Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ
Abhiskeh Sharma: ಭಾರತ ತಂಡ ಟಿ20 ವಿಶ್ವಕಪ್ ಗೆಲುವಿನ ಬೆನ್ನಲ್ಲೇ, ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಅವರು ಪಂದ್ಯದ ನಂತರದ ಪತ್ರಿಕಾಗೋಷ್ಠಿಯಲ್ಲಿ ತೋರಿದ ಸರಳತೆ ಮತ್ತು ಪ್ರಾಮಾಣಿಕತೆ ಎಲ್ಲರ ಮನಗೆದ್ದಿದೆ. ಅವರ ಹೇಳಿಕೆ ಇದೀಗ ಸಾಮಾಜಿಕ ಜಾಲಯಾಣದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ.
ಪಂದ್ಯದ ಬಳಿಕ ನಡೆದ ಮಾಧ್ಯಮ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅಭಿಷೇಕ್ ಶರ್ಮಾ, "ತುಂಬಾ ಸಮಯದ ನಂತರ ನಾನು ಇಷ್ಟೊಂದು ದೀರ್ಘಾವಧಿಯ ಇನಿಂಗ್ಸ್ ಆಡಿದ್ದೇನೆ. ಈ ಕಾರಣದಿಂದಾಗಿ ನನಗೆ ಸ್ನಾಯು ಸೆಳೆತ ಉಂಟಾಗುತ್ತಿದೆ. ದಯವಿಟ್ಟು ಕ್ಷಮಿಸಿ," ಎಂದು ಮುಕ್ತವಾಗಿ ಒಪ್ಪಿಕೊಂಡರು. ಅವರ ಈ ನೇರ ಮತ್ತು ಪ್ರಾಮಾಣಿಕ ನಡೆ ಸಾಮಾಜಿಕ ಜಾಲತಾಣಗಳಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.

ಅಭಿಷೇಕ್ ಶರ್ಮಾ ನಿರ್ಗಮಿಸಿದ ನಂತರ, ತಂಡದ ಮತ್ತೊಬ್ಬ ಆರಂಭಿಕ ಆಟಗಾರ ಇಶಾನ್ ಕಿಶನ್ ಅವರು ಮಾತು ಮುಂದುವರೆಸಿದರು. ಭಾರತ ತಂಡವು ಐತಿಹಾಸಿಕ ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದ ನಂತರದ ಸಂಭ್ರಮದ ನಡುವೆಯೂ, ಅಂದು ರಾತ್ರಿ 1 ಗಂಟೆ ಕಳೆದರೂ ಇಶಾನ್ ಕಿಶನ್ ಅವರು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರಿಸಿ ಗಮನ ಸೆಳದರು.
ಅಭಿಷೇಕ್ ಶರ್ಮಾ ಬೆಂಬಲಕ್ಕೆ ನಿಂತ ಸೂರ್ಯ
2026ರ ಟಿ20 ವಿಶ್ವಕಪ್ ಆರಂಭದಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ, ಟೂರ್ನಿಯ ಮಧ್ಯದಲ್ಲಿ ಫಾರ್ಮ್ ಕಳೆದುಕೊಂಡು ಭಾರಿ ಟೀಕೆಗಳಿಗೆ ಗುರಿಯಾಗಿದ್ದರು. ಟೂರ್ನಿಯ ಆರಂಭದಲ್ಲಿ 'ಪ್ಲೇಯರ್ ಆಫ್ ದಿ ಟೂರ್ನಮೆಂಟ್' ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದ ಅವರು, ನಾಕೌಟ್ ಹಂತಕ್ಕೆ ಬರುವಷ್ಟರಲ್ಲಿ ಲಯ ಕಳೆದುಕೊಂಡಿದ್ದರು. ಈ ಕಠಿಣ ಸಮಯದಲ್ಲಿ ನಾಯಕ ಸೂರ್ಯಕುಮಾರ್ ಯಾದವ್ ಅವರು ಅಭಿಷೇಕ್ ಶರ್ಮಾ ಅವರ ಬೆಂಬಲಕ್ಕೆ ನಿಂತಿದ್ದು ವಿಶೇಷವಾಗಿತ್ತು.
ಪತ್ರಿಕಾಗೋಷ್ಠಿಯಲ್ಲಿ ಅಭಿಷೇಕ್ ಅವರ ಕುರಿತು ಮಾತನಾಡಿದ ಸೂರ್ಯಕುಮಾರ್ ಯಾದವ್, "ಅಭಿಷೇಕ್ ಅವರು ದೀರ್ಘಕಾಲದವರೆಗೆ ಭಾರತ ತಂಡದ ಬ್ಯಾಟಿಂಗ್ ಹೊಣೆಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬಂದಿದ್ದಾರೆ. ಇದೀಗ ಅವರು ಕಠಿಣ ಹಂತವನ್ನು ಎದುರಿಸುತ್ತಿದ್ದಾರೆ. ಹಾಗಾಗಿ ಅವರಿಗೆ ಬೆಂಬಲ ನೀಡುವುದು ನಮ್ಮ ಕರ್ತವ್ಯ. ತಂಡದ ನಾಯಕನಾಗಿ ನಾನು ಅವರೊಂದಿಗೆ ಇದ್ದೇನೆ," ಎಂದು ಸಾರ್ವಜನಿಕವಾಗಿ ಬೆಂಬಲ ಸೂಚಿಸಿದ್ದರು.
ಟಿ20 ವಿಶ್ವಕಪ್ನ ಹಿಂದಿನ ಏಳು ಇನಿಂಗ್ಸ್ಗಳಲ್ಲಿ ಕೇವಲ 89 ರನ್ ಗಳಿಸಿದ್ದ ಅಭಿಷೇಕ್ ಶರ್ಮಾ ಅವರ ಫಾರ್ಮ್ ಬಗ್ಗೆ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿದ್ದವು. ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಗಳಿಸಿದ ಒಂದೇ ಒಂದು ಅರ್ಧಶತಕವನ್ನು ಹೊರತುಪಡಿಸಿದರೆ, ಅವರ ಸ್ಟ್ರೈಕ್ ರೇಟ್ ಸುಮಾರು 130ರ ಆಸುಪಾಸಿನಲ್ಲಿದ್ದು, ಆತಂಕ ಮೂಡಿಸಿತ್ತು. ಆದರೆ, ಭಾನುವಾರ ರಾತ್ರಿ ನಡೆದ ಫೈನಲ್ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಟೀಕೆಗಳಿಗೆ ಬ್ಯಾಟ್ ಮೂಲಕ ಉತ್ತರ ನೀಡಿದರು.
ನಿರ್ಣಾಯಕ ಪಂದ್ಯದಲ್ಲಿ ತಮ್ಮ ಶಕ್ತಿಯನ್ನು ಪ್ರದರ್ಶಿಸಿದ ಅವರು, ಭರ್ಜರಿ ಬ್ಯಾಟಿಂಗ್ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿ ಟೀಕಾಕಾರರ ಬಾಯಿ ಮುಚ್ಚಿಸಿದರು. ಅವರ ಈ ಆಕ್ರಮಣಕಾರಿ ಆಟವೇ ಭಾರತದ ಐತಿಹಾಸಿಕ ಜಯದ ಅಡಿಪಾಯವಾಯಿತು. ಫೈನಲ್ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ, ಕೇವಲ 21 ಎಸೆತಗಳಲ್ಲಿ 52 ರನ್ಗಳನ್ನು ಸಿಡಿಸಿದರು. ಈ ಅಮೋಘ ಪ್ರದರ್ಶನದ ನೆರವಿನಿಂದ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 96 ರನ್ಗಳ ಭರ್ಜರಿ ಜಯ ಸಾಧಿಸಿತು.
ಈ ಗೆಲುವಿನೊಂದಿಗೆ ಭಾರತೀಯ ತಂಡವು ಐತಿಹಾಸಿಕ ದಾಖಲೆಗಳನ್ನು ತನ್ನ ಹೆಸರಿಗೆ ಬರೆದುಕೊಂಡಿದೆ. ತವರು ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಯಿತು. ಇನ್ನೂ ಈ ವಿಜಯದೊಂದಿಗೆ ಭಾರತವು ಒಟ್ಟಾರೆ ಟಿ20 ವಿಶ್ವಕಪ್ ಟ್ರೋಫಿಗಳ ಸಂಖ್ಯೆಯನ್ನು ಮೂರಕ್ಕೆ ಏರಿಸಿಕೊಂಡಿದೆ.
ಶಿವಂ ದುಬೆಗೆ ಯಶಸ್ಸಿನ ಕ್ರೆಡಿಟ್ ಕೊಟ್ಟ ಅಭಿಷೇಕ್
ಫೈನಲ್ ಪಂದ್ಯದಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ನಿಂದ ಎಲ್ಲರ ಗಮನ ಸೆಳೆದ ಅಭಿಷೇಕ್ ಶರ್ಮಾ, ತಮ್ಮ ಯಶಸ್ಸಿನ ಕ್ರೆಡಿಟ್ ಅನ್ನು ಶಿವಂ ದುಬೆ ಅವರಿಗೆ ನೀಡಿದ್ದಾರೆ. "ನನ್ನ ಈ ಕಮ್ಬ್ಯಾಕ್ ಹಿಂದೆ ಶಿವಂ ದುಬೆ ಅವರ ಪಾತ್ರ ಬಹಳ ದೊಡ್ಡದು. ಟೂರ್ನಿಯಲ್ಲಿ ಅವರು ತೋರಿದ ಬದ್ಧತೆ ಮತ್ತು ನನ್ನೊಂದಿಗೆ ಅವರು ನಡೆಸಿದ ಮಾತುಕತೆಗಳು ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿದವು," ಎಂದು ಅಭಿಷೇಕ್ ಶರ್ಮಾ ಹೇಳಿದರು.
ಶಿವಂ ದುಬೆ ಅವರು ಪ್ರಮುಖ ಪಂದ್ಯಗಳಲ್ಲಿ ತಂಡಕ್ಕೆ ಅಗತ್ಯವಿದ್ದಾಗ ಅಮೂಲ್ಯವಾದ ರನ್ ಗಳಿಸಿದ್ದಾರೆ ಮತ್ತು ಬೌಲರ್ಗಳ ಒತ್ತಡವನ್ನು ಕಡಿಮೆ ಮಾಡುವ ಮೂಲಕ ತಂಡದ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದರು. ತಂಡದ ಆಟಗಾರರ ನಡುವಿನ ಈ ಪರಸ್ಪರ ಗೌರವ ಮತ್ತು ಬೆಂಬಲವೇ ಭಾರತದ ಈ ಐತಿಹಾಸಿಕ ಯಶಸ್ಸಿಗೆ ಮುಖ್ಯ ಕಾರಣವಾಗಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications