ಶಿರಸಿ ಮಾರಿಕಾಂಬಾ ದೇವಸ್ಥಾನದ ಸಿಬ್ಬಂದಿ, ಕುಟುಂಬಸ್ಥರಿಗೂ ಸೋಂಕು
ಕಾರವಾರ, ಜುಲೈ 11: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ 24 ಜನರಲ್ಲಿ ಇಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿತನ ಸಂಪರ್ಕದಿಂದ ನಗರದ ಪ್ರಸಿದ್ಧ ಮಾರಿಕಾಂಬಾ ದೇವಸ್ಥಾನದ 13 ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ.
Recommended Video
ಈ ದೇವಸ್ಥಾನ ಸಿಬ್ಬಂದಿಗಳ ಸಂಪರ್ಕದಿಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಕೆ.ಡಿ.ಸಿ.ಸಿ ಬ್ಯಾಂಕಿನ 3 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಇವರಿಗೂ ಸೋಂಕಿತ ಸಿಬ್ಬಂದಿ ಸಂಪರ್ಕದಿಂದ ಸೋಂಕು ಹರಡಿದೆ ಎನ್ನಲಾಗಿದೆ.

ನಗರದ ವಿಶಾಲ ನಗರದಲ್ಲಿ ಇಬ್ಬರಿಗೆ ಹಾಗೂ ಮಹಾರಾಷ್ಟ್ರದಿಂದ ಹಿಂದಿರುಗಿದ್ದು, ಕ್ವಾರಂಟೈನ್ ನಲ್ಲಿದ್ದ ಇಬ್ಬರಿಗೆ ಸೋಂಕು ತಗುಲಿದೆ. ಒಂದೇ ದಿನ 24 ಪ್ರಕರಣ ದೃಢಪಡುವ ಮೂಲಕ ಇಡೀ ಶಿರಸಿ ಬೆಚ್ಚಿಬಿದ್ದಿದೆ. ಈ ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರ ಪತ್ತೆ ಕಾರ್ಯವನ್ನು ಮಾಡಿ ಗಂಟಲು ದ್ರವ ಪರೀಕ್ಷೆಗೆ ಕಳುಹಿಸಲಾಗುವುದು ಎಂದು ತಾಲೂಕು ಆಡಳಿತ ತಿಳಿಸಿದೆ. ಇದೀಗ ಸಂಪರ್ಕಿತರನ್ನು ಪತ್ತೆ ಹಚ್ಚುವುದೂ ಜಿಲ್ಲಾಡಳಿತಕ್ಕೆ ಸವಾಲಿನ ಕೆಲಸವಾಗಿದೆ.












Click it and Unblock the Notifications