದಂಬೋತ್ಸವ, ಪಂಪ ಪ್ರಶಸ್ತಿ ಪ್ರದಾನ

Subscribe to Oneindia Kannada

ಶಿರಸಿ, ಡಿಸೆಂಬರ್ 22: ರಾಜ್ಯದ ಪ್ರಸಿದ್ಧ ಕದಂಬೋತ್ಸವ ಕಾರ್ಯಕ್ರಮವನ್ನು ಮುಂದಿನ ಫೆಬ್ರವರಿ 4 ಮತ್ತು 5 ರಂದು ಆಯೋಜಿಸಲಾಗಿದೆ. ಬನವಾಸಿಯ ಮಯೂರ ವರ್ಮ ವೇದಿಕೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.

ಕದಂಬೋತ್ಸವ ಕಾರ್ಯಕ್ರಮದ ದಿನಾಂಕ ನಿಗದಿ ಮತ್ತು ಪೂರ್ವ ತಯಾರಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾಹಿತಿ ನೀಡಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ "ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಮೊದಲು ನಿಗದಿಪಡಿಸಿದಂತೆ ಸಾಹಿತಿ ಕೆ.ಎಸ್.ನಿಸ್ಸಾರ್ ಅಹ್ಮದ್ ಅವರಿಗೆ ಉತ್ಸವದಲ್ಲಿ ಪಂಪ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು," ಎಂದು ತಿಳಿಸಿದರು.

Sirsi: Kadambotsava on February 4th, 5th in Banavasi

ಆಮಂತ್ರಣ ಪತ್ರಿಕೆ, ಕಾರ್ಯಕ್ರಮದ ಉಸ್ತುವಾರಿ, ವೇದಿಕೆ ತಯಾರಿ ಸೇರಿದಂತೆ ಎಲ್ಲಾ ಕೆಲಸವು ಅಚ್ಚುಕಟ್ಟಾಗಿ ನಡೆಯಬೇಕು ಎಂದು ಅಧಿಕಾರಿ ವರ್ಗಗಳಿಗೆ ಅವರು ಇದೇ ಸಂದರ್ಭದಲ್ಲಿ ಸೂಚಿಸಿದರು. ಕದಂಬೋತ್ಸವ ಕಾರ್ಯಕ್ರಮವನ್ನು ಅದ್ಧೂರಿಯಾಗಿ ನಡೆಸಬೇಕು ಎಂದೂ ಅವರು ಕರೆ ನೀಡಿದರು.‌

ಈ ವೇಳೆ ಶಾಸಕರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಿವರಾಮ‌ ಹೆಬ್ಬಾರ್, ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಮುಂತಾದವರು ಉಪಸ್ಥಿತರಿದ್ದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The state's famous ‘Kadambotsava’ program is scheduled for next February 4th and 5th. This program will be held on the Mayur Varma stage in Banavasi, Uttara Kannada.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ