Abhishek Sharma: ಟೀಂ ಇಂಡಿಯಾ ಟಿ20 ಸ್ಪೆಷಲಿಸ್ಟ್ ಮತ್ತೆ ಫ್ಲಾಪ್: ಆಂಗ್ಲರಿಗೆ ಶರಣಾದ ಅಭಿಷೇಕ್ ಶರ್ಮಾ
Abhishek Sharma: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ 2026 ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ಭಾರತ ಮುಖಾಮುಖಿಯಾಗಿವೆ. ಟಾಸ್ ಸೋತು ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾಗೆ ಆರಂಭದಲ್ಲೇ ಆಘಾತ ಎದುರಾಗಿದೆ. ಓಪನರ್ ಆಗಿ ಕಣಕ್ಕಳಿದ ಅಭಿಷೇಕ್ ಶರ್ಮಾ ಕೇವಲ 9 ರನ್‌ಗಳಿಗೆ ಕ್ಯಾಚ್ ನೀಡಿ ಪೆವಿಲಿಯನ್‌ನತ್ತ ನಡೆದರು.
ಟಾಸ್ ಸೋತ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಅವರು, ಮೊದಲೇ ಬ್ಯಾಟಿಂಗ್ ಮಾಡಲು ಬಯಸಿದ್ದೇವು ಎಂದು ತಿಳಿಸಿದ್ದಾರೆ. ಅದಂತೆಯೇ ಮೊದಲು ಬ್ಯಾಟ್ ಬೀಸಿದ ಟೀಂ ಇಂಡಿಯಾ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಅಭಿಷೇಕ್ ಶರ್ಮಾ ವಿಕೆಟ್ ಒಪ್ಪಿಸಿ ಪೆವಿಲಿಯನ್ ಕಡೆ ನಡೆದರು. ಆದರೂ, ಕುಗ್ಗದ ಸಂಜು ಸ್ಯಾಮ್ಸನ್ ಸ್ಪೋಟಕ ಬ್ಯಾಟಿಂಗ್ ಮುಂದುವರೆಸಿದ್ದಾರೆ.

ಇನ್ನೂ ಸತತ ಮೂರನೇ ಬಾರಿ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಹಂತದಲ್ಲಿ ಮುಖಾಮುಖಿ ಆಗುತ್ತಿರುವುದು ವಿಶೇಷ. ಹಿಂದಿನ ಎರಡು ಆವೃತ್ತಿಗಳಲ್ಲೂ ಈ ಪಂದ್ಯದಲ್ಲಿ ಗೆದ್ದ ತಂಡವೇ ಕೊನೆಯಲ್ಲಿ ಟ್ರೋಫಿ ಗೆದ್ದಿದೆ ಎಂಬುದು ಗಮನಾರ್ಹ ಸಂಗತಿ.
ವೆಸ್ಟ್ ಇಂಡೀಸ್ ವಿರುದ್ಧ ಸಂಜು ಸ್ಫೋಟಕ ಬ್ಯಾಟಿಂಗ್
ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ ವೆಸ್ಟ್ ಇಂಡೀಸ್ ವಿರುದ್ಧ ಸೂಪರ್ 8 ಹಂತದ ಮಹತ್ವದ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಗೆದ್ದು ಫೈನಲ್ ಪ್ರವೇಶ ಮಾಡಿತು. ಸಂಜು ಈ ಪಂದ್ಯದಲ್ಲಿ 97 ರನ್‌ಗಳನ್ನು ಕಲೆಹಾಕಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಉತ್ತಮ ಫಾರ್ಮ್‌ನಲ್ಲಿರುವ ಇಂಗ್ಲೆಂಡ್
ಮತ್ತೊಂದೆಡೆ, ಹ್ಯಾರಿ ಬ್ರೂಕ್ಸ್ ನೇತೃತ್ವದ ಇಂಗ್ಲೆಂಡ್ ತಂಡ ತನ್ನ ಕೊನೆಯ ಐದು ಪಂದ್ಯಗಳಲ್ಲಿ ಜಯ ಸಾಧಿಸಿ ಉತ್ತಮ ಫಾರ್ಮ್‌ನಲ್ಲಿದೆ. ವಿಶೇಷವಾಗಿ ಆಲ್‌ರೌಂಡರ್ ವಿಲ್ ಜಾಕ್ಸ್ ಭರ್ಜರಿ ಫಾರ್ಮ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇಂದಿನ ಈ ಸೆಮಿಫೈನಲ್‌ನಲ್ಲಿ ಗೆಲ್ಲುವ ತಂಡ ಭಾನುವಾರ ನಡೆಯುವ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ.
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್ ಮಾಡಿತು. ಅದರಂತೆಯೇ ಟೀಂ ಇಂಡಿಯಾ ಪರ ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಇನ್ನಿಂಗ್ಸ್ ಆರಂಭಿಸಿದರು. ಮೊದಲ ಓವರ್ನಲ್ಲಿ ಭಾರತಕ್ಕೆ ಉತ್ತಮ ಆರಂಭ ಸಿಕ್ಕಿತು. ಎಡರನೇನೇ ಓವರ್ ಕೂಡ ಉತ್ತಮವಾಗಿ ಆರಂಭವಾಯಿತು.
ಮೊದಲ ಓವರ್ನಲ್ಲಿ ಸಂಜು ಸ್ಯಾಮ್ಸನ್ ಬಿಗ್ ಶಾಟ್ ಮಾಡಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ಮತ್ತೊಂದೆಡೆ, ಅಭಿಷೇಕ್, ಇಂಗ್ಲಿಷ್ ವೇಗಿ ಜೋಫ್ರಾ ಆರ್ಚರ್ ಎಸೆದ ಮೊದಲ ಓವರ್‌ನ ಕೊನೆಯ ಎಸೆತದಲ್ಲಿ ಒಂದೇ ಒಂದು ರನ್ ಗಳಿಸುವ ಖಾತೆ ತೆರೆದರು. ವಿಲ್ ಜ್ಯಾಕ್ಸ್ ಎಸೆದ ಎರಡನೇ ಓವರ್‌ನಲ್ಲಿಯೂ ಭರವಸೆಯ ಬ್ಯಾಟಿಂಗ್ ಮುಂದುವರೆಸಿದ ಅಭಿಷೇಕ್ ಎರಡು ಬೌಂಡರಿಗಳನ್ನು ಬಾರಿಸಿ ಗಮನ ಸೆಳೆದರು. ಆದರೆ, ಭಾರತದ ಮೊತ್ತ 20 ರನ್‌ಗಳಿದ್ದಾಗ ಆಘಾತ ಎದುರಾಯಿತು. ಬಿಗ್ ಶಾಟ್ ಮಾಡಲು ಹೋಗಿ ಅಭಿಷೇಕ್ ಶರ್ಮಾ ಮಿಡ್ ವಿಕೆಟ್ ದಿಕ್ಕಿನಲ್ಲಿ ಸಾಲ್ಟ್ಗೆ ಕ್ಯಾಚ್ ನೀಡಿದರು.
ಟೀಕೆಗಳಿಗೆ ಗುರಿಯಾದ ಅಭಿಷೇಕ್ ಶರ್ಮಾ
ಅಭಿಷೇಕ್ ಶರ್ಮಾ ಅವರು ಭಾರತ ಕ್ರಿಕೆಟ್ ತಂಡದ ಯುವ ಆಲ್‌ರೌಂಡರ್ ಆಗಿ ಗುರುತಿಸಿಕೊಂಡಿರುವ ಆಟಗಾರ. ಪಂಜಾಬ್‌ನ ಅಮೃತಸರದಲ್ಲಿ ಜನಿಸಿದ ಅಭಿಷೇಕ್ ಶರ್ಮಾ ಎಡಗೈ ಬ್ಯಾಟ್ಸ್‌ಮನ್ ಆಗಿ ಹಾಗೂ ಎಡಗೈ ಸ್ಪಿನ್ ಬೌಲರ್ ಆಗಿ ತಂಡಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಪಂಜಾಬ್ ಪರ ಉತ್ತಮ ಪ್ರದರ್ಶನ ನೀಡಿದ ಬಳಿಕ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಮೂಲಕ ಹೆಚ್ಚು ಗಮನ ಸೆಳೆದರು. ಸ್ಫೋಟಕ ಬ್ಯಾಟಿಂಗ್ ಶೈಲಿಯಿಂದ ಟಿ20 ಕ್ರಿಕೆಟ್‌ನಲ್ಲಿ ವಿಶೇಷವಾಗಿ ಹೆಸರು ಮಾಡಿದ್ದಾರೆ. ಐಪಿಎಲ್‌ನಲ್ಲಿ ಅವರು ಎಸ್‌ಆರ್‌ಎಚ್ ಪರ ಆಡುತ್ತಾ ಹಲವಾರು ಬಾರಿ ತಂಡಕ್ಕೆ ಉತ್ತಮ ಆರಂಭ ನೀಡಿದ್ದಾರೆ. ಟಾಪ್ ಆರ್ಡರ್‌ನಲ್ಲಿ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹಾಗೂ ಅಗತ್ಯವಿದ್ದಾಗ ಸ್ಪಿನ್ ಬೌಲಿಂಗ್ ಮಾಡುವ ಕೌಶಲದಿಂದ ಅವರು ಉಪಯುಕ್ತ ಆಲ್‌ರೌಂಡರ್ ಆಗಿ ಗುರುತಿಸಿಕೊಂಡಿದ್ದಾರೆ. ಆದರೆ, ಇದೀಗ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅವರು ಫ್ಲಾಪ್ ಆಗುತ್ತಾ ಟೀಕೆಗಳಿಗೆಳಿಗೆ ಗುರಿಯಾಗಿದ್ದಾರೆ.












Click it and Unblock the Notifications