ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ
Abhishek Sharma: ಅಭಿಷೇಕ್ ಶರ್ಮಾ ಟಿ20 ವಿಶ್ವಕಪ್ 2026 ಟೂರ್ನಿಯುದ್ದಕ್ಕೂ ಬ್ಯಾಟಿಂಗ್ ವೈಫಲ್ಯ ಅನುಭವಿಸಿ ತೀವ್ರ ಟೀಕೆಗಳಿಗೆ ಗುರಿಯಾಗಿದ್ದರು. ಆದರೆ, ಇಂದು (ಮಾರ್ಚ್ 8) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಅಬ್ಬರಿಸಿದ್ದು, ಟೀಕಾಕಾರರಿಗೆ ತಮ್ಮ ಬ್ಯಾಟ್ ಮೂಲಕ ಉತ್ತರ ಕೊಟ್ಟಿದ್ದಾರೆ.
ಟಾಸ್ ಸೋತ ಭಾರತ ಬ್ಯಾಟಿಂಗ್‌ಗಿಳಿದಿದ್ದು, ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಅದರಲ್ಲೂ ಈ ಟೂರ್ನಿಯಲ್ಲಿ ಸತತ ವೈಫಲ್ಯ ಕಂಡಿದ್ದ ಅಭಿಷೇಕ್ ಶರ್ಮಾ ಸ್ಫೋಟಕ ಇನ್ನಿಂಗ್ಸ್ ಆಡಿ ಅರ್ಧ ಶತಕ ಸಿಡಿಸಿ ಮಿಂಚಿದ್ದಾರೆ.

ಆರಂಭಿಕರಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕಿವೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿದರು. ಮೈದಾನದ ನಾಲ್ಕು ಮೂಲೆಗಳಿಗೂ ಚೆಂಡನ್ನು ಅಟ್ಟಿದ ಅವರು, ಕೇವಲ 21 ಎಸೆತಗಳಲ್ಲಿ ಸ್ಫೋಟಕ ಅರ್ಧಶತಕ ಪೂರೈಸಿ ಎಲ್ಲರ ಹುಬ್ಬೇರುವಂತೆ ಮಾಡಿದರು. 6 ಬೌಂಡರಿ, 3 ಸಿಕ್ಸರ್‌ಗಳೊಂದಿಗೆ 52 ರನ್ ಕಲೆಹಾಕಿ ತಂಡಕ್ಕೆ ಆಸೆಯಾದರು.
ಟೀಕೆಗಳಿಗೆ ಬ್ಯಾಟ್ ಮೂಲಕ ಉತ್ತರ
ಅಭಿಷೇಕ್ ಅವರ ಈ ಪ್ರಚಂಡ ಬ್ಯಾಟಿಂಗ್ ಪ್ರದರ್ಶನವು ಭಾರತಕ್ಕೆ ಭರ್ಜರಿ ಆರಂಭವನ್ನು ಒದಗಿಸಿಕೊಟ್ಟಿತು. ಟೂರ್ನಿಯಲ್ಲಿ ಸತತವಾಗಿ ಫ್ಲಾಪ್ ಆಗಿದ್ದ ಆಟಗಾರನೊಬ್ಬ, ಪ್ರಶಸ್ತಿ ನಿರ್ಣಾಯಕ ಪಂದ್ಯದಲ್ಲೇ ಇಂತಹ ಪರಾಕ್ರಮ ಮೆರೆದಿರುವುದು ಅಭಿಮಾನಿಗಳಲ್ಲಿ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಈ ಅಬ್ಬರದ ಇನಿಂಗ್ಸ್ ಮೂಲಕ ತಮ್ಮ ಮೇಲಿದ್ದ ಟೀಕೆಗಳಿಗೆ ಬ್ಯಾಟ್‌ನಿಂದಲೇ ಉತ್ತರ ನೀಡಿರುವ ಅಭಿಷೇಕ್, ಭಾರತ ತಂಡವು ಬೃಹತ್ ಮೊತ್ತದತ್ತ ದಾಪುಗಾಲು ಹಾಕುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
2026ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಅಭಿಷೇಕ್ ಶರ್ಮಾ ಅವರು ನೀಡಿದ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಇಡೀ ಕ್ರಿಕೆಟ್ ಜಗತ್ತಿನ ಗಮನ ಸೆಳೆದಿದೆ. ಟೂರ್ನಿಯುದ್ದಕ್ಕೂ ಫಾರ್ಮ್‌ಗಾಗಿ ಪರದಾಡಿದ್ದ ಅಭಿಷೇಕ್ ಶರ್ಮಾ, ಫೈನಲ್ ಪಂದ್ಯದಲ್ಲಿ ಆಕ್ರಮಣಕಾರಿ ಆಟ ಆಟ ಆಡಿದರು. ಅವರು ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸುವ ಮೂಲಕ ಈ ಟೂರ್ನಿಯಲ್ಲೇ ಅತಿ ವೇಗದ ಅರ್ಧಶತಕದ ದಾಖಲೆ ಸಿಡಿಸಿದ ಆಟಗಾರ ಎನಿಸಿಕೊಂಡರು. ಒಟ್ಟಾರೆಯಾಗಿ 21 ಎಸೆತಗಳನ್ನು ಎದುರಿಸಿ 52 ರನ್ ಗಳಿಸಿ ಔಟಾದರು.
ಸಂಜು ಸ್ಯಾಮ್ಸನ್ ಅವರೊಂದಿಗೆ ಮೊದಲ ವಿಕೆಟ್‌ಗೆ ಕೇವಲ 7.1 ಓವರ್‌ಗಳಲ್ಲಿ 98 ರನ್‌ಗಳ ಅಬ್ಬರದ ಜೊತೆಯಾಟವಾಡಿ, ಭಾರತಕ್ಕೆ ಬೃಹತ್ ಮೊತ್ತ ಪೇರಿಸಲು ಬಲವಾದ ಅಡಿಪಾಯ ಹಾಕಿಕೊಟ್ಟರು. ಇನ್ನೂ ಸಚಿನ್ ತೆಂಡೂಲ್ಕರ್ ಅವರೇ ಸ್ವತಃ ಅಭಿಷೇಕ್ ಶರ್ಮಾ ಅವರ ಆಟವನ್ನು ಕೊಂಡಾಡಿದ್ದಾರೆ. "ಟೂರ್ನಿಯ ಆರಂಭದಲ್ಲಿ ಕಠಿಣ ಸ್ಥಿತಿಯಲ್ಲಿ ಅಭಿಷೇಕ್ ಮೇಲೆ ತಂಡವಿಟ್ಟ ನಂಬಿಕೆಯನ್ನು ಅವರು ಫೈನಲ್‌ನಲ್ಲಿ ಸಮರ್ಥವಾಗಿ ಉಳಿಸಿಕೊಂಡಿದ್ದಾರೆ" ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.












Click it and Unblock the Notifications