ಶಿರಸಿ ತ್ರಿಕೋನ ಸ್ಪರ್ಧೆ: 8ನೇ ಬಾರಿ ಗೆಲುವಿನ ನಿರೀಕ್ಷೆಯಲ್ಲಿರುವ ಕಾಗೇರಿಗೆ ಭೀಮಣ್ಣ ನಾಯ್ಕ್, ಉಪೇಂದ್ರ ಅಡ್ಡಿ?
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆಗೆ ಕರುನಾಡು ಸಜ್ಜಾಗಿದ್ದು, ಈಗಾಗಲೇ ಎಲ್ಲ ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅಬ್ಬರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಮೇ 10ರಂದು ಮತದಾನ ನಡೆಯಲಿದ್ದು, ಗೆಲುವಿಗಾಗಿ ಅಭ್ಯರ್ಥಿಗಳು ಮತಬೇಟೆಗೆ ಇಳಿದಿದ್ದಾರೆ.
ಇನ್ನು ಹಚ್ಚ ಹಸಿರನ್ನೇ ಹೊದ್ದು ಮಲಗಿರುವ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಹಾಲಿ ಶಾಸಕ ಹಾಗೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಕ್ಷೇತ್ರದಲ್ಲಿ ಮತ್ತೊಮ್ಮೆ ಸ್ಪರ್ಧೆಗೆ ಇಳಿದಿದ್ದಾರೆ.

2018ರಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ 70,595 ಮತಗಳನ್ನು ಪಡೆದಿದ್ದರೆ, ಪ್ರತಿಸ್ಪರ್ಧಿ ಕಾಂಗ್ರೆನ್‌ನ ಭೀಮಣ್ಣ ನಾಯ್ಕ್ 53,134 ಮತಗಳನ್ನು ಪಡೆದಿದ್ದರು. ಭೀಮಣ್ಣ ನಾಯ್ಕ್ ವಿರುದ್ಧ ವಿಶ್ವೇಶ್ವರ ಹೆಗಡೆ ಕಾಗೇರಿ 17 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಶಿರಸಿಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ?
ಮಾರಿಕಾಂಬ ದೇವಿ ಕ್ಷೇತ್ರ ಶಿರಸಿಯಲ್ಲಿ ಈ ಬಾರಿಯೂ ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಪ್ರಬಲ ಆಕಾಂಕ್ಷಿಗಳೇ ಇದ್ದು, ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆ ಇದೆ.
ಬಿಜೆಪಿಯಿಂದ ಹಳೇ ಹುಲಿ ವಿಶ್ವೇಶ್ವರ ಹೆಗಡೆ ಕಾಗೇರಿ ಪುನರಾಯ್ಕೆ ಬಯಸಿದ್ದರೆ, ಕಾಂಗ್ರೆಸ್‌ನಿಂದ ಕಳೆದ ಬಾರಿಯ ಪರಾಜಿತ ಅಭ್ಯರ್ಥಿ ಭೀಮಣ್ಣ ನಾಯ್ಕ್ ಮತ್ತೆ ಪ್ರಬಲ ಪೈಪೋಟಿ ನೀಡಲಿದ್ದಾರೆ. ಇನ್ನು ಜೆಡಿಎಸ್‌ನಿಂದ ಹೊಸ ಮುಖ ಉಪೇಂದ್ರ ಪೈ ಚುನಾವಣಾ ಅಖಾಡದಲ್ಲಿದ್ದಾರೆ.

ಶಿರಸಿ ಕ್ಷೇತ್ರದಲ್ಲಿ ನಾಮಧಾರಿಗಳು ಮತ್ತು ಬ್ರಾಹ್ಮಣರ ಮತಗಳು ನಿರ್ಣಾಯಕ ಪಾತ್ರವನ್ನು ವಹಿಸಲಿದೆ. ಇತರೆ ಸಮುದಾಯ, ಅಲ್ಪಸಂಖ್ಯಾತರು ಮತ್ತು ಮರಾಠಿಗರು ನಂತರದ ಸ್ಥಾನದಲ್ಲಿದ್ದಾರೆ. ಶಿರಸಿ ಕ್ಷೇತ್ರದಲ್ಲಿ ಈ ಬಾರಿ ಮಾರಿಕಾಂಬಾ ಯಾರ ಕೈ ಹಿಡಿಯಲಿದ್ದಾಳೆ ಎಂಬುದು ಕುತೂಹಲ ಮೂಡಿಸಿದೆ.
ಉಪೇಂದ್ರ ಪೈ - ಜೆಡಿಎಸ್
ಶಿರಸಿ ಕ್ಷೇತ್ರದಿಂದ ಈ ಬಾರಿ ಜೆಡಿಎಸ್ ಅಭ್ಯರ್ಥಿಯಾಗಿ ಸಾಮಾಜಿಕ ಕಾರ್ಯಕರ್ತ ಉಪೇಂದ್ರ ಪೈ ಕಣಕ್ಕಿಳಿದಿದ್ದಾರೆ. ಶಿರಸಿಯಲ್ಲಿ ಉಪೇಂದ್ರ ಪೈ ಸೇವಾ ಟ್ರಸ್ಟ್ ಮೂಲಕ ಹಲವು ವರ್ಷಗಳಿಂದ ಜನರಿಗೆ ಸೇವೆ ಮಾಡುತ್ತಾ ಬಂದಿರುವ ಉಪೇಂದ್ರ ಪೈ ಕ್ಷೇತ್ರದ ಜನರ ಗಮನ ಸೆಳೆದಿದ್ದಾರೆ.
ಕ್ರೀಡೆಗಳಿಗೆ, ಆಟೋ ಚಾಲಕರಿಗೆ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಉಪೇಂದ್ರ ಪೈ ಹೆಚ್ಚಿನ ಸಹಕಾರವನ್ನು ನೀಡುವ ಮೂಲಕ ಗಮನ ಸೆಳೆದಿದ್ದರು. ಇನ್ನು ಶಿರಸಿ ಪ್ರತ್ಯೇಕ ಜಿಲ್ಲೆ ಹೋರಾಟದ ನೇತೃತ್ವವನ್ನು ಸಹ ಉಪೇಂದ್ರ ಪೈ ವಹಿಸಿದ್ದು, ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತ ಹೊಂದಿದ್ದಾರೆ.

ಭೀಮಣ್ಣ ನಾಯ್ಕ್ - ಕಾಂಗ್ರೆಸ್
ಶಿರಸಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಭೀಮಣ್ಣ ನಾಯ್ಕ್ ಈ ಬಾರಿಯೂ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ 13 ವರ್ಷ ಕೆಲಸ ಮಾಡಿದ್ದಾರೆ. ಕೆಲ ತಿಂಗಳ ಹಿಂದೆ ಈ ಹುದ್ದೆಯನ್ನು ಕಳೆದುಕೊಂಡಿದ್ದರು. 2008ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ, 2018ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.
ನಂತರ 2019ರ ಉಪಚುನಾವಣೆಯಲ್ಲಿ ಯಲ್ಲಾಪುರ ಕ್ಷೇತ್ರದಿಂದ ಭೀಮಣ್ಣ ನಾಯ್ಕ್ ಕಣಕ್ಕಿಳಿದು ಪರಾಭವಗೊಂಡರು. ಅಲ್ಲದೇ 2021ರ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದಾರೆ.
ವಿಶ್ವೇಶ್ವರ ಹೆಗಡೆ ಕಾಗೇರಿ - ಬಿಜೆಪಿ
ವಿಶ್ವೇಶ್ವರ ಹೆಗಡೆ ಕಾಗೇರಿ ಅಂಕೋಲಾ ಕ್ಷೇತ್ರದಿಂದ ಮೂರು ಬಾರಿ ಗೆಲುವು ಸಾಧಿಸಿದ್ದರೆ, ಶಿರಸಿ-ಸಿದ್ದಾಪುರ ಕ್ಷೇತ್ರದಿಂದ 4 ಬಾರಿ ಜಯ ಗಳಿಸುವ ಮೂಲಕ ಒಟ್ಟಾರೆ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದು, 8ನೇ ಬಾರಿ ಗೆಲುವಿನ ಅದೃಷ್ಟದ ಬಾಗಿಲಲ್ಲಿ ನಿಂತಿದ್ದಾರೆ.
ಶಿರಸಿ-ಸಿದ್ದಾಪುರ ಕ್ಷೇತ್ರದಲ್ಲಿ 2008ರಲ್ಲಿ ಕಾಂಗ್ರೆಸ್ಸಿನ ರವೀಂದ್ರನಾಥ್ ನಾಯಕ್, 2013ರಲ್ಲಿ ಕಾಂಗ್ರೆಸ್ಸಿನ ದೀಪಕ್ ಹೊನ್ನಾವರ್ ಮತ್ತು 2018ರಲ್ಲಿ ಕಾಂಗ್ರೆಸ್‌ನ ಭೀಮಣ್ಣ ನಾಯ್ಕ್ ಅವರನ್ನು ಸೋಲಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ವಿಧಾನಸಭೆ ಪ್ರವೇಶಿಸಿದ್ದಾರೆ.
ಕಳೆದ ಬಾರಿ ಜೆಡಿಎಸ್‌ನಿಂದ ಸ್ಪರ್ಧಿಸಿದ್ದ ಶಶಿಭೂಷಣ ಹೆಗಡೆ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಇದು ವಿಶ್ವೇಶ್ವರ ಹೆಗಡೆ ಕಾಗೇರಿಯವರ ಗೆಲುವಿಗೆ ಸಹಕಾರಿಯಾಗಿತ್ತು.
-
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ












Click it and Unblock the Notifications