ಅಧಿಕಾರ ದುರುಪಯೋಗಕ್ಕೆ ಕಬಡ್ಡಿ ಅಸೋಸಿಯೇಷನ್ ಆಡಳಿತಾಧಿಕಾರಿ ಬೆಸ್ಟ್ ಉದಾಹರಣೆ!
ಬೆಂಗಳೂರು. ಅ.19. ದುರಾಡಳಿತ ಮತ್ತು ಅಧಿಕಾರ ದುರುಪಯೋಗಕ್ಕೆ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ಕ್ರಾಕಾ) ಆಡಳಿತಾಧಿಕಾರಿ ಬೆಸ್ಟ್ ಉದಾಹರಣೆ. ಹೀಗೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಅಲ್ಲದೆ, ಆಡಳಿತಾಧಿಕಾರಿಯಾಗಿದ್ದವರು ದುರುದ್ದೇಶದಿಂದ ಸಂಘದ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ ಮತ್ತು ಅಜಾಗರೂಕ ಕ್ರಮಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಮತ್ತೊಂದು ಇರಲಾರದು ಎಂದು ಹೇಳಿರುವ ಹೈಕೋರ್ಟ್, ನಾಲ್ಕು ಜಿಲ್ಲಾ ಸಂಘಗಳಿಗೆ ಸಂಬಂಧಿಸಿದ ಸುಳ್ಳು ಪ್ರಮಾಣ ಪತ್ರವನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ ಎಂದು ತಿಳಿಸಿದೆ.
''ಕೋವಿಡ್-19 ಕಾರಣಕ್ಕೆ ಹಾಸನ, ಚಾಮರಾಜನಗರ, ಕೊಪ್ಪಳ ಮತ್ತು ವಿಜಯಪುರ ಜಿಲ್ಲಾ ಸಂಘಗಳಿಗೆ 2020ರಲ್ಲಿ ಆಡಳಿತಾಧಿಕಾರಿ ನೇಮಕಕ್ಕೂ ಮುನ್ನ 2018ರಲ್ಲಿ ಕ್ರಾಕಾ ಮಹಾಸಭೆಯಲ್ಲಿ ಅಂಗೀಕಾರ ನೀಡಿಲ್ಲ ಎಂದು ನಿರ್ವಾಹಕರು ನ್ಯಾಯಾಲಯಕ್ಕೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದಾರೆ'' ಎಂದು ನ್ಯಾಯಪೀಠ ಹೇಳಿದೆ.

ನಾಲ್ಕು ಜಿಲ್ಲಾ ಸಂಘಗಳು ಸಲ್ಲಿಸಿದ್ದ ಅರ್ಜಿಗಳನ್ನು ಅಂಗೀಕರಿಸಿದ ವೇಳೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯಪೀಠ, ಆರ್‌ಟಿಐ ಅಡಿಯಲ್ಲಿ 2018ರ ಕ್ರಾಕಾದ ಕೊನೆಯ ಸಾಮಾನ್ಯ ಸಭೆಯು ಅಂಗೀಕರಿಸಿದ ನಿರ್ಣಯದ ಪ್ರತಿಗಳನ್ನು ನಿರ್ವಾಹಕರೇ ನೀಡಿದ್ದಾರೆ ಎಂಬುದನ್ನು ಪತ್ತೆ ಹೆಚ್ಚುವುದೇ ಅಲ್ಲದೆ, ಇದಕ್ಕೆ ವ್ಯತಿರಿಕ್ತವಾಗಿ, ಆಡಳಿತಾಧಿಕಾರಿಗಳು ಈ ಜಿಲ್ಲಾ ಅಸೋಸಿಯೇಷನ್‌ಗೆ ಸಂಬಂಧಿಸಿಲ್ಲ ಎಂದು ಸಂವಹನಗಳನ್ನು ನೀಡಿದ್ದಲ್ಲದೆ, ಹಿಂದಿನ ಅರ್ಜಿಯಲ್ಲಿ ನ್ಯಾಯಾಲಯಕ್ಕೆ ಸುಳ್ಳು ಅಫಿಡವಿಟ್ ಸಲ್ಲಿಸಿದ್ದರು ಎಂದು ಹೇಳಿ ಸಂಘದ ಆಡಳಿತಾಧಿಕಾರಿ ಕ್ರಮಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದೆ.

ಬೆಂಗಳೂರು ಸಂಘ ಕಾನೂನು ಬಾಹಿರ: ಅದೇ ನ್ಯಾಯಪೀಠ ಮತ್ತೊಂದು ಅರ್ಜಿಯಲ್ಲಿ, ಬೆಂಗಳೂರು ನಗರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ನೋಂದಣಿಯನ್ನು ಕಾನೂನುಬಾಹಿರ ಎಂದು ನ್ಯಾಯಾಲಯವು ಘೋಷಿಸಿದೆ.
ಆದರೆ ಬೆಂಗಳೂರು ನಗರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ (ಬುಜಕಾ) ಮಾನ್ಯ ಮತ್ತು ಕ್ರಾಕಾಗೆ ಸಂಯೋಜಿತ ಸಂಘವಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಅರ್ಜಿಯನ್ನು ಪುರಸ್ಕರಿಸುವ ಸಂದರ್ಭದಲ್ಲಿ, ಸಂಘದ ನೋಂದಣಿಗೆ ಮುಂಚಿತವಾಗಿ ಸಮಸ್ಯೆಗೆ ಸಂಬಂಧಿಸಿದಂತೆ ಬಿಯುಜಡ್‌ಕೆಎ ನೀಡಿದ ದೂರಿನ ಆಧಾರದ ಮೇಲೆ ಅರ್ಜಿದಾರರ ನೋಂದಣಿಯನ್ನು ರದ್ದುಗೊಳಿಸಿದ ಸಹಕಾರ ಸಂಘಗಳ ರಿಜಿಸ್ಟ್ರಾರ್ ಅವರ ಆದೇಶವನ್ನು ಸಹ ನ್ಯಾಯಾಲಯವು ರದ್ದುಗೊಳಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications