India vs England 2nd ODI: ಟಾಸ್ ಗೆದ್ದು ಬ್ಯಾಂಟಿಂಗ್‌ ಆಯ್ದುಕೊಂಡ ಇಂಗ್ಲೆಂಡ್: ಟೀಂ ಇಂಡಿಯಾ ತಂಡ ಹೀಗಿದೆ

India vs England 2nd ODI: ಭಾರತ ಮತ್ತು ಇಂಗ್ಲೆಡ್‌ 2ನೇ ಏಕದಿನ ಪಂದ್ಯ ಶುರುವಾಗಿದೆ. ಇಂದು (ಫೆಬ್ರವರಿ 09) ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾದರೆ ಮ್ಯಾಚ್‌ ಎಷ್ಟು ಗಂಟೆಗೆ ಆರಂಭವಾಗಲಿದೆ ಹಾಗೂ ಯಾರೆಲ್ಲಾ ಟೀಂ ಇಂಡಿಯಾ ತಂಡದಲ್ಲಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ಕಟಕ್‌​ನ ಬಾರಾಬತಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಟೀಂ ಇಂಡಿಯಾ ಮೊದಲು ಬೌಲಿಂಗ್ ಆರಂಭ ಮಾಡಲಿ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಮೊದಲ ಏಕದಿನ ಪಂದ್ಯದಿಂದ ಹೊರಗುಳಿದಿದ್ದ ವಿರಾಟ್ ಕೊಹ್ಲಿ ಅವರರನ್ನು ಈ ಪಂದ್ಯದಲ್ಲಿ ಕಣಕ್ಕಿಳಿಸಲಾಗಿದೆ.

2nd ODI Cricket England wins the toss and chooses to bat Know Team India s Players list

ಇದಕ್ಕೂ ಮುಂಚೆ ನಾಗ್ಪುರದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ ಹೊರಗುಲಿದಿದ್ದರು. ಕಾಲು ನೋವು ಹಿನ್ನೆಲೆ ಅವರು ಹೊರಗುಳಿದಿದ್ದಾರೆ. ಇದೀಗ ಅವರ ಆಗಮನದಿಂದಾಗಿ ಯಶಸ್ವಿ ಜೈಸ್ವಾಲ್ ಪ್ಲೇಯಿಂಗ್ ಇಲೆವೆನ್‌ನಿಂದ ಹೊರಬಿದ್ದಿದ್ದಾರೆ. ಈ ಪಂದ್ಯದ ಮೂಲಕ ವರುಣ್ ಚಕ್ರವರ್ತಿ ಏಕದಿನ ಕ್ರಿಕೆಟ್‌​ಗೆ ಪಾದಾರ್ಪಣೆ ಮಾಡಿದ್ದಾರೆ. ಅದರಂತೆಯೇ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ.

ಇಂಗ್ಲೆಂಡ್ ತಂಡ: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಆದಿಲ್ ರಶೀದ್, ಮಾರ್ಕ್​ವುಡ್, ಗಸ್​ ಅಟ್ಕಿನ್ಸನ್, ಜೇಮಿ ಓವರ್ಟನ್. ಪಂದ್ಯ ಇಂದು ಮಧ್ಯಾಹ್ನ 1:30ಕ್ಕೆ ಆರಂಭವಾಗಿದೆ.

ಭಾರತ ಮತ್ತು ಇಂಗ್ಲೆಂಡ್ ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೂ 108 ಪಂದ್ಯಗಳಲ್ಲಿ ಮುಖಾಮುಖಿ ಆಗಿವೆ. ಟೀಂ ಇಂಡಿಯಾ 59 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ 44 ಮ್ಯಾಚ್​ಗಳಲ್ಲಿ ಜಯ ಸಾಧಿಸಿದೆ. ಈ ಅಂಕಿಅಂಶಗಳ ಪ್ರಕಾರ ಟೀಂ ಇಂಡಿಯಾವು ಇಂಗ್ಲೆಂಡ್‌ ವಿರುದ್ಧ ಮೇಲುಗೈ ಸಾಧಿಸಿರುವುರುವು ಸ್ಪಷ್ಟವಾಗಿ ಕಂಡುಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+