ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

36ನೇ ರಾಷ್ಟ್ರೀಯ ಕ್ರೀಡಾಕೂಟ; ಮೈಸೂರಿನ ಖುಷಿಗೆ ಬೆಳ್ಳಿ ಪದಕ

By ಮೈಸೂರು ಪ್ರತಿನಿಧಿ
|
Google Oneindia Kannada News

ಮೈಸೂರು, ಅಕ್ಟೋಬರ್, 16: ಪ್ರಧಾನಿ ನರೇಂದ್ರ ಮೋದಿಯೊಂದಿಗೆ ಯೋಗಪಟು ಪ್ರದರ್ಶನ ನೀಡಿದ್ದ ಮೈಸೂರಿನ ಪ್ರತಿಭೆ ಖುಷಿ ಎಚ್. ಅವರು ಇದೀಗ ರಾಷ್ಟ್ರೀಯ ಯೋಗಾಸನ ಕ್ರೀಡಾಕೂಟದಲ್ಲಿ ಮಿಂಚು ಹರಿಸಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ 36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೈಸೂರಿನ ಕುಮಾರಿ ಖುಷಿ ಭಾಗವಹಿಸಿದ್ದರು. ರಿದಮಿಕ್ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿ ಬೆಳ್ಳಿ ಪದಕವನ್ನು ಗಳಿಸಿದ್ದಾರೆ. ಕರ್ನಾಟಕ ತಂಡ ಒಟ್ಟು ಒಂದು ಚಿನ್ನ, ಎರಡು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳನ್ನು ಗಳಿಸಿದೆ. ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆ ಆಗಿರುವುದು ವಿಶೇಷವಾಗಿದೆ.

ತುಲಾಮಾಸದಲ್ಲಿ ತಲಕಾಡಿನ ಗೋಕರ್ಣಕ್ಕೆ ಗಂಗೆ ಪ್ರವೇಶತುಲಾಮಾಸದಲ್ಲಿ ತಲಕಾಡಿನ ಗೋಕರ್ಣಕ್ಕೆ ಗಂಗೆ ಪ್ರವೇಶ

ಮೈಸೂರಿನ ಯುವತಿಗೆ ಬೆಳ್ಳಿ ಪದಕ

36ನೇ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಮೊದಲನೇ ಬಾರಿಗೆ ಯೋಗಾಸನ ಕ್ರೀಡೆಯೂ ರಾಷ್ಟ್ರಪಟ್ಟದ ಕ್ರೀಡಾಕೂಟದಲ್ಲಿ ಸೇರ್ಪಡೆ ಆಗಿರುವುದು ವಿಶೇಷವಾಗಿದೆ. ಇದರಲ್ಲಿ ಮೈಸೂರಿನ ಯುವತಿ ಖುಷಿ ಅವರು ರಿದಮಿಕ್‌ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿ ಬೆಳ್ಳಿ ಪದಕವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

36th National Games; Khushi of Mysuru win silver medal in Yogasana

ಖುಷಿ ಅವರು ಮೈಸೂರಿನ ಸರ್ಕಾರಿ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾನಿಲಯ ಮತ್ತು ಆಸ್ಪತ್ರೆಯ ವಿದ್ಯಾರ್ಥಿನಿ ಆಗಿದ್ದಾರೆ. ಮೈಸೂರಿನ ವಿವೇಕಾನಂದ ಯೋಗ ಸಂಶೋಧನಾ ಕೇಂದ್ರದಲ್ಲಿ ಕಳೆದ 8 ವರ್ಷಗಳಿಂದ ಡಾ. ಪಿ.ಎನ್. ಗಣೇಶ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಯೋಗ ತರಬೇತಿ ಪಡೆಯುತ್ತಿದ್ದಾರೆ. ಈ ಮೂಲಕ ತಮ್ಮ ಯೋಗ ಕಲೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪಡೆದಿದ್ದಾರೆ. ಯೋಗ ಕ್ಷೇತ್ರದಲ್ಲಿ ಸಂಶೋಧನೆ ಮಾಡಿ ಉತ್ತಮ ಯೋಗ ಶಿಕ್ಷಕಿ ಆಗುವುದೇ ನನ್ನ ಗುರಿ ಆಗಿದೆ ಎಂದು ಖುಷಿ ಅಭಿಪ್ರಾಯವನ್ನು ಹೊರಹಾಕಿದ್ದಾರೆ.

English summary
Khushi from Mysuru won the silver medal in Yogasana competition at 36th National Games held in Ahmedabad, Gujarat. know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X