ಲೋಕಸಭಾ ಚುನಾವಣೆ: ಮಂಡ್ಯ ಕ್ಷೇತ್ರದ ಬಗ್ಗೆ ಮಾಹಿತಿ ಕೊಟ್ಟ ಜಿಲ್ಲಾಧಿಕಾರಿ

ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಹಾಗೂ ಪಾರದರ್ಶಕವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿ, ಭಾರತ ಚುನಾವಣಾ ಆಯೋಗವು 18ನೇ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಈಗಾಗಲೇ ಮಾದರಿ ನೀತಿ ಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಶನಿವಾರದಿಂದಲೇ ಜಿಲ್ಲೆಯ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆಯು ಜಾರಿಯಲ್ಲಿದೆ. ಮಂಡ್ಯ ಜಿಲ್ಲೆಯು ಸಾಮಾನ್ಯ ಕ್ಷೇತ್ರವಾಗಿದೆ.

Mandya DC

ಎಂಟು ವಿಧಾನಸಭಾ ಕ್ಷೇತ್ರಗಳಾದ ಮಳವಳ್ಳಿ, ಮದ್ದೂರು, ಮಂಡ್ಯ, ಮೇಲುಕೋಟೆ, ನಾಗಮಂಗಲ, ಕೆ ಆರ್ ಪೇಟೆ, ಶ್ರೀರಂಗಪಟ್ಟಣ , ಕೆ ಆರ್ ನಗರ ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮತದಾನ ಯಾವಾಗ?

ಭಾರತೀಯ ಚುನಾವಣಾ ಆಯೋಗ ಹೊರಡಿಸಿರುವ ಆದೇಶದ ಪ್ರಕಾರ ಮಾರ್ಚ್ 28 ರಂದು ಅಧಿಸೂಚನೆಯನ್ನು ಪ್ರಕಟಿಸಲಾಗುವುದು. ಮಾರ್ಚ್ 28 ರಿಂದ ಏಪ್ರಿಲ್ 4 ರವರೆಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲಿಲನೆ ನಡೆಯಲಿದ್ದು, ಏಪ್ರಿಲ್ 8 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ. ಏಪ್ರಿಲ್ 26 ರಂದು ಕ್ಷೇತ್ರದಲ್ಲಿ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಜೂನ್ 4 ರಂದು ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.

ಅಪರ ಜಿಲ್ಲಾಧಿಕಾರಿಗಳನ್ನೊಳಗೊಡಂತೆ 8 ವಿಧಾನಸಭಾ ಕ್ಷೇತ್ರಗಳಿಗೆ ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದರು.

ಮತದಾರರ ಸಂಖ್ಯೆ ಎಷ್ಟು?

ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಮಳವಳ್ಳಿ, ಮದ್ದೂರು, ಮೇಲುಕೋಟೆ, ಮಂಡ್ಯ, ಶ್ರೀರಂಗಪಟ್ಟಣ, ನಾಗಮಂಗಲ, ಕೆ.ಆರ್.ಪೇಟೆ ಹಾಗೂ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರಗಳಿದ್ದು, ಜನವರಿ 22 ರಂದು ಪ್ರಕಟವಾಗಿರುವ ಅಂತಿಮ ಮತದಾರರ ಪಟ್ಟಿಯಂತೆ ಜಿಲ್ಲೆಯಲ್ಲಿ 17,59,175 ಮತದಾರರಿದ್ದಾರೆ.

2074 ಮತಗಟ್ಟೆಗಳು

ಮತದಾನಕ್ಕಾಗಿ 2074 ಮತಗಟ್ಟೆಗಳನ್ನು ಸಿದ್ಧಪಡಿಸಲಾಗಿದ್ದು, ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ಮಳವಳ್ಳಿ- 272, ಮದ್ದೂರು-254, ಮೇಲುಕೋಟೆ-264, ಮಂಡ್ಯ-262, ಶ್ರೀರಂಗಪಟ್ಟಣ-249, ನಾಗಮಂಗಲ-260, ಕೃಷ್ಣರಾಜಪೇಟೆ-261, ಕೆ. ಆರ್ ನಗರ-252 ಮತಗಟ್ಟೆಗಳಿವೆ ಎಂದರು.

ಚುನಾವಣಾ ಪ್ರಚಾರದಲ್ಲಿ ಮಕ್ಕಳು, ಪ್ರಾಣಿ ಸೈನಿಕರು ಹಾಗೂ ಸೈನಿಕರ ಭಾವಚಿತ್ರ ಬಳಸುವಂತಿಲ್ಲ. ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ, ಎಂ.ಸಿ.ಎಂ.ಸಿ ಸಮಿತಿ, ಅಕೌಂಟಿಂಗ್ ಟೀಂ ಕಾರ್ಯನಿರ್ವಹಿಸಲಿದೆ ಎಂದರು.

ಇನ್ನು ಯಾವುದೇ ಅಹಿತಕರ ಘಟನೆಗೂ ಅವಕಾಶ ನೀಡದಂತೆ ಜಿಲ್ಲೆಯ ವ್ಯಾಪ್ತಿಯಲ್ಲಿ ಸೂಕ್ತ ಭದ್ರತೆ ಮಾಡಲಾಗುವುದು ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+