IPL 2023: ಮುಖೇಶ್ ಚೌಧರಿ ಐಪಿಎಲ್‌ನಿಂದ ಔಟ್: ಬದಲೀ ಆಟಗಾರನ ಹೆಸರಿಸಿದ ಸಿಎಸ್‌ಕೆ
ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಗಾಯದ ಕಾರಣದಿಂದಾಗಿ ಕೈಲ್ ಜೇಮಿಸನ್ ಹೊರಬಿದ್ದ ಬಳಿಕ ಈಗ ಮತ್ತೊಬ್ಬ ಬೌಲರ್ ಕೂಡ ಗಾಯದ ಕಾರಣದಿಂದಾಗಿ ಐಪಿಎಲ್‌ನಿಂದ ಹೊರಬಿದ್ದಿದ್ದಾರೆ. ತಂಡದ ಎಡಗೈ ವೇಗದ ಬೌಲರ್ ಮುಖೇಶ್ ಚೌಧರಿ 2023ರ ಐಪಿಎಲ್ ಟೂರ್ನಿಯಿಂದ ಹೊರಗುಳಿದಿದ್ದಾರೆ.
ಮುಖೇಶ್ ಚೌಧರಿ ಬದಲಾಗಿ ಮತ್ತೊಬ್ಬ ಬೌಲರ್ ನನ್ನು ತಂಡಕ್ಕೆ ಸೇರ್ಪಡೆ ಮಾಡಿಕೊಂಡಿದೆ. ಆಕಾಶ್ ಸಿಂಗ್ ಮುಖೇಶ್ ಬದಲಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ಕಳೆದ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮುಖೇಶ್ ಈ ಬಾರಿ ಐಪಿಎಲ್‌ನಲ್ಲಿ ಆಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ಗಾಯಗೊಂಡಿರುವ ಅವರು ಸದ್ಯ ಚೇತರಿಸಿಕೊಳ್ಳಲು ವಿಶ್ರಾಂತಿ ಪಡೆಯುತ್ತಿದ್ದಾರೆ.

2020ರಲ್ಲಿ ಅಂಡರ್-19 ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಿದ್ದ ಆಕಾಶ್ ಸಿಂಗ್ ಉತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದರು. ಈ ಮೊದಲು ರಾಜಸ್ಥಾನ ರಾಯಲ್ಸ್ ತಂಡದ ಭಾಗವಾಗಿದ್ದರು. ಎಡಗೈ ವೇಗದ ಬೌಲರ್ ಇದುವರೆಗೆ 9 ಲಿಸ್ಟ್ ಎ ಪಂದ್ಯಗಳು ಮತ್ತು 5 ಪ್ರಥಮ ದರ್ಜೆ ಪಂದ್ಯಗಳ ಜೊತೆ ಒಂಭತ್ತು ಟಿ20 ಪಂದ್ಯಗಳನ್ನು ಆಡಿದ್ದಾರೆ, ಮತ್ತು 31 ವಿಕೆಟ್ ಪಡೆದು ಮಿಂಚಿದ್ದಾರೆ. ಅವರು ಮೂಲ ಬೆಲೆ 20 ಲಕ್ಷ ರುಪಾಯಿಗೆ ಸಿಎಸ್‌ಕೆ ತಂಡದ ಪಾಲಾಗಿದ್ದಾರೆ.
ಪಂದ್ಯಾವಳಿ ಆರಂಭಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ಹಿನ್ನಡೆ
ಐಪಿಎಲ್ ಆರಂಭಕ್ಕೆ ಮುನ್ನವೇ ಸಿಎಸ್‌ಕೆ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಪ್ರಮುಖ ಬೌಲರ್ ಗಳು ಆರಂಭದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಕೈಲ್ ಜೆಮಿಸನ್ ಬದಲಾಗಿ ತಂಡಕ್ಕೆ ಆಯ್ಕೆಯಾಗಿರುವ ಸಿಸಂಡಾ ಮಗಲಾ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ, ಇದರ ಜೊತೆ ತಂಡದ ಪ್ರಮುಖ ಸ್ಪಿನ್ನರ್ ಮಹೀಶ ತೀಕ್ಷಾಣ ಕೂಡ ಏಪ್ರಿಲ್ 8ರವರೆಗೆ ಐಪಿಎಲ್ ಪಂದ್ಯಗಳಿಗೆ ಲಭ್ಯವಿರುವುದಿಲ್ಲ, ಈಗ ಮುಖೇಶ್ ಚೌಧರಿ ಕೂಡ ಐಪಿಎಲ್‌ನಿಂದ ಹೊರಗುಳಿದಿರುವುದು ತಂಡಕ್ಕೆ ಹಿನ್ನಡೆಯಾಗಿದೆ.

ಎಂಎಸ್ ಧೋನಿ ಮೊದಲ ಪಂದ್ಯಕ್ಕೆ ಮುನ್ನ ಫಿಟ್ ಆಗಿರುವುದು ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ಈ ಬಾರಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸದಲ್ಲಿದ್ದಾರೆ. 2022ರ ಐಪಿಎಲ್‌ನಲ್ಲಿ ಸಿಎಸ್‌ಕೆ ಗುಜರಾತ್ ಜೈಂಟ್ಸ್ ವಿರುದ್ಧ ಆಡಿದ ಎರಡೂ ಪಂದ್ಯಗಳಲ್ಲಿ ಸೋಲನುಭವಿಸಿತ್ತು, ಈ ಬಾರಿ ಹಾಲಿ ಚಾಂಪಿಯನ್ ವಿರುದ್ಧ ಮೊದಲ ಗೆಲುವು ಸಾಧಿಸುವ ಉತ್ಸಾಹದಲ್ಲಿದೆ.
ಮಾರ್ಚ್ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಅದ್ದೂರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ರಶ್ಮಿಕಾ ಮಂದಣ್ಣ, ತಮನ್ನಾ ಭಾಟಿಯಾ, ಅರ್ಜಿತ್ ಸಿಂಗ್ ಸೇರಿದಂತೆ ಹಲವು ಬಾಲಿವುಡ್ ತಾರೆಗಳು ಕಾರ್ಯಕ್ರಮ ನೀಡಲು ಸಿದ್ಧವಾಗಿದ್ದಾರೆ. ನಂತರ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಜೈಂಟ್ಸ್ ಮತ್ತು ನಾಲ್ಕು ಬಾರಿಯ ಚಾಂಪಿಯನ್ ತಂಡ ಸೆಣೆಸಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ರುತುರಾಜ್ ಗಾಯಕ್ವಾಡ್, ಅಂಬಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೈನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್, ಮತೀಶ ಚೌಧರಿ, ಮಹೀಶ ತೀಕ್ಷಾಣ, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಕ್ ರಶೀದ್, ನಿಶಾಂತ್ ಸಿಂಧು, ಕೈಲ್ ಜೇಮಿಸನ್, ಅಜಯ್ ಮಂಡಲ್, ಭಗತ್ ವರ್ಮಾ.












Click it and Unblock the Notifications