ರಾಹುಲ್ ಗಾಂಧಿ ಸಲಹೆ ಆಧರಿಸಿ 15 ಲಕ್ಷ ರೂ. ಪರಿಹಾರ ನೀಡಿದ್ದು ಎಷ್ಟು ಸರಿ: ವಿಜಯೇಂದ್ರ ವಾಗ್ದಾಳಿ
ಬೆಂಗಳೂರು, ಫೆಬ್ರವರಿ 20 : ಕಾಡಾನೆ ದಾಳಿಯಿಂದ ಮೃತಪಟ್ಟ ಕೇರಳದ ವ್ಯಕ್ತಿಯ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಆಧರಿಸಿ 15 ಲಕ್ಷ ರೂ. ಪರಿಹಾರ ನೀಡುವ ರಾಜ್ಯ ಕಾಂಗ್ರೆಸ್ ಸರ್ಕಾರದ ತೀರ್ಮಾನ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಕರ್ನಾಟಕದ ಆನೆಯ ದಾಳಿಯಿಂದ ಕೇರಳದಲ್ಲಿ ವಯನಾಡು ಜಿಲ್ಲೆಯಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ನೆರವಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಲಹೆ ಮೇರೆಗೆ ಕರ್ನಾಟಕ ಸರ್ಕಾರ, ರಾಜ್ಯದ ತೆರಿಗೆದಾರರ ಹಣವನ್ನು ದುರುಪಯೋಗಪಡಿಸಿಕೊಂಡಿರುವುದು ಸಂಪೂರ್ಣವಾಗಿ ಅವಮಾನಕರ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ರಾಹುಲ್ ಗಾಂಧಿಯವರ ವಯನಾಡ್ ಕ್ಷೇತ್ರದಲ್ಲಿ ಕಾಡಾನೆ ದಾಳಿಗೆ ಮೃತಪಟ್ಟ ವ್ಯಕ್ತಿಗೆ ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ 15 ಲಕ್ಷ ರೂ.ಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ರಾಜ್ಯದ ಜನರಿಗೆ ಮಾಡಿದ ದ್ರೋಹವಲ್ಲವೇ ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಕರ್ನಾಟಕದಾದ್ಯಂತ ಬರಗಾಲ ಮತ್ತು ನೂರಾರು ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವ ಈ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ, ಸ್ವಲ್ಪವೂ ನಾಚಿಕೆಯಿಲ್ಲದೆ ರಾಜ್ಯದ ತುರ್ತು ಅಗತ್ಯಗಳತ್ತ ಗಮನಹರಿಸುವ ಬದಲು ರಾಹುಲ್ ಗಾಂಧಿಯವರನ್ನು ಸಂತೋಷಪಡಿಸಲು ಆದ್ಯತೆ ನೀಡುತ್ತಿರುವುದು ಖೇದಕರ. ಕಾಂಗ್ರೆಸ್ ಹೈಕಮಾಂಡ್ ಮೆಚ್ಚಿಸಲು ಕರ್ನಾಟಕದ ತೆರಿಗೆದಾರರ ಹಣವನ್ನು ಅನೈತಿಕವಾಗಿ ಬಳಸಿಕೊಳ್ಳುತ್ತಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಸಚಿವರುಗಳು ಹೊಣೆಹೊರಬೇಕು ಎಂದು ವಿಜಯೇಂದ್ರ ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಪರಿಹಾರ ನೀಡಿದ್ದು ಎಷ್ಟು ಸರಿ?
ರಾಹುಲ್ ಗಾಂಧಿ ಸೂಚನೆ ಬೆನ್ನಲ್ಲೆ ಅರಣ್ಯ ಸಚಿವರು, ನಿಮ್ಮ (ರಾಹುಲ್ ಗಾಂಧಿ) ಸಲಹೆಯಂತೆ 15 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಣೆ ಮಾಡಿದ್ದೇವೆ ಎಂದು ಪತ್ರ ಬರೆದಿದ್ದಾರೆ. ಜೊತೆಗೆ ಈ ಬಗ್ಗೆ ಬೀದರ್‌ನಲ್ಲಿ ಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿ, ಮುಖ್ಯಮಂತ್ರಿಗಳ ಸೂಚನೆ ಹಿನ್ನೆಲೆಯಲ್ಲಿ ಕೇರಳ ವ್ಯಕ್ತಿಯ ಕುಟುಂಬ ಪರಿಹಾರ ನೀಡಲಾಗಿದೆ ಎಂದಿದ್ದಾರೆ.
ಮಾನವೀಯ ನೆಲೆಯಲ್ಲಿ ಪಕ್ಷದ ವತಿಯಿಂದ ಪರಿಹಾರ ನೀಡಲಿ, ಆದರೆ ಕಾಡಾನೆಗಳಿಗೂ ರಾಜ್ಯದ ಗಡಿಗಳನ್ವಯ ವ್ಯವಹರಿಸಿ, ಯಾರದ್ದೋ ರಾಜಕೀಯ ಲಾಭಕ್ಕೆ ಸರ್ಕಾರ ಖಜಾನೆ ಹಣ ಬಳಸುವುದು, ಸದನ ನಡೆಯುತ್ತಿರುವಾಗ ಸಚಿವರು ಪಕ್ಷದ ಹೈಕಮಾಂಡ್ ಸೂಚನೆಯಂತೆ ನಡೆದುಕೊಳ್ಳುವುದು, ಅದು ಕೂಡ ಹೊರ ರಾಜ್ಯದವರಿಗೆ ಈ ರೀತಿ ಪರಿಹಾರವನ್ನು ಕರ್ನಾಟಕ ಸರ್ಕಾರ ನೀಡುತ್ತಿರುವುದು ಇದೇ ಮೊದಲು ಎನ್ನಲಾಗಿರುವುದು ಪ್ರಕರಣಕ್ಕೆ ಬೇರೆ ಸ್ವರೂಪ ನೀಡಿದ್ದು ಈ ಹಿನ್ನಲೆಯಲ್ಲಿ ವಿಜಯೇಂದ್ರ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications