ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತ ಟೆಸ್ಟ್ ತಂಡಕ್ಕೆ ತಲೆನೋವು: ನಾಯಕ ರೋಹಿತ್‌ಗೆ ಕೊರೊನಾ ಸೋಂಕು

|
Google Oneindia Kannada News

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಶನಿವಾರ ರಾತ್ರಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ಟೀಮ್ ಇಂಡಿಯಾ ನಾಯಕ ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದು, ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮರುನಿಗದಿಪಡಿಸಲಾದ ಐದನೇ ಟೆಸ್ಟ್ ಪಂದ್ಯದ ಮೊದಲು ರೋಹಿತ್ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಜುಲೈ 1 ರಂದು ಪಂದ್ಯ ಪ್ರಾರಂಭವಾಗಲಿದೆ. ಅಭ್ಯಾಸ ಪಂದ್ಯದ ಮೂರನೇ ದಿನ ಟೀಮ್ ಇಂಡಿಯಾ ನಾಯಕ ರೋಹಿತ್ ಕೂಡ ಬ್ಯಾಟಿಂಗ್‌ಗೆ ಬಂದಿರಲಿಲ್ಲ.

ಮಾಲ್ಡೀವ್ಸ್‌ ನಿಂದ ಬಂದ ಕೊಹ್ಲಿಗೆ ಕೋವಿಡ್, ಸರಣಿ ಗತಿಯೇನು?ಮಾಲ್ಡೀವ್ಸ್‌ ನಿಂದ ಬಂದ ಕೊಹ್ಲಿಗೆ ಕೋವಿಡ್, ಸರಣಿ ಗತಿಯೇನು?

ಬಿಸಿಸಿಐ ಟ್ವೀಟ್‌ನಲ್ಲಿ, "ಟೀಮ್‌ಇಂಡಿಯಾ ಕ್ಯಾಪ್ಟನ್ ರೋಹಿತ್ ಶರ್ಮಾ ಶನಿವಾರ ನಡೆಸಿದ ರ್ಯಾಪಿಡ್ ಆಂಟಿಜೆನ್ ಟೆಸ್ಟ್ (RAT) ನಂತರ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಅವರು ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿರುತ್ತಾರೆ ಮತ್ತು ಬಿಸಿಸಿಐ ವೈದ್ಯಕೀಯ ತಂಡದ ಆರೈಕೆಯಲ್ಲಿದ್ದಾರೆ" ಎಂದು ಹೇಳಿದೆ.

After Virat Kohli Now Captain Rohit Sharma Tetsed Positive For COVID-19

ಕಳೆದ ವರ್ಷ ಟೆಸ್ಟ್ ಸರಣಿ ವೇಳೆ, ವಿರಾಟ್ ಕೊಹ್ಲಿ ಮತ್ತು ಇತರ ಕೆಲವು ಆಟಗಾರರೊಂದಿಗೆ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿದ್ದ ಅಂದಿನ ಮುಖ್ಯ ಕೋಚ್ ರವಿಶಾಸ್ತ್ರಿ ಸೇರಿದಂತೆ ಟೀ ಇಂಡಿಯಾ ಶಿಬಿರದಲ್ಲಿ ಕೋವಿಡ್ -19 ಪ್ರಕರಣಗಳು ಪತ್ತೆಯಾದ ನಂತರ ಇಂಗ್ಲೆಂಡ್ ಪ್ರವಾಸವನ್ನು ಮೊಟಕುಗೊಳಿಸಲಾಗಿತ್ತು.

ಐತಿಹಾಸಿಕ ಸರಣಿ ಜಯದ ನಿರೀಕ್ಷೆಯಲ್ಲಿ

ಅಮಾನತುಗೊಂಡಿರುವ 5 ನೇ ಟೆಸ್ಟ್ ಈಗ ಜುಲೈ 1 ರಿಂದ ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿದೆ. ಭಾರತ ಮತ್ತು ಇಂಗ್ಲೆಂಡ್ ಒಂದು ಪಂದ್ಯದ ಟೆಸ್ಟ್ ಪಂದ್ಯದ ನಂತರ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಅಂತರಾಷ್ಟ್ರೀಯ ಸರಣಿಯನ್ನು ಆಡಲಿದೆ.

ಟೆಸ್ಟ್ ತಂಡ ಸೇರಿಕೊಂಡ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಟೆಸ್ಟ್ ತಂಡ ಸೇರಿಕೊಂಡ ಮುಖ್ಯ ಕೋಚ್ ರಾಹುಲ್ ದ್ರಾವಿಡ್

ಮಾಲ್ಡೀವ್ಸ್‌ನಲ್ಲಿ ರಜಾದಿನಗಳಿಂದ ಹಿಂದಿರುಗಿದ ನಂತರ ಕೊಹ್ಲಿ ಕೂಡ ಕೋವಿಡ್‌ಗೆ ಸೋಂಕು ಪತ್ತೆಯಾಗಿತ್ತು. ಭಾರತದ ಮಾಜಿ ನಾಯಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ. ಕೊಹ್ಲಿ ಈಗ ಲೀಸೆಸ್ಟರ್‌ಶೈರ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆಡುತ್ತಿದ್ದಾರೆ.

ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಇಂಗ್ಲೆಂಡ್ ನೆಲದಲ್ಲಿ ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲುವ ಮೂಲಕ ಇತಿಹಾಸವನ್ನು ಸೃಷ್ಟಿಸಲು ಕಣ್ಣಿಟ್ಟಿದ್ದಾರೆ. ಕಳೆದ ವರ್ಷ ಕೋವಿಡ್ ಕಾರಣದದಿಂದ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊನೆಯ ಪಂದ್ಯವನ್ನು ರದ್ದುಪಡಿಸಲಾಗಿತ್ತು. ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದೆ. ಒಂದು ಪಂದ್ಯಡ್ರಾನಲ್ಲಿ ಅಂತ್ಯಗೊಂಡಿದೆ. ಈಗ ಸರಣಿಯ ಕೊನೆಯ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಇಲ್ಲ ಗೆಲವು ಸಾಧಿಸಿದರೆ ಭಾರತ ಐತಿಹಾಸಿಕ ಸರಣಿ ಜಯ ಸಾಧಿಸಲಿದೆ. 2007ರ ನಂತರ ಟೀಂ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ.

ಕಳೆದ ವರ್ಷದ ಸರಣಿಗೆ ಹೋಲಿಸಿದರೆ, ಎರಡೂ ತಂಡಗಳಲ್ಲಿ ಬಹುದೊಡ್ಡ ಬದಲಾವಣೆಯಾಗಿದೆ. ಟೀಂ ಇಂಡಿಯಾದ ಟೆಸ್ಟ್ ನಾಯಕತ್ವವನ್ನು ವಿರಾಟ್ ಕೊಹ್ಲಿ ಬದಲು ರೋಹಿತ್ ಶರ್ಮ ವಹಿಸಿಕೊಂಡಿದ್ದರೆ, ಇಂಗ್ಲೆಂಡ್ ತಂಡ ಜೋ ರೂಟ್ ಬದಲು ಬೆನ್ ಸ್ಟೋಕ್ಸ್ ನಾಯಕತ್ವವನ್ನು ವಹಿಸಿಕೊಂಡಿದ್ದಾರೆ.

English summary
Team India skipper Rohit Sharma tested positive for COVID-19. The Team India captain is currently in isolation at the team hotel and is under the care of the BCCI medical team.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X