T20 World Cup: ಬಲಿಷ್ಠ ತಂಡ ಪ್ರಕಟಿಸಿದ ದಕ್ಷಿಣ ಆಫ್ರಿಕಾ
ಜೂನ್ 1ರಿಂದ ಆರಂಭವಾಗಲಿರುವ ಟಿ20 ವಿಶ್ವಕಪ್ ಪಂದ್ಯಾವಳಿಗೆ ದಕ್ಷಿಣ ಆಫ್ರಿಕಾ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಐಪಿಎಲ್‌ನಲ್ಲಿ ಅಬ್ಬರಿಸುತ್ತಿರುವ ಆಟಗಾರರು ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ಮತ್ತು ಯುಎಸ್‌ಎ ನಲ್ಲಿ ಪಂದ್ಯಾವಳಿ ನಡೆಯುವ ಕಾರಣ ಸ್ಪಿನ್ನರ್ ಗಳಿಗೂ ತಂಡದಲ್ಲಿ ಅವಕಾಶ ಸಿಕ್ಕಿದೆ.
ಐಡೆನ್ ಮಾರ್ಕ್ರಾಮ್ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಡೇವಿಡ್ ಮಿಲ್ಲರ್ ಕೂಡ ತಂಡದಲ್ಲಿ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಪಿನ್ನರ್ ಗಳಾದ ಕೇಶವ್ ಮಹರಾಜ್ ಮತ್ತು ತಬ್ರೈಜ್ ಶಂಸಿ ಅವಕಾಶ ಪಡೆದುಕೊಂಡಿದ್ದಾರೆ.

ಸ್ಫೋಟಕ ಬ್ಯಾಟರ್ ಗಳಾದ ಕ್ವಿಂಟನ್ ಡಿ ಕಾಕ್, ಹೆನ್ರಿಚ್ ಕ್ಲಾಸೆನ್ ಕೂಡ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ವೇಗಿಗಳಾದ ಜೆರಾಲ್ಡ್ ಕೊಯೆಟ್ಜಿ, ಆನ್ರಿಚ್ ನೊಕಿಯಾ, ಕಗಿಸೊ ರಬಾಡಾ ಅವಕಾಶ ಪಡೆದುಕೊಂಡಿದ್ದಾರೆ.
ಜೂನ್ 2ರಿಂದ ಟಿ20 ವಿಶ್ವಕಪ್‌ಗೆ ಚಾಲನೆ ಸಿಗಲಿದೆ. ಜೂನ್ 3ರಂದು ದಕ್ಷಿಣ ಆಫ್ರಿಕಾ ಶ್ರೀಲಂಕಾ ತಂಡವನ್ನು ಎದುರಿಸಲಿದೆ. ಕಳೆದ ವಿಶ್ವಕಪ್‌ನಲ್ಲಿ ಅಷ್ಟೇನೂ ಉತ್ತಮ ಪ್ರದರ್ಶನ ನೀಡದ ದಕ್ಷಿಣ ಆಫ್ರಿಕಾ ಈ ಬಾರಿ ವೇಗದ ಬೌಲಿಂಗ್, ಸ್ಪಿನ್ ಮತ್ತು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿದ್ದು, ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ.
ಟಿ20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ತಂಡ
ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನೊಕಿಯಾ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್, ತಬ್ರೈಜ್ ಶಂಸಿ.
ಮೀಸಲು ಆಟಗಾರರು: ನಾಂದ್ರೆ ಬರ್ಗರ್, ಲುಂಗಿ ಎನ್ಗಿಡಿ.












Click it and Unblock the Notifications