Ind vs Afg: ಭಾರತಕ್ಕೆ ಸೋಲಿನ ಆಘಾತ ನೀಡಿ ಫೈನಲ್ ತಲುಪಿದ ಅಫ್ಘಾನಿಸ್ತಾನ
ಒಮನ್‌ನ ಅಲ್ ಅಮರ್ಟ್‌ನಲ್ಲಿ ನಡೆದ ಉದಯೋನ್ಮುಖ ತಂಡಗಳ ಏಷ್ಯಾಕಪ್ ಟಿ20 ಪಂದ್ಯಾವಳಿಯಲ್ಲಿ ಭಾರತಕ್ಕೆ ಸೋಲಿನ ಆಘಾತ ಎದುರಾಗಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ಸೋಲಿನ ಶಾಕ್ ಕೊಟ್ಟ ಅಫ್ಘಾನಿಸ್ತಾನ ಫೈನಲ್‌ಗೆ ಪ್ರವೇಶ ಪಡೆದುಕೊಂಡಿದೆ. ರಮಣದೀಪ್ ಸಿಂಗ್ ಅವರ ಏಕಾಂಗಿ ಹೋರಾಟದ ನಡುವೆಯೂ ಅಫ್ಘಾನಿಸ್ತಾನ 20 ರನ್‌ಗಳ ಸುಲಭ ಗೆಲುವು ಸಾಧಿಸಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ತಾನ ಎ ತಂಡವು 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 206 ರನ್‌ಗಳ ಬೃಹತ್ ಮೊತ್ತ ಕಲೆ ಹಾಕಿತು. ಸೆದಿಕುಲ್ಲಾ ಅಟಲ್ 52 ಎಸೆತಗಳಲ್ಲಿ 83 ರನ್ ಗಳಿಸಿದರೆ, ಜುಬೈದ್ ಅಕ್ಬರಿ 41 ಎಸೆತಗಳಲ್ಲಿ 64 ರನ್ ಗಳಿಸುವ ಮೂಲಕ ಮೊದಲ ವಿಕೆಟ್‌ಗೆ 137 ರನ್ ಕಲೆಹಾಕಿದರು. ಕರೀಮ್ ಜನತ್ 20 ಎಸೆತಗಳಲ್ಲಿ 41 ರನ್ ಗಳಿಸುವ ಮೂಲಕ ತಂಡದ ಮೊತ್ತ 200 ಗಡಿ ದಾಟಲು ಕಾರಣವಾದರು. ಭಾರತದ ಪರವಾಗಿ ರಸಿಕ್ ಸಲಾಮ್ ಮಾತ್ರ 3 ವಿಕೆಟ್ ಪಡೆದರೆ, ಆಕಿಬ್ ಖಾನ್ 1 ವಿಕೆಟ್ ಪಡೆದರು.

ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ ಎ ತಂಡವು 13 ಓವರ್ ಗಳಾಗುವಷ್ಟರಲ್ಲಿ 100 ರನ್ ಗಳಿಸುವ ವೇಳೆಗೆ ಐವರು ಪ್ರಮುಖ ಬ್ಯಾಟರ್ ಗಳನ್ನು ಕಳೆದುಕೊಂಡಿತು. ಬಳಿಕ ನಿಶಾಂತ್ ಸಿಂಧು ಮತ್ತು ರಮಣದೀಪ್ ಸಿಂಗ್ ಸ್ಫೋಟಕ ಬ್ಯಾಟಿಂಗ್ ಮಾಡುವ ಮೂಲಕ ಹೋರಾಟ ಕೊಟ್ಟರೂ, ಬೃಹತ್ ಮೊತ್ತವನ್ನು ಬೆನ್ನಟ್ಟಲು ಸಾಧ್ಯವಾಗಲಿಲ್ಲ.
ನಿಶಾಂತ್ ಸಿಂಧು 13 ಎಸೆತಗಳಲ್ಲಿ 23 ರನ್ ಗಳಿಸಿದರೆ, ರಮಣದೀಪ್ ಸಿಂಗ್ 34 ಎಸೆತಗಳಲ್ಲಿ 8 ಬೌಂಡರಿ 2 ಸಿಕ್ಸರ್ ಸಹಿತ 64 ರನ್ ಗಳಿಸಿದರು. ನೇಹಲ್ ವಧೇರಾ 20 ರನ್, ಆಯುಷ್ ಬದೋನಿ 31 ರನ್, ತಿಲಕ್ ವರ್ಮಾ 16 ರನ್ ಗಳಿಸಿದರೆ, ಪ್ರಭ್‌ಸಿಮ್ರನ್ ಸಿಂಗ್ 19 ರನ್ ಗಳಿಸಿದರು. ಅಫ್ಘಾನಿಸ್ತಾನದ ಪರ ಅಲ್ಲಾ ಘಜನ್‌ಫರ್ ಮತ್ತು ಅಬ್ದುಲ್ ರಹಮಾನ್ ತಲಾ 2 ವಿಕೆಟ್ ಪಡೆದರು. ಅಂತಿಮವಾಗಿ ಭಾರತ 20 ಓವರ್ ಗಳಲ್ಲಿ 186 ರನ್ ಗಳಿಸಲು ಮಾತ್ರ ಸಾಧ್ಯವಾಯಿತು.
ಫೈನಲ್‌ನಲ್ಲಿ ಅಫ್ಘಾನಿಸ್ತಾನ-ಶ್ರೀಲಂಕಾ ಮುಖಾಮುಖಿ
ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಎ ತಂಡದ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಶ್ರೀಲಂಕಾ ಎ ತಂಡ ಫೈನಲ್‌ಗೆ ಪ್ರವೇಶಿಸಿದೆ. ಅಕ್ಟೋಬರ್ 27, ಭಾನುವಾರ ಫೈನಲ್ ಪಂದ್ಯ ನಡೆಯಲಿದ್ದು, ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ತಂಡಗಳು ಪ್ರಶಸ್ತಿಗಾಗಿ ಸೆಣೆಸಾಟ ನಡೆಸಲಿವೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ












Click it and Unblock the Notifications