Virat Kohli: ವಿರಾಟ್ ಕೊಹ್ಲಿ ಐಪಿಎಲ್ ಆಡೋದು ಕೂಡ ಅನುಮಾನ! ಎಬಿಡಿ ಶಾಕಿಂಗ್ ಹೇಳಿಕೆ
ವಿರಾಟ್ ಕೊಹ್ಲಿ ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯನ್ನು ತಪ್ಪಿಸಿಕೊಂಡಿದ್ದರೆ. ಅವರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಆಡುವುದು ಕೂಡ ಅನುಮಾನ ಎನ್ನುವಂತೆ ದಂತಕಥೆ ಸುನಿಲ್ ಗವಾಸ್ಕರ್ ಹೇಳಿದ್ದರು. ಈಗ ಎಬಿ ಡಿವಿಲಿಯರ್ಸ್ ಕೂಡ ಕೊಹ್ಲಿ ಐಪಿಎಲ್ ಆಡುವ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಆರಂಭಕ್ಕೆ 20 ದಿನಗಳಿಗಿಂತ ಕಡಿಮೆ ಸಮಯವಿದೆ. ಟೂರ್ನಿಯ ಮೊದಲ ಪಂದ್ಯದಲ್ಲಿ ಎಂಎಸ್ ಧೋನಿ ಸಾರಥ್ಯದ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಿರಾಟ್ ಕೊಹ್ಲಿ ಮತ್ತು ಫಾಫ್ ಡು ಪ್ಲೆಸಿಸ್ ಅವರಂತಹ ಸ್ಟಾರ್ ಆಟಗಾರರನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ವೈಯಕ್ತಿಕ ಕಾರಣಗಳಿಂದ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಆಡದ ಮಾರ್ಚ್ 22 ರಂದು ಚೆನ್ನೈನಲ್ಲಿ ವಿರಾಟ್ ಕೊಹ್ಲಿ ಆರಂಭವಾಗಲಿರು ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಬ್ಯಾಟರ್ ಆಡುತ್ತಾರೆಯೇ ಎಂದು ಸುನಿಲ್ ಗವಾಸ್ಕರ್ ಅಚ್ಚರಿ ವ್ಯಕ್ತಪಡಿಸಿದ್ದರು. ಕೆಲವು ಕಾರಣಗಳಿಂದ ಆತ ಟೆಸ್ಟ್ ಸರಣಿ ಆಡುತ್ತಿಲ್ಲ, ಬಹುಶಃ ಐಪಿಎಲ್ ನಲ್ಲಿ ಆಡದೇ ಇರಬಹುದು ಎಂದು ಹೇಳಿದ್ದರು.
ಆರ್‌ಸಿಬಿ ಶ್ರೇಷ್ಠ ಮತ್ತು ಕೊಹ್ಲಿಯ ದೀರ್ಘಕಾಲದ ಸಹ ಆಟಗಾರ ಎಬಿ ಡಿವಿಲಿಯರ್ಸ್ ಕೊಹ್ಲಿ ಐಪಿಎಲ್ ಆಡದಿರುವ ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ್ದಾರೆ.
ಐಪಿಎಲ್‌ನಲ್ಲಿ ಆರ್‌ಸಿಬಿ ತಂಡದ ಸದಸ್ಯರೊಂದಿಗೆ ಹಾಜರಾಗುತ್ತೀರಾ ಎಂದು ಕೇಳಿದಾಗ, ಎಬಿ ಡಿವಿಲಿಯರ್ಸ್, ಇನ್ನೂ ಯಾವುದನ್ನೂ ದೃಢೀಕರಿಸಲಾಗಿಲ್ಲ. ವಿರಾಟ್ ಕೊಹ್ಲಿ ಅವರು ಮತ್ತು ಕೆಲವರ ಜೊತೆ ಸ್ವಲ್ಪ ಸಮಯ ಕಳೆಯಲು ನಾನು ಬರಲು ಬಯಸಬಹುದು ಎಂದು ಸುಳಿವು ನೀಡಿದ್ದಾರೆ.
ಕೆಲವು ಪಂದ್ಯ ಮಿಸ್ ಮಾಡಿಕೊಳ್ತಾರ?
ವಿರಾಟ್ ಕೊಹ್ಲಿ ಅವರು ಇನ್ನೂ ಕುಟುಂಬದ ಜೊತೆ ಯುಕೆಯಲ್ಲಿದ್ದಾರೆ. ಐಪಿಎಲ್ ಆರಂಭಕ್ಕೆ ಇನ್ನು ಕೆಲವು ದಿನಗಳು ಮಾತ್ರ ಬಾಕಿ ಇದೆ. ಮುಂದಿನ ವಾರದಿಂದ ಆರ್ ಸಿಬಿ ತನ್ನ ತಯಾರಿಯನ್ನು ಶುರು ಮಾಡಲಿದೆ. ಆ ವೇಳೆಗೆ ಕೊಹ್ಲಿ ತಂಡ ಸೇರಿಕೊಳ್ತಾರ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.
ಒಂದು ವೇಳೆ ಕೊಹ್ಲಿ ಇನ್ನೂ ಕೆಲವು ದಿನಗಳು ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದರೆ ಅವರು ಐಪಿಎಲ್‌ನ ಆರಂಭದ ಕೆಲವು ಪಂದ್ಯಗಳಿಗೆ ಅಲಭ್ಯರಾಗುವ ಸಾಧ್ಯತೆ ಇದೆ. ಒಂದು ವೇಳೆ ಅವರು ಕೆಲವು ಪಂದ್ಯಗಳನ್ನು ಆಡದೇ ಇದ್ದರೂ ಅದು ಆರ್ ಸಿಬಿಗೆ ದೊಡ್ಡ ಹೊಡೆತವಾಗಲಿದೆ.
ವಿರಾಟ್ ಕೊಹ್ಲಿ ಸದ್ಯ ಉತ್ತಮ ಫಾರ್ಮ್‌ನಲ್ಲಿದ್ದು, ಮುಂಬರುವ ಟಿ20 ವಿಶ್ವಕಪ್‌ಗೆ ಆಯ್ಕೆಯಾಗುವ ದೃಷ್ಟಿಯಿಂದ ಕೂಡ ಅವರು ಐಪಿಎಲ್‌ನಲ್ಲಿ ಉತ್ತಮ ಪ್ರದರ್ಶನ ನೀಡಬೇಕಾಗಿದೆ.












Click it and Unblock the Notifications