85..90..20.. ಆಸ್ಟ್ರೇಲಿಯಾಗೆ ನಡುಕ ಹುಟ್ಟಿಸಿದ್ದ ಟೀಮ್ ಇಂಡಿಯಾ ಸ್ಟಾರ್ ಆಟಗಾರ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ

Ajinkya Rahane: ಭಾರತೀಯ ಕ್ರಿಕೆಟ್‌ ಕಂಡ ಅತ್ಯಂತ ತಾಳ್ಮೆಯ ಬ್ಯಾಟರ್, ಬಾರ್ಡರ್-ಗವಾಸ್ಕರ್ ಟ್ರೋಫಿ ವಿಜೇತ ನಾಯಕ ಅಜಿಂಕ್ಯ ರಹಾನೆ ಅವರು ಇಂದು (ಜುಲೈ 30) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹಾಗಾದ್ರೆ ಅವರ ಸಾಧನೆಗಳೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಭಾರತೀಯ ತಂಡಕ್ಕೆ ಹಲವು ಬಾರಿ ಸಂಕಷ್ಟದ ಪರಿಸ್ಥಿತಿಗಳಲ್ಲಿ ಆಸರೆಯಾಗಿ ಬ್ಯಾಟ್‌ ಬೀಸಿ ನೆರವಾಗಿದ್ದ ರಹಾನೆ ಶಾಂತಸ್ವಭಾವದ ನಡವಳಿಕೆಯಿಂದಲೇ ಜಗತ್ತಿನಾದ್ಯಂತ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು. ಇದೀಗ ಅವರು ದಿಢೀರ್ ವಿದಾಯ ಹೇಳಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.

Ajinkya Rahane Announces International Retirement Career Stats Records amp amp Border-Gavaskar Heroics

ಭಾರತವನ್ನ ಯಶಸ್ವಿಯಾಗಿ ಮನ್ನಡೆಸಿದ್ದ ರಹಾನೆ

ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅಜಿಂಕ್ಯ ರಹಾನೆ ಅವರ ಹೆಸರನ್ನು ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತೆ ಮಾಡಿದ್ದು 2020-21ರ ಆಸ್ಟ್ರೇಲಿಯಾ ಪ್ರವಾಸ. ಅಡಿಲೇಡ್‌ನಲ್ಲಿ ನಡೆದ ಮೊದಲ ಟೆಸ್ಟ್‌ನ ದ್ವಿತೀಯ ಇನಿಂಗ್ಸ್‌ನಲ್ಲಿ ಭಾರತ ಕೇವಲ 36 ರನ್‌ಗಳಿಗೆ ಆಲೌಟ್ ಆಗಿ ತೀವ್ರ ಮುಖಭಂಗ ಅನುಭವಿಸಿತ್ತು. ಜೊತೆಗೆ ಆಗಿನ ನಾಯಕ ವಿರಾಟ್ ಕೊಹ್ಲಿ ಅವರು ವೈಯಕ್ತಿಕ ಕಾರಣಗಳಿಂದ ತಾಯ್ನಾಡಿಗೆ ಮರಳಿದ್ದರು.

ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ನಾಯಕತ್ವದ ಹೊಣೆ ಹೊತ್ತ ರಹಾನೆ ಅವರು, ಮೆಲ್ಬೋರ್ನ್‌ನಲ್ಲಿ ನಡೆದ ಎರಡನೇ ಟೆಸ್ಟ್‌ನಲ್ಲಿ ಭರ್ಜರಿ ಶತಕ ಸಿಡಿಸಿ ತಂಡಕ್ಕೆ ಭರ್ಜರಿ ಗೆಲುವು ತಂದುಕೊಟ್ಟರು. ರಹಾನೆ ಅವರ ಶಾಂತ ಹಾಗೂ ಉತ್ತಮ ನಾಯಕತ್ವದ ಬಲದಿಂದ ಕಾಂಗರೂ ಪಡೆಗೆ ಅವರದ್ದೇ ತವರಲ್ಲಿ ಸವಾಲೆಸೆದ ಭಾರತ ಅಂತಿಮವಾಗಿ 2-1 ಅಂತರದಲ್ಲಿ ಸರಣಿ ಕೈವಶ ಮಾಡಿಕೊಂಡು ಇತಿಹಾಸ ನಿರ್ಮಿಸಿತು.

ಟೆಸ್ಟ್ ಕ್ರಿಕೆಟ್‌ನಲ್ಲಿ ರಹಾನೆ ಸಾಧನೆ

ಪ್ರಥಮ ದರ್ಜೆ ಮತ್ತು ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಮಧ್ಯಮ ಕ್ರಮಾಂಕದ ಬೆನ್ನೆಲುಬಾಗಿ ನಿಂತ ರಹಾನ ವಿದೇಶಿ ನೆಲದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರಲ್ಲಿ ಒಬ್ಬರು. ಇಂಗ್ಲೆಂಡ್‌ನ ಲಾರ್ಡ್ಸ್, ಆಸ್ಟ್ರೇಲಿಯಾದ ಮೆಲ್ಬೋರ್ನ್ ಹಾಗೂ ದಕ್ಷಿಣ ಆಫ್ರಿಕಾದ ಕಠಿಣ ಪಿಚ್‌ಗಳಲ್ಲಿ ಅವರು ಬಾರಿಸಿದ ಶತಕಗಳು ಸದಾ ಸ್ಮರಣೀಯವಾಗಿವೆ.

ಮೂರು ಮಾದರಿಯಲ್ಲಿನ ಸಾಧನೆಗಳ ವಿವರ

* ಭಾರತದ ಪರ 85 ಟೆಸ್ಟ್ ಪಂದ್ಯಗಳನ್ನಾಡಿರುವ ರಹಾನೆ ಅವರು 38.46 ಸರಾಸರಿಯಲ್ಲಿ 5,077 ರನ್ ಕಲೆಹಾಕಿದ್ದಾರೆ. ಇದರಲ್ಲಿ 12 ಶತಕಗಳು ಹಾಗೂ 26 ಅರ್ಧಶತಕಗಳು ಸೇರಿವೆ. ಅಲ್ಲದೆ ಏಕದಿನ ಹಾಗೂ ಟಿ20 ಕ್ರಿಕೆಟ್‌ನಲ್ಲೂ ಭಾರತಕ್ಕೆ ಹಲವು ಪಂದ್ಯಶ್ರೇಷ್ಠ ಪ್ರದರ್ಶನಗಳನ್ನು ನೀಡಿದ ಕೀರ್ತಿ ಹೊಂದಿದ್ದಾರೆ. 2015ರ ಏಕದಿನ ವಿಶ್ವಕಪ್ ಸೇರಿದಂತೆ ಪ್ರಮುಖ ಸರಣಿಗಳಲ್ಲಿ ಆರಂಭಿಕ ಬ್ಯಾಟರ್ ಹಾಗೂ ಮೂರನೇ ಕ್ರಮಾಂಕದಲ್ಲಿ ತಂಡಕ್ಕೆ ಆಸರೆ ಆಗಿದ್ದರು.

* ಟೀಮ್ ಇಂಡಿಯಾ ಪರ 90 ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ 35.26 ಸರಾಸರಿಯಲ್ಲಿ 3 ಶತಕ ಮತ್ತು 24 ಅರ್ಧಶತಕಗಳೊಂದಿಗೆ 2,962 ರನ್ ಕಲೆಹಾಕಿದ್ದಾರೆ.

* ಟೀಮ್ ಇಂಡಿಯಾ ಪರ 20 ಟಿ20 ಕ್ರಿಕೆಟ್ ಪಂದ್ಯಗಳಿಂದ 375 ರನ್ ಗಳಿಸಿದ್ದಾರೆ.

ಅತ್ಯುತ್ತಮ ಸ್ಲಿಪ್ ಫೀಲ್ಡರ್ ಎಂಬ ಹೆಗ್ಗಳಿಕೆ..

ರಹಾನೆ ಕೇವಲ ಬ್ಯಾಟಿಂಗ್ ಮಾತ್ರವಲ್ಲದೆ ಟೆಸ್ಟ್ ಕ್ರಿಕೆಟ್‌ನಲ್ಲಿ ಅತ್ಯಂತ ಉತ್ತಮ ಸ್ಲಿಪ್ ಫೀಲ್ಡರ್ ಆಗಿ ಗುರುತಿಸಿಕೊಂಡಿದ್ದರು. ಟೆಸ್ಟ್ ಮಾದರಿಯ ಕ್ರಿಕೆಟ್‌ನಲ್ಲಿ ಬರೋಬ್ಬರಿ 99 ಕ್ಯಾಚ್‌ಗಳನ್ನು ಹಿಡಿದ ಹೆಗ್ಗಳಿಕೆ ಇವರದ್ದಾಗಿದೆ. ಒಂದೇ ಟೆಸ್ಟ್ ಪಂದ್ಯದಲ್ಲಿ 8 ಕ್ಯಾಚ್ ಹಿಡಿದು ವಿಶ್ವ ದಾಖಲೆಯನ್ನೂ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ ನಾಯಕನಾಗಿ ತಾವು ಮುನ್ನಡೆಸಿದ 6 ಟೆಸ್ಟ್ ಪಂದ್ಯಗಳಲ್ಲಿ ಒಂದರಲ್ಲೂ ಸೋಲನುಭವಿಸದೇ (4 ಗೆಲುವು, 2 ಡ್ರಾ) ಸಕ್ಸಸ್ ಕಂಡಿರುವ ನಾಯಕ ಎಂಬ ಹೆಗ್ಗಳಿಕೆಯೂ ರಹಾನೆ ಅವರದ್ದಾಗಿದೆ. ಇದೀಗ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ ಹೇಳಿದ್ದು, ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದಂತಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+