Actor Yash: ಟಾಕ್ಸಿಕ್ ಪ್ರಚಾರದ ನಡುವೆ ವಿಡಿಯೋ ಕಾಲ್ ಮೂಲಕ ವರಮಹಾಲಕ್ಷ್ಮೀ ಪೂಜೆಯಲ್ಲಿ ನಟ ಯಶ್ ಭಾಗಿ
Actor Yash: ಸ್ಯಾಂಡಲ್‌ವುಡ್ ನಟ ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ನಿವಾಸದಲ್ಲಿ ಈ ಬಾರಿಯ ವರಮಹಾಲಕ್ಷ್ಮೀ ಹಬ್ಬವನ್ನು ಅತ್ಯಂತ ಸಡಗರ-ಸಂಭ್ರಮದಿಂದ ಆಚರಣೆ ಮಾಡಲಾಗಿದೆ. ಆದರೆ ತಮ್ಮ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾದ ಕೆಲಸಗಳಲ್ಲಿ ನಿರತರಾಗಿರುವ ಕಾರಣ ಯಶ್ ಅವರು ನೇರವಾಗಿ ಪೂಜೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಆದ್ದರಿಂದ ಅವರು ವಿಡಿಯೋ ಕಾಲ್ ಮೂಲಕ ಕುಟುಂಬದ ಜೊತೆ ಸಂಪರ್ಕ ಸಾಧಿಸಿ ಹಬ್ಬದ ಆಚರಣೆಯಲ್ಲಿ ಭಾಗಿಯಾಗಿ ಗಮನ ಸೆಳೆದಿದ್ದಾರೆ. ಇದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.
ಯಶ್ ಅಭಿನಯದ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಈ ತಿಂಗಳ ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆಕಾಣಲಿದೆ. ಚಿತ್ರದ ಬಿಡುಗಡೆ ಹತ್ತಿರ ಆಗುತ್ತಿರುವುದರಿಂದ ರಾಕಿಭಾಯ್ ಅವರು ಪ್ರಚಾರ ಕಾರ್ಯಗಳಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ವಿಡಿಯೋ ಕಾಲ್ ಮೂಲಕವೇ ಪೂಜೆಯಲ್ಲಿ ಭಾಗಿ
ಈ ಚಿತ್ರದ ಸಹ-ನಿರ್ಮಾಪಕರೂ ಆಗಿರುವುದರಿಂದ ಅವರ ಮೇಲೆ ಜವಾಬ್ದಾರಿ ಹೆಚ್ಚಿದ್ದು, ಬಿಡುವಿಲ್ಲದ ವೇಳಾಪಟ್ಟಿಯಿಂದಾಗಿ ಮನೆಯ ಹಬ್ಬದ ಆಚರಣೆಗೆ ಖುದ್ದಾಗಿ ಬರಲು ಸಾಧ್ಯವಾಗಿಲ್ಲ. ಪ್ರತಿವರ್ಷ ಅದ್ಧೂರಿಯಾಗಿ ಹಬ್ಬ ಆಚರಿಸುತ್ತಿದ್ದ ಯಶ್ ಅವರು, ಈ ಬಾರಿ ವಿಡಿಯೋ ಕಾಲ್ ಮೂಲಕವೇ ವರಮಹಾಲಕ್ಷ್ಮೀ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.
ಫೋಟೋಗಳು ಭಾರಿ ವೈರಲ್
ಯಶ್ ಅವರ ಅನುಪಸ್ಥಿತಿಯಲ್ಲೂ ಪತ್ನಿ ರಾಧಿಕಾ ಪಂಡಿತ್ ಅವರು ನಿವಾಸದಲ್ಲಿ ಅದ್ಧೂರಿಯಾಗಿ ವರಮಹಾಲಕ್ಷ್ಮೀ ಹಬ್ಬವನ್ನು ನೆರವೇರಿಸಿದ್ದಾರೆ. ಸಿನಿಮಾನ ಪ್ರಚಾರದ ಜವಾಬ್ದಾರಿಯ ನಡುವೆಯೂ ಯಶ್ ಸಾಮಾಜಿಕ ಜಾಲತಾಣದ ಮೂಲಕ ಕುಟುಂಬದೊಂದಿಗೆ ಹಬ್ಬದ ಸಂಭ್ರಮವನ್ನು ಹಂಚಿಕೊಂಡಿರುವುದು ವಿಶೇಷವಾಗಿದೆ. ಇನ್ನೂ ಈ ಫೋಟೋಗಳು ಇದೀಗ ಭಾರಿ ವೈರಲ್ ಆಗುತ್ತಿವೆ.
ದಾಖಲೆ ಬೆಲೆಗೆ ಟಿಕೆಟ್ ಮಾರಾಟ
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಆಗಸ್ಟ್ 26ರಂದು ಜಾಗತಿಕ ಮಟ್ಟದಲ್ಲಿ ಅದ್ದೂರಿಯಾಗಿ ತೆರೆ ಕಾಣಲು ಸಜ್ಜಾಗಿದೆ. ಸಿನಿಮಾನ ಬಿಡುಗಡೆಗೆ ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಇರುವಾಗಲೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಮಾಡುತ್ತಿದೆ. ಮುಂಗಡ ಟಿಕೆಟ್ ಬುಕಿಂಗ್ ಪ್ರಾರಂಭ ಆಗುತ್ತಿದ್ದಂತೆಯೇ ರಾಜ್ಯಾದ್ಯಂತ ಸಿನಿಮಾ ಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರಮುಖ ಚಿತ್ರಮಂದಿರಗಳ ಮೊದಲ ದಿನದ ಪ್ರದರ್ಶನಗಳ ಟಿಕೆಟ್‌ಗಳು ಕ್ಷಣಮಾತ್ರದಲ್ಲಿ ಸೋಲ್ಡ್ ಔಟ್ ಆಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಟಿಕೆಟ್ ಬುಕಿಂಗ್‌ನಲ್ಲಿ ದಾಖಲೆ
ಬುಕ್ ಮೈ ಶೋ (BookMyShow) ಆ್ಯಪ್‌ನಲ್ಲಿ 'ಟಾಕ್ಸಿಕ್' ಚಿತ್ರದ ಟಿಕೆಟ್‌ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿದೆ. ಆನ್‌ಲೈನ್‌ನಲ್ಲಿ ಪ್ರತಿ ಗಂಟೆಗೆ ಸುಮಾರು 25,000ಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗುವ ಮೂಲಕ ಇಡೀ ಸಿನಿರಂಗವನ್ನು ಅಚ್ಚರಿಗೊಳಿಸಿದೆ. ಇನ್ನು ಮಲ್ಟಿಪ್ಲೆಕ್ಸ್ ಹಾಗೂ ಸಿಂಗಲ್ ಸ್ಕ್ರೀನ್‌ಗಳ ಮೊದಲ ದಿನದ ಬಹುತೇಕ ಎಲ್ಲಾ ಶೋಗಳ ಟಿಕೆಟ್‌ಗಳು ಕೆಲವೇ ನಿಮಿಷಗಳಲ್ಲಿ ಖಾಲಿ ಆಗಿದ್ದು, ಕನ್ನಡ ಚಿತ್ರರಂಗದ ಇತಿಹಾಸದಲ್ಲೇ ಬಿಡುಗಡೆಗೂ ಮುನ್ನ ಈ ಮಟ್ಟದ ಟಿಕೆಟ್ ಬುಕಿಂಗ್ ಆಗಿರುವುದು ಇದೇ ಮೊದಲ ಬಾರಿ ಎನ್ನಲಾಗುತ್ತಿದೆ.
ಚಿತ್ರಕ್ಕೆ ಇರುವ ಬೇಡಿಕೆಯನ್ನು ಆಧರಿಸಿ ರಾಜ್ಯಾದ್ಯಂತ, ಅದರಲ್ಲೂ ವಿಶೇಷವಾಗಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಟಿಕೆಟ್ ಬೆಲೆಗಳು ಭಾರಿ ಪ್ರಮಾಣದಲ್ಲಿ ಏರಿಕೆಯಾಗಿವೆ. ಬೆಂಗಳೂರು ಅಷ್ಟೇ ಅಲ್ಲದೆ, ರಾಜ್ಯದ ಇತರ ಪ್ರಮುಖ ನಗರಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲೂ ಚಿತ್ರದ ಟಿಕೆಟ್ ಬೆಲೆಗಳನ್ನು ಬೇಡಿಕೆಗೆ ತಕ್ಕಂತೆ ಹೆಚ್ಚಳ ಮಾಡಲಾಗಿದೆ. ಒಟ್ಟಿನಲ್ಲಿ ಹೇಳುವುದಾದರೆ ಸಿನಿಮಾ ತೆರೆಕಾಣುವ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಸೃಷ್ಟಿಯಾಗಿರುವ ಈ ಧೂಳೆಬ್ಬಿಸುವ ಕ್ರೇಜ್, ಬಿಡುಗಡೆಯ ದಿನದಂದು ಭರ್ಜರಿ ಗಳಿಕೆ ಮಾಡುವುದರ ಮುನ್ಸೂಚನೆ ನೀಡಿದಂತಿದೆ.


Click it and Unblock the Notifications
