ಶಿರಸಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಒಂದು ವಾರದ ಕಾಲ ಶಿರಸಿ ಮಾರಿಕಾಂಬಾ ದೇವಾಲಯ ಬಂದ್

By ಕಾರವಾರ ಪ್ರತಿನಿಧಿ
|
Google Oneindia Kannada News

ಶಿರಸಿ, ಜುಲೈ 6: ಲಾಕ್‌ಡೌನ್ ಸಡಿಲಿಕೆಯ ನಂತರ ಬಾಗಿಲು ತೆರೆದಿದ್ದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಮಾರಿಕಾಂಬಾ ದೇವಾಲಯವು ಭಾನುವಾರದಿಂದ ಮತ್ತೆ ಒಂದು ವಾರದ ಕಾಲ ದೇವಿಯ ದರ್ಶನ ಮಾಡಲು ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.

Recommended Video

Kushal Mendis arrested ಶ್ರೀಲಂಕಾ ಕ್ರಿಕೆಟಿಗರ್ ಕುಸಾಲ್ ಮೆಂಡಿಸ್ ಅರೆಸ್ಟ್ | Oneindia Kannada

ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ವೈರಸ್ ಮಹಾಮಾರಿ ರೋಗವು ಅಟ್ಟಹಾಸ ಮೆರೆಯುತ್ತಿದೆ. ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಾಲಯ ಪಕ್ಕದ ಮನೆಯ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಕಾರಣ, ಮುನ್ನೆಚ್ಚರಿಕೆಯಾಗಿ ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಾರಿಕಾಂಬಾ ಕ್ಷೇತ್ರ ಶಿರಸಿಗೂ ಕಾಲಿಟ್ಟ ಕೊರೊನಾ ವೈರಸ್ಮಾರಿಕಾಂಬಾ ಕ್ಷೇತ್ರ ಶಿರಸಿಗೂ ಕಾಲಿಟ್ಟ ಕೊರೊನಾ ವೈರಸ್

One Week From Sunday The Sirsi Marikamba Temple Closed

ದೇವಸ್ಥಾನ ಸಿಬ್ಬಂದಿಗೆ ರಜೆ ನೀಡಲಾಗಿದ್ದು, ದೇವಿಗೆ ನಿತ್ಯದ ಪೂಜೆ ನಡೆಯುತ್ತದೆ. ಆದರೆ, ದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಾಲಯದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ ತಿಳಿಸಿದ್ದಾರೆ.

English summary
Sirsi Marikamba Temple in Uttara Kannada district has been Restricted to devotees for a week from Sunday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X