Abhishek Sharma: 14 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಗುರು ಯುವರಾಜ್ ಸಿಂಗ್ ನಂತರದ ಸ್ಥಾನ ಅಲಂಕರಿಸಿದ ಅಭಿಷೇಕ್ ಶರ್ಮಾ
Abhishek Sharma: ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಈ ವೇಳೆ ಭಾರತದ ಪರ ಸ್ಫೋಟಕ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಗುರು ಯುವರಾಜ್ ಸಿಂಗ್ ಅವರ ನಂತರದ ಸ್ಥಾನ ಅಲಂಕರಿಸಿದರು. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತದ ಪರ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿದ ಅಭಿಷೇಕ್ ಶರ್ಮಾ ಅವರು ವೇಗವಾಗಿ 14 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿ ಮಿಂಚಿದರು. ಈ ಮೂಲಕ ನ್ಯೂಜಿಲೆಂಡ್ ಬೌರ್‌ಗಳ ಬೆವರಿಸಿಳಿ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಇವರು ಯುವರಾಜ್ ಸಿಂಗ್ ನಂತರ ಭಾರತದ ಎರಡನೇ ವೇಗದ ಅರ್ಧಶತಕ ಬಾರಿಸಿದ ಆಟಗಾರ ಎನಿಸಿಕೊಂಡರು. ಅಲ್ಲದೆ, ನ್ಯೂಜಿಲೆಂಡ್ ವಿರುದ್ಧ ವೇಗದ ಅರ್ಧಶತಕ ಹಾಗೂ ವಿಶ್ವದ ಜಂಟಿ ಮೂರನೇ ವೇಗದ ಅರ್ಧಶತಕದ ದಾಖಲೆ ತಮ್ಮದಾಗಿಸಿಕೊಂಡರು.

ಭಾರತ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು: ಟೀ ನ್ಯೂಜಿಲೆಂಡ್ ವಿರುದ್ಧ ಮೂರನೇ ಟಿ-20 ಪಂದ್ಯ ಗೆಲ್ಲುವ ಮೂಲಕ ಟೀಂ ಇಂಡಿಯಾ ಸತತ 13ನೇ ಟಿ20 ಸರಣಿ ಗೆದ್ದ ಸಾಧನೆ ಮಾಡಿತು. ಮೂರನೇ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ವಿರುದ್ಧ ಭಾರತ 8 ವಿಕೆಟ್‌ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಮೊದಲು ಬ್ಯಾಟ್ ಬೀಸಿದ ನ್ಯೂಜಿಲೆಂಡ್ ಕೇವಲ 153 ರನ್ ಗಳಿಸಿತಿದ್ದು, ಈ ಗುರಿಯನ್ನು ಭಾರತ ತಂಡ ಕೇವಲ 10 ಓವರ್‌ಗಳಲ್ಲಿ ತಲುಪಿತು.
ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು ಬರೀ 153 ರನ್‌ಗಳನ್ನು ಮಾತ್ರ ಕಲೆಹಾಕಿ 154 ರನ್‌ಗಳ ಗುರಿ ನೀಡಿತು. ಈ ಗುರಿ ಬೆನ್ನತ್ತಿದ ಟೀಂ ಇಂಡಿಯಾ 10 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 155 ರನ್ ಬಾರಿಸಿ ಭರ್ಜರಿ ಗೆಲುವು ಸಾಧಿಸಿತು.
ಭಾರತದ ಪರ ಬ್ಯಾಟ್ ಬೀಸಿದ ಸಂಜು ಸ್ಯಾಮ್ಸನ್ ಶೂನ್ಯಕ್ಕೆ ಔಟ್ ಆದರೆ, ಇಶಾನ್ ಇಶಾನ್ 28(13) ಬಾರಿಸಿ ಔಟ್ ಆದರು. ಇನ್ನೂ ಅಭಿಷೇಕ್ ಶರ್ಮಾ 20 ಎಸೆತಗಳಿಗೆ 7 ಬೌಂಡರಿ, 5 ಸಿಕ್ಸ್ ಸಹಿತ 68 ರನ್ ಹಾಗೂ ಸೂರ್ಯ ಕುಮಾರ್ ಯಾದವ್ 26 ಬಾಲ್‌ಗಳಲ್ಲಿ 6 ಬೌಂಡರಿ, 3 ಸಕ್ಸರ್‌ಗಳ ಸಹಿತ 57 ರನ್‌ಗಳನ್ನು ಸಿಡಿಸಿ ನಾಟ್‌ಔಟ್ ಆಗಿ ಉಳಿದರು.
14 ಎಸೆತಗಳಲ್ಲಿ ಅರ್ಧ ಶತಕ ಸಿಡಿಸಿದ ಅಭಿಷೇಕ್: ಇನ್ನೂ ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ಸ್ಟಾರ್ ಓಪನರ್ ಅಭಿಷೇಕ್ ಶರ್ಮಾ ಕೇವಲ 14 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಗಮನ ಸೆಳೆದರು. ಜೊತೆತೆ ಭಾರತ ಪರ ಎರಡನೇ ವೇಗದ ಅರ್ಧಶತಕ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ದಾಖಲೆ ಸೃಷ್ಟಿಸಿದರು. ಇನ್ನೂ ಈ ಪಟ್ಟಿಯಲ್ಲಿ ಅಭಿಷೇಕ್ ಶರ್ಮಾ ಅವರ ಗುರು ಯುವರಾಜ್ ಸಿಂಗ್ ಅವರು ಮೊದಲ ಸ್ಥಾನದಲ್ಲಿದ್ದಾರೆ.
2007ರ ಟಿ-20 ವಿಶ್ವಕಪ್‌ನಲ್ಲಿ ಯುವರಾಜ್ ಸಿಂಗ್ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸುವ ಮೂಲಕ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈಗ ಅವರ ಶಿಷ್ಯ ಅಭಿಷೇಕ್ ಶರ್ಮಾ 14 ಎಸೆತಗಳಲ್ಲಿ ಈ ಸಾಧನೆ ಮಾಡುವ ಮೂಲಕ ಗುರುವಿನ ನಂತರದ ಸ್ಥಾನದಲ್ಲಿದ್ದಾರೆ. ಈ ಮೂಲಕ ಅಭಿಷೇಕ್ ಶರ್ಮಾ ಅವರು, ನ್ಯೂಜಿಲೆಂಡ್ ವಿರುದ್ಧ ಅಂತರರಾಷ್ಟ್ರೀಯ ಟಿ-20 ಪಂದ್ಯದಲ್ಲಿ ಅತಿ ವೇಗದ ಅರ್ಧಶತಕ ಬಾರಿಸಿದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.












Click it and Unblock the Notifications