Virat Kohli: ಯು-ಟರ್ನ್ ತೆಗೆದುಕೊಂಡ ಎಬಿಡಿ: ಕೊಹ್ಲಿ ಬಗ್ಗೆ ಹೇಳಿದ್ದು ಸುಳ್ಳು ಎಂದ ಮಿ.360

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ತಮ್ಮ ಎರಡನೇ ಮಗುವನ್ನು ನಿರೀಕ್ಷಿಸುತ್ತಿದ್ದಾರೆ ಎಂದು ಹೇಳಿದ್ದ ಎಬಿ ಡಿವಿಲಿಯರ್ಸ್ ಯು-ಟರ್ನ್ ತೆಗೆದುಕೊಂಡಿದ್ದಾರೆ. ತಮ್ಮ ಯೂಟ್ಯೂಬ್ ಚಾನಲ್‌ನಲ್ಲಿ ಸ್ಪಷ್ಟನೆ ನೀಡಿರುವ ಅವರು, ಸುಳ್ಳು ಮಾಹಿತಿ ಹಂಚಿಕೊಂಡಿರುವುದಾಗಿ ಹೇಳಿದ್ದಾರೆ.

ನನ್ನ ಯೂಟ್ಯೂಬ್ ಚಾನೆಲ್‌ನಲ್ಲಿ ನಾನು ಹೇಳಿದಂತೆ ಕುಟುಂಬವು ಮೊದಲು ಬರುತ್ತದೆ ಎಂದು ಡಿವಿಲಿಯರ್ಸ್ ದೈನಿಕ್ ಭಾಸ್ಕರ್‌ಗೆ ತಿಳಿಸಿರುವುದಾಗಿ ವರದಿಯಾಗಿದೆ. ನಾನು ಅದೇ ಸಮಯದಲ್ಲಿ ತಪ್ಪು ಮಾಡಿದೆ, ಸುಳ್ಳು ಮಾಹಿತಿಯನ್ನು ಹಂಚಿಕೊಂಡಿದ್ದೇನೆ, ಅದು ನಿಜವಲ್ಲ ಎಂದು ಹೇಳಿದ್ದಾರೆ.

 AB De Villiers Makes U-Turn on Virat Kohli, Anushka Sharma 2nd Child Remark

"ವಿರಾಟ್ ಅವರ ಕುಟುಂಬಕ್ಕೆ ಯಾವುದು ಉತ್ತಮವೋ ಅದು ಮೊದಲು ಬರುತ್ತದೆ ಎಂದು ನಾನು ಭಾವಿಸುತ್ತೇನೆ. ಅಲ್ಲಿ ಏನಾಗುತ್ತಿದೆ ಎಂದು ಯಾರಿಗೂ ತಿಳಿದಿಲ್ಲ, ನಾನು ಅವರಿಗೆ ಶುಭ ಹಾರೈಸುತ್ತೇನೆ. ಅವರ ವಿರಾಮದ ಕಾರಣವೇನೇ ಇರಲಿ, ವಿರಾಮದ ಬಳಿಕ ಬಲಶಾಲಿಯಾಗಿ, ಉತ್ತಮವಾಗಿ ಹಿಂತಿರುಗಬಹುದು ಎಂದು ನಾನು ಭಾವಿಸುತ್ತೇನೆ ಎಂದು ಎಬಿಡಿ ಹೇಳಿದ್ದಾರೆ.

ಎಬಿಡಿ-ಕೊಹ್ಲಿ ಉತ್ತಮ ಗೆಳೆಯರು

ಎಬಿ ಡಿವಿಲಿಯರ್ಸ್ ಮತ್ತು ವಿರಾಟ್ ಕೊಹ್ಲಿ ಎಂತಹ ಅದ್ಭುತ ಗೆಳೆಯರು ಎಂದು ಇಡೀ ಕ್ರಿಕೆಟ್ ಜಗತ್ತಿಗೆ ಗೊತ್ತಿದೆ. ಇಬ್ಬರೂ ಆರ್ ಸಿಬಿ ತಂಡಕ್ಕಾಗಿ ಜೊತೆಯಲ್ಲಿ ಆಡಿದ್ದು ಒಟ್ಟಿಗೆ ಸಾಕಷ್ಟು ಸಮಯ ಕಳೆದಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ ವಿರಾಟ್ ಕೊಹ್ಲಿ ತಂಡದಿಂದ ಹೊರಗುಳಿದಿದ್ದರು. ಈ ಬಗ್ಗೆ ಮಾತನಾಡಿದ್ದ ಎಬಿ ಡಿವಿಲಿಯರ್ಸ್ ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂದು ಹೇಳಿದ್ದರು. ಆದರೆ ಅದು ನಿಜವಾದ ಕಾರಣವಲ್ಲ ಎಂದು ಈಗ ಸ್ಪಷ್ಟನೆ ನೀಡಿದ್ದು. ಕೊಹ್ಲಿ ಅವರ ಅಲಭ್ಯತೆ ಬಗ್ಗೆ ಮತ್ತಷ್ಟು ಗೊಂದಲ ಮೂಡಿದೆ.

ಉಳಿದ ಟೆಸ್ಟ್‌ಗಳಿಗೂ ಅಲಭ್ಯ?

ಕೆಲವು ವರದಿಗಳ ಪ್ರಕಾರ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮುಂದಿನ ಮೂರು ಟೆಸ್ಟ್ ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಅವರು ನಾಯಕ ರೋಹಿತ್ ಶರ್ಮಾ ಅವರ ಜೊತೆ ಮಾತನಾಡಿದ್ದು, ಪರಿಸ್ಥಿತಿ ಬಗ್ಗೆ ಹೇಳಿದ್ದಾರೆ ಎಂದು ಬಿಸಿಸಿಐ ಈ ಮೊದಲು ಅವರು ಎರಡು ಟೆಸ್ಟ್‌ಗಳಿಂದ ಹೊರಗುಳಿದ ಬಗ್ಗೆ ಸ್ಪಷ್ಟನೆ ನೀಡಿತ್ತು.

ಮುಂದಿನ ಮೂರು ಟೆಸ್ಟ್ ಪಂದ್ಯಗಳಿಗೆ ಇನ್ನೂ ಭಾರತ ತಂಡವನ್ನು ಪ್ರಕಟಿಸಿಲ್ಲ. ಆದರೆ ಕೊಹ್ಲಿ ಮೂರು ಪಂದ್ಯಗಳಲ್ಲಿ ಆಡಲ್ಲ ಎಂದು ಹೇಳಲಾಗಿದೆ. ಶುಕ್ರವಾರ ಬಿಸಿಸಿಐ ಉಳಿದ ಮೂರು ಟೆಸ್ಟ್‌ಗಳಿಗೆ ಭಾರತ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ.

ಭಾರತ ಎರಡನೇ ಟೆಸ್ಟ್‌ನಲ್ಲಿ ಗೆದ್ದ ನಂತರ 1-1 ರಲ್ಲಿ ಸಮಬಲ ಸಾಧಿಸಿದ ನಂತರ ಐದು ಪಂದ್ಯಗಳ ಟೆಸ್ಟ್ ಸರಣಿಯು ಸಲಬಲಗೊಂಡಿದೆ. ಮುಂದಿನ ಮೂರು ಪಂದ್ಯಗಳು ಎರಡೂ ತಂಡಗಳಿಗೆ ಮಹತ್ವದ್ದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+