ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ ಎಬಿ ಡಿವಿಲಿಯರ್ಸ್

|
Google Oneindia Kannada News

ನವೆಂಬರ್ 19: ದಕ್ಷಿಣ ಆಫ್ರಿಕಾದ ಕ್ರಿಕೆಟ್ ಆಟಗಾರ ಮಿ. 360 ಡಿಗ್ರಿ ಖ್ಯಾತಿಯ ಎಬಿ ಡಿವಿಲಿಯರ್ಸ್ ಎಲ್ಲ ಮಾದರಿಯ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ.

ಕ್ರಿಕೆಟ್ ಲೋಕದಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಕ್ರಿಕೆಟ್‌ನ ಆಪದ್ಬಾಂಧವ ಎಬಿ ಡಿವಿಲಿಯರ್ಸ್ ಈ ಹಿಂದೆಯೆ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ್ದರು. ಆದರೆ, ಭಾರತದ ಐಪಿಎಲ್ ಸೇರಿದಂತೆ ಇತರೆ ದೇಶೀಯ ಟೂರ್ನಿಗಳಲ್ಲಿ ಕಣಕ್ಕಿಳಿಯುತ್ತಿದ್ದರು.

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಪರವಾಗಿ ಅನೇಕ ವರ್ಷಗಳಿಂದ ಆಡುತ್ತಿದ್ದಾರೆ. ಆದರೆ, ಸದ್ಯ ಇವರು ಇನ್ನುಮುಂದೆ ಯಾವುದೇ ಮಾದರಿಯ ಕ್ರಿಕೆಟ್​ನಲ್ಲಿ ಆಡುವುದಿಲ್ಲ ಎಂದು ಹೇಳಿದ್ದಾರೆ.

AB De Villiers Announces Retired To All Forms Of Cricket

ಈ ಬಗ್ಗೆ ಅವರೇ ಸ್ವತಃ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದು, "ಇದೊಂದು ಅದ್ಭುತ ಪ್ರಯಾಣವಾಗಿದೆ, ಆದರೆ ನಾನು ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲು ನಿರ್ಧರಿಸಿದ್ದೇನೆ. ಈವರೆಗೆ ನಾನು ತುಂಬಾ ಖುಷಿಯಿಂದ, ಉತ್ಸಾಹದಿಂದ ಆಟವನ್ನು ಆಡಿದ್ದೇನೆ. ಈಗ ನನಗೆ 37 ವರ್ಷವಾಗಿದೆ. ಹಿಂದಿನ ರೀತಿ ಆಟವಾಡಲು ಸಾಧ್ಯವಾಗದು," ಎಂದು ಬರೆದುಕೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ಈ ಬಗ್ಗೆ ಟ್ವೀಟ್ ಮಾಡಿದೆ.

ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ 2018ರಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದರು. ಈ ಸಂದರ್ಭಲ್ಲಿ ದೇಶಿ ಪಂದ್ಯವನ್ನು ಹೊರತುಪಡಿಸಿ ಅಂತರರಾಷ್ಟ್ರೀಯ ಎಲ್ಲಾ ಮಾದರಿಯ ಕ್ರಿಕೆಟ್ ಆಟದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದಿದ್ದರು. ಅಂದರಂತೆ ಅವರು ಐಪಿಎಲ್ ಸೇರಿದಂತೆ ಇತರೆ ದೇಶೀಯ ಟೂರ್ನಿಯಲ್ಲಿ ಮಾತ್ರ ಆಟವಾಡುತ್ತಿದ್ದರು. ಅದರಲ್ಲೂ ಆರ್​ಸಿಬಿ ತಂಡಕ್ಕೆ ಎಬಿಡಿ ಕೊಡುಗೆ ಅಪಾರವಾಗಿದೆ. ಆದರೆ, ಆರ್​ಸಿಬಿ ತಂಡ ಕಪ್ ಗೆಲ್ಲುವ ಮುನ್ನವೇ ವಿದಾಯ ಘೋಷಿಸಿದ್ದಾರೆ ಎಂಬುದು ಆರ್‌ಸಿಬಿ ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ.

AB De Villiers Announces Retired To All Forms Of Cricket

"ಕ್ರಿಕೆಟ್ ನನ್ನ ಮೇಲೆ ಅಸಾಧಾರಣ ಪ್ರೀತಿ ತೋರಿದೆ. ಟೈಟಾನ್ಸ್, ಪ್ರೋಟೀಸ್ ಅಥವಾ ಆರ್‌ಸಿಬಿ, ಅಥವಾ ಪ್ರಪಂಚದಾದ್ಯಂತ ಆಡುತ್ತಿರಲಿ, ಆಟವು ನನಗೆ ಊಹಿಸಲಾಗದ ಅನುಭವಗಳನ್ನು ಮತ್ತು ಅವಕಾಶಗಳನ್ನು ನೀಡಿದೆ. ನಾನು ಯಾವಾಗಲೂ ಕೃತಜ್ಞನಾಗಿರುತ್ತೇನೆ."

"ನನ್ನ ಜೊತೆ ಸಾಗಿದ ಪ್ರತಿಯೊಬ್ಬ ತಂಡದ ಸಹ ಆಟಗಾರ, ಪ್ರತಿ ಎದುರಾಳಿ, ಪ್ರತಿ ತರಬೇತುದಾರ, ಪ್ರತಿಯೊಬ್ಬ ಫಿಸಿಯೋ ಮತ್ತು ಪ್ರತಿಯೊಬ್ಬ ಸಿಬ್ಬಂದಿ ಸದಸ್ಯರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ದಕ್ಷಿಣ ಆಫ್ರಿಕಾದಲ್ಲಿ, ಭಾರತದಲ್ಲಿ, ನಾನು ಎಲ್ಲೇ ಆಡಿದರೂ ನನಗೆ ದೊರೆತ ಬೆಂಬಲದಿಂದ ನಾನು ವಿನಮ್ರನಾಗಿದ್ದೇನೆ," ಎಂದು ಬರೆದುಕೊಂಡಿರುವ ಎಬಿ ಡಿವಿಲಿಯರ್ಸ್ ಇಂಗ್ಲಿಷ್, ಹಿಂದಿ ಭಾಷೆಯಲ್ಲೂ ಧನ್ಯವಾದ ಎಂದು ಬರೆದಿದ್ದಾರೆ.

37ರ ವಯಸ್ಸಿನ ಎಬಿಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ದಕ್ಷಿಣ ಆಫ್ರಿಕಾ ಪರವಾಗಿ ಈವರೆಗೆ 114 ಟೆಸ್ಟ್, 228 ಏಕದಿನ ಮತ್ತು 78 ಟಿ-20 ಪಂದ್ಯಗಳನ್ನಾಡಿದ್ದಾರೆ. ಸುಮಾರು 17 ವರ್ಷಗಳ ಕಾಲ ವೃತ್ತಿ ಬದುಕನ್ನು ಕ್ರಿಕೆಟ್ ಮೈದಾನದಲ್ಲಿ ಕಳೆದಿರುವ ಸ್ಫೋಟಕ ಬ್ಯಾಟ್ಸ್‌ಮನ್ ಡಿವಿಲಿಯರ್ಸ್, ನಿವೃತ್ತಿ ನೀಡಲು ಇದು ಸಕಾಲ ಎಂದಿದ್ದಾರೆ.

ಐಪಿಎಲ್​ನಲ್ಲಿ 184 ಪಂದ್ಯಗಳನ್ನು ಆಡಿದ್ದು 5162 ರನ್ ಬಾರಿಸಿದ್ದಾದ್ದು, ಒಟ್ಟು ಮೂರು ಶತಕ ಮತ್ತು 40 ಅರ್ಧಶತಕ ಕೂಡ ಸಿಡಿಸಿದ್ದಾರೆ. 251 ಸಿಕ್ಸರ್, 413 ಬೌಂಡರಿ ಬಾರಿಸಿದ ಸಾಧನೆ ಮಾಡಿದ್ದಾರೆ.

English summary
South African cricketer AB de Villiers has announced his retirement from all forms of cricket.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X