T20 World Cup: ಆಸೀಸ್ ಮಣಿಸಿ ಇತಿಹಾಸ ಬರೆದ ಅಫ್ಘಾನಿಸ್ತಾನ
ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಗೆಲುವು ಸಾಧಿಸುವ ಅಫ್ಘಾನಿಸ್ತಾನ ಕನಸಿಗೆ ಆಸ್ಟ್ರೇಲಿಯಾ ಕೊಳ್ಳಿ ಇಟ್ಟಿತ್ತು. ಆದರೆ ವೆಸ್ಟ್ ಇಂಡೀಸ್‌ನ ಕಿಂಗ್ ಸ್ಟನ್‌ನಲ್ಲಿ ನಡೆದ ಟಿ20 ವಿಶ್ವಕಪ್ ಸೂಪರ್ 8 ಪಂದ್ಯದಲ್ಲಿ ಅಫ್ಘಾನಿಸ್ತಾನ್ 21 ರನ್‌ಗಳಿಂದ ಮಾಜಿ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಮಣಿಸಿ, ಇತಿಹಾಸ ಬರೆದಿದೆ.
ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 148 ರನ್ ಸೇರಿಸಿತು. ಇದಕ್ಕುತ್ತರವಾಗಿ ಆಸ್ಟ್ರೇಲಿಯಾ 19.2 ಓವರ್‌ಗಳಲ್ಲಿ 127 ರನ್ ಸೇರಿಸಿ ಆಲೌಟ್ ಆಯಿತು.

ಈ ಗೆಲುವಿನ ಮೂಲಕ ಅಫ್ಘಾನಿಸ್ತಾನ ಸೂಪರ್ 8ರಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಪಡೆದಿದೆ. ಇನ್ನು ಆಸ್ಟ್ರೇಲಿಯಾ ಸಹ ಆಡಿದ ಎರಡು ಪಂದ್ಯಗಳಲ್ಲಿ ಒಂದು ಗೆಲುವು, ಒಂದು ಸೋಲು ಕಂಡಿದ್ದು, 2 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಭಾರತ ಅಗ್ರಸ್ಥಾನದೊಂದಿಗೆ ಟಿ20 ವಿಶ್ವಕಪ್ ಸೆಮಿಫೈನಲ್ ಪ್ರವೇಶಿಸಿದೆ.
ಭರ್ಜರಿ ಆರಂಭ
ಪಂದ್ಯದಲ್ಲಿ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ರಶೀದ್ ಖಾನ್ ಪಡೆ ಭರ್ಜರಿ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ ತಂಡದ ಆರಂಭಿಕರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅಫ್ಘಾನ್ ಪರ ರಹಮಾನುಲ್ಲಾ ಗುರ್ಬಾಜ್ ಹಾಗೂ ಇಬ್ರಾಹಿಂ ಜದ್ರಾನ್ ಮೊದಲ ವಿಕೆಟ್‌ಗೆ 118 ರನ್ ಗಳ ಜೊತೆಯಾಟ ನೀಡಿದರು. ರಹಮಾನುಲ್ಲಾ ಗುರ್ಬಾಜ್ 4 ಬೌಂಡರಿ, 4 ಸಿಕ್ಸರ್‌ಗಳ ನೆರವಿನಿಂದ 60 ರನ್ ಸಿಡಿಸಿದರು. ಇನ್ನೋರ್ವ ಆರಂಭಿಕ ಆಟಗಾರ ಇಬ್ರಾಹಿಂ ಜದ್ರಾನ್ 6 ಬೌಂಡರಿಗಳ ನೆರವಿನಿಂದ 51 ರನ್ ಸಿಡಿಸಿ ತಂಡಕ್ಕೆ ನೆರವಾದರು.

ಉಳಿದ ಆಟಗಾರರು ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರಿಣಾಮ ಅಫ್ಘಾನಿಸ್ತಾನ 148 ರನ್‌ಗಳನ್ನು ಕಲೆ ಹಾಕಲಷ್ಟೇ ಶಕ್ತವಾಯಿತು. ಆಸ್ಟ್ರೇಲಿಯಾ ಪ್ಯಾಟ್ ಕಮಿನ್ಸ್, ಆಡಂ ಜಂಪಾ 2 ವಿಕೆಟ್ ಪಡೆದರು.
ಕಳಪೆ ಆರಂಭ
ಬ್ಯಾಟಿಂಗ್‌ಗೆ ಕಠಿಣವಾಗಿದ್ದ ಪಿಚ್‌ನಲ್ಲಿ ಆಸ್ಟ್ರೇಲಿಯಾದ ಆರಂಭಿಕರಾದ ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್ ರನ್ ಕಲೆ ಹಾಕುವಲ್ಲಿ ವಿಫಲರಾದರು. ನಾಯಕ ಮಿಚೆಲ್ ಮಾರ್ಷ್ (12) ರನ್ ಕಲೆ ಹಾಕುವಲ್ಲಿ ವಿಫಲರಾದರು. ಒಂದು ಹಂತದಲ್ಲಿ ಮಾರ್ಕಸ್ ಸ್ಟೋಯಿನಿಸ್ (11) ಅಫ್ಘಾನಿಸ್ತಾನ ತಂಡಕ್ಕೆ ಕೊಂಚ ಕಾಟ ನೀಡುವ ಸೂಚನೆ ನೀಡಿದರು. ಆದರೆ ಇವರ ಆಟಕ್ಕೆ ಗುಲ್ಬದೀನ್ ನೈಬ್ ಬ್ರೇಕ್ ಹಾಕಿದರು.

ಗ್ಲೇನ್ ಮ್ಯಾಕ್‌ವೇಲ್ ಏಕಾಂಗಿ ಹೋರಾಟ ನಡೆಸಿದರು. ಇವರು 41 ಎಸೆತಗಳಲ್ಲಿ 6 ಬೌಂಡರಿ, 3 ಸಿಕ್ಸರ್ ಸಹಾಯದಿಂದ 59 ರನ್ ಬಾರಿಸಿ ಆರನೇ ವಿಕೆಟ್ ರೂಪದಲ್ಲಿ ಔಟ್ ಆದರು. ಇವರನ್ನು ಬಿಟ್ಟರೆ ಉಳಿದೆಲ್ಲಾ ಬ್ಯಾಟರ್‌ಗಳು ರನ್ ಕಲೆ ಹಾಕುವಲ್ಲಿ ವಿಫಲರಾದರು.
ಅಫ್ಘಾನಿಸ್ತಾನ ತಂಡದ ಗುಲ್ಬದೀನ್ ನೈಬ್ 20 ರನ್ ನೀಡಿ ನಾಲ್ಕು ವಿಕೆಟ್ ಪಡೆದರು. ವೇಗಿ ನವೀನ್ ಉಲ್ ಹಕ್ ಮೂರು ವಿಕೆಟ್ ಪಡೆದು ಗೆಲುವಿನಲ್ಲಿ ಮಿಂಚಿದರು.

ಎರಡು ಬಾರಿ ಆಘಾತ
ಅಫ್ಘಾನಿಸ್ತಾನ ತಂಡದ ಇದಕ್ಕೂ ಮೊದಲು ಆಸ್ಟ್ರೇಲಿಯಾ ತಂಡವನ್ನು ಎರಡು ಬಾರಿ ಸೋಲಿಸುವ ಅವಕಾಶವನ್ನು ಕೈ ಚೆಲ್ಲಿತ್ತು. 2022ರಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಆಫ್ಘಾನ್ 4 ರನ್‌ಗಳಿಂದ ಸೋಲು ಕಂಡಿದ್ದರೆ, ಮುಂಬೈನಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲೂ ಅಫ್ಘಾನಿಸ್ತಾನ ಗೆಲುವಿನ ಸನಿಹದಲ್ಲಿ ಎಡವಿತ್ತು. ಈ ಪಂದ್ಯದಲ್ಲಿ ಗ್ಲೇನ್ ಮ್ಯಾಕ್ಸ್‌ವೆಲ್ ಏಕಾಂಗಿ ಹೋರಾಟ ನಡೆಸಿ, ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications