Vaibhav Suryavanshi: ಹೊಸ ದಾಖಲೆ ಬರೆದ ಸೂರ್ಯವಂಶಿ ವೈಭವದ ಶತಕ
ಐಪಿಎಲ್ 2025ರ ಆವೃತ್ತಿಯಲ್ಲಿ 14 ವರ್ಷದ ಹುಡುಗನ ಅಬ್ಬರಕ್ಕೆ ಕ್ರಿಕೆಟ್ ಲೋಕವೇ ದಂಗಾಗಿದೆ. ರಾಜಸ್ಥಾನ ರಾಯಲ್ಸ್ ತಂಡದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿ 35 ಎಸೆತಗಳಲ್ಲೇ ಸಿಡಿಲಬ್ಬರದ ಶತಕ ಸಿಡಿಸುವ ಮೂಲಕ ಐಪಿಎಲ್‌ನಲ್ಲಿ ಹಲವು ದಾಖಲೆಗಳನ್ನು ಬರೆದಿದ್ದಾರೆ. ಇದು ಭಾರತೀಯ ಕ್ರಿಕೆಟಿಗನೊಬ್ಬ ಐಪಿಎಲ್‌ನಲ್ಲಿ ಸಿಡಿಸಿದ ವೇಗದ ಶತಕವಾಗಿದೆ.
ಜೈಪುರದ ಸವಾಯ್ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ನಾಯಕ ಸಂಜು ಸ್ಯಾಮ್ಸನ್ ಗಾಯಗೊಂಡ ಬಳಿಕ ತಂಡದಲ್ಲಿ ಅವಕಾಶ ಪಡೆದ ಅವರು ಸಿಕ್ಕ ಅವಕಾಶವನ್ನು ಬಳಸಿಕೊಂಡು ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದ್ದಾರೆ.

35 ಎಸೆತಗಳಲ್ಲೇ ಶತಕ
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 209 ರನ್ ಕಲೆಹಾಕಿತು. ಶುಭಮನ್ ಗಿಲ್ 84 ರನ್ ಗಳಿಸಿದರೆ, ಸಾಯಿ ಸುದರ್ಶನ್ 39 ರನ್ ಗಳಿಸಿದರು. ಜೋಸ್ ಬಟ್ಲರ್ ಅಜೇಯ 50 ರನ್ ಗಳಿಸುವ ಮೂಲಕ ಬೃಹತ್ ಮೊತ್ತ ಗಳಿಸಲು ಕೊಡುಗೆ ನೀಡಿದರು.
ಈ ಬೃಹತ್ ಮೊತ್ತವನ್ನು ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್‌ಗೆ ವೈಭವ್ ಸೂರ್ಯವಂಶಿ ಸ್ಫೋಟಕ ಆರಂಭ ನೀಡಿದರು. ಕೇವಲ 17 ಎಸೆತಗಳಲ್ಲೇ ಅರ್ಧಶತಕ ಗಳಿಸಿದ ಅವರು ಈ ಐಪಿಎಲ್ ಆವೃತ್ತಿಯ ವೇಗದ ಅರ್ಧಶತಕ ಗಳಿಸಿದ ದಾಖಲೆ ಮಾಡಿದರು.
ಅರ್ಧಶತಕ ಗಳಿಸಿದರೂ ಅವರ ಆರ್ಭಟ ಕಡಿಮೆಯಾಗಲೇ ಇಲ್ಲ ಗುಜರಾತ್ ಟೈಟಾನ್ಸ್ ಬೌಲರ್ ಗಳು ಕಕ್ಕಾಬಿಕ್ಕಿಯಾಗುವಂತೆ ಬ್ಯಾಟಿಂಗ್ ಮಾಡಿದ ಅವರು ಬೌಂಡರಿ, ಸಿಕ್ಸರ್ ಮೂಲಕವೇ ಅಬ್ಬರಿಸಿದರು. ಕೇವಲ 35 ಎಸೆತಗಳಲ್ಲಿ ಶತಕ ಗಳಿಸಿ ಐಪಿಎಲ್ ಇತಿಹಾಸದಲ್ಲೇ ವೇಗದ ಶತಕ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡರು. 38 ಎಸೆತಗಳಲ್ಲಿ 7 ಬೌಂಡರಿ 11 ಸಿಕ್ಸರ್ ಸಹಿತ 101 ರನ್ ಗಳಿಸಿದರು. ಒಟ್ಟಾರೆ ಇದು ಐಪಿಎಲ್‌ನ ಎರಡನೇ ವೇಗದ ಶತಕವಾಗಿದೆ.
ಶತಕ ಬಾರಿಸಿದ ಅತಿ ಕಿರಿಯ ಆಟಗಾರ ಎನ್ನುವ ದಾಖಲೆ ಮಾಡಿದರು. ವೈಭವ್ 14 ವರ್ಷ 32 ದಿನ ವಯಸ್ಸಿನಲ್ಲಿ ಈ ದಾಖಲೆ ಮಾಡಿದ್ದಾರೆ. 13ನೇ ವರ್ಷದಲ್ಲಿ ಪ್ರಥಮದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಅವರು ಒಂದೇ ವರ್ಷದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ.
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications