360 ಕೋಟಿ ವೆಚ್ಚದಲ್ಲಿ ಶಿರಸಿ-ಕುಮಟಾ ಹೆದ್ದಾರಿ ವಿಸ್ತರಣೆ

ಶಿರಸಿ, ನವೆಂಬರ್ 02 : ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆಯಾಗಿರುವ ಶಿರಸಿ-ಕುಮಟಾ ರಸ್ತೆಯನ್ನು ವಿಸ್ತರಣೆ ಮಾಡಿ, ಮೇಲ್ದರ್ಜೆಗೇರಿಸಲಾಗುತ್ತದೆ. ಬಹುತೇಕ ಅರಣ್ಯ ಪ್ರದೇಶದಲ್ಲಿ ಈ ರಸ್ತೆ ಹಾದುಹೋಗಿದೆ.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ (ಎನ್‌ಎಚ್‌ಎಐ) 360 ಕೋಟಿ ವೆಚ್ಚದಲ್ಲಿ ಶಿರಸಿ-ಕುಮಟಾ ರಸ್ತೆಯನ್ನು ವಿಸ್ತರಣೆ ಮಾಡಿ, ಅಭಿವೃದ್ಧಿ ಮಾಡಲಿದೆ. ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯ ಒಪ್ಪಿಗೆಗಾಗಿ ಎನ್‌ಎಚ್‌ಎಐ ಕಾಯುತ್ತಿದೆ.

ಹಾವೇರಿ-ಎಕ್ಕಂಬಿ (ರಾಜ್ಯ ಹೆದ್ದಾರಿ -2), ಎಕ್ಕಂಬಿ-ಕುಮುಟಾ-ಬೇಲೆಕೇರಿ (ರಾಜ್ಯ ಹೆದ್ದಾರಿ 69) ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತನೆ ಆಗಿದೆ. ಮೊದಲ ಹಂತದಲ್ಲಿ ಶಿರಸಿ-ಕುಮಟಾ ನಡುವಿನ 60 ಕಿ.ಮೀ.ರಸ್ತೆಯನ್ನು ವಿಸ್ತರಣೆ ಮಾಡಲಾಗುತ್ತದೆ.

Sirsi-Kumta road to be expand in 360 core

360.60 ಕೋಟಿ ರೂ. ವೆಚ್ಚದ ಯೋಜನೆ ಇದಾಗಿದ್ದು, ಆರ್‌ಎನ್‌ಎಸ್ ಇನ್‌ಫ್ರಾಸ್ಟ್ರಕ್ಚರ್ ಲಿ. ಮತ್ತು ಗಾಯತ್ರಿ ಪ್ರಾಜೆಕ್ಟ್‌ ಲಿ.ಕಂಪನಿಗಳು ಜಂಟಿ ಸಹಭಾಗಿತ್ವದಲ್ಲಿ ಕಾಮಗಾರಿ ಕೈಗೊಳ್ಳಲಿವೆ.

ಬಹುತೇಕ ಅರಣ್ಯ ಪ್ರದೇಶದಲ್ಲಿ ಈ ಮಾರ್ಗ ಹಾದು ಹೋಗಿವೆ. ಒಟ್ಟು 10 ಮೀಟರ್ ರಸ್ತೆಯನ್ನು ಅಗಲೀಕರಣ ಮಾಡಲಾಗುತ್ತಿದ್ದು, ಇದರಿಂದ ನೂರಾರು ಅಪರೂಪದ ಮರ-ಗಿಡಗಳಿಗೆ ಕೊಡಲಿ ಪೆಟ್ಟು ಬೀಳಲಿದೆ.

ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆ ಒಪ್ಪಿಗೆ ನೀಡಿದ ಬಳಿಕ ಭೂ ಸ್ವಾಧೀನ ಕಾರ್ಯ ಆರಂಭವಾಗಲಿದೆ. ಪರ್ಯಾಯ ಮಾರ್ಗಗಳನ್ನು ಸಿದ್ಧಪಡಿಸಿ, ಶಿರಸಿ-ಕುಮಟಾ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಿ ಕಾಮಗಾರಿ ಕೈಗೊಳ್ಳಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+