ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್
Virat Kohli: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಉದ್ಘಟಾನಾ ಪಂದ್ಯದಲ್ಲಿ ಎಸ್‌ಆರ್‌ಎಚ್ ವಿರುದ್ಧ ಆರ್‌ಸಿಬಿ ಪರ ಕೊಹ್ಲಿ ಅಬ್ಬರದ ಬ್ಯಾಟಿಂಗ್ ಆಡಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು. ಬಳಿಕ ಟೀಮ್ ಇಂಡಿಯಾ ಕ್ರಿಕೆಟರ್ ಅಂಬಟಿ ರಾಯುಡು ವಿರಾಟ್ ಬಗ್ಗೆ ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.
ಐಪಿಎಲ್ 2026ರ ಉದ್ಘಟನಾ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಅಬ್ಬರಿಸಿದ ನಂತರ, ಭಾರತದ ಮಾಜಿ ಕ್ರಿಕೆಟಿಗ ಅಂಬಟಿ ರಾಯುಡು ಅವರು ಕೊಹ್ಲಿ ಅವರ ಅಂತಾರಾಷ್ಟ್ರೀಯ ವೃತ್ತಿಜೀವನದ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ.

ಕೊಹ್ಲಿಗೆ ಅಂಬಟಿ ರಾಯುಡು ಇಟ್ಟ ಬೇಡಿಕೆ ಏನು?
ಬೆಂಗಳೂರಿನಲ್ಲಿ ನಡೆದ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದ ಬೆನ್ನಲ್ಲೇ, ಅಂಬಟಿ ರಾಯುಡು ಮಹತ್ವದ ಹೇಳಿಕೆ ನೀಡಿದ್ದಾರೆ. "ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ನಿವೃತ್ತಿ ನಿರ್ಧಾರವನ್ನು ವಾಪಸ್ ಪಡೆಯಬೇಕು ಮತ್ತು ಮತ್ತೆ ಟೆಸ್ಟ್ ತಂಡದ ನಾಯಕತ್ವ ವಹಿಸಿಕೊಳ್ಳಬೇಕು" ಎಂದು ಆಗ್ರಹಿಸಿದ್ದಾರೆ. 2025ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಕೊಹ್ಲಿ, ಈಗ ಅವರ ಫಾರ್ಮ್ ಮತ್ತು ಫಿಟ್‌ನೆಸ್ ನೋಡಿದರೆ ಮತ್ತೆ ಟೆಸ್ಟ್ ಕ್ರಿಕೆಟ್ ಆಡದಿರುವುದು ಭಾರತೀಯ ಕ್ರಿಕೆಟ್‌ಗೆ ದೊಡ್ಡ ನಷ್ಟ ಎಂದು ರಾಯುಡು ಅಭಿಪ್ರಾಯಪಟ್ಟಿದ್ದಾರೆ.
'ಇದು ಕೇವಲ ಟ್ರೈಲರ್ ಮಾತ್ರ'
"ವಿರಾಟ್ ಕೊಹ್ಲಿ ಅವರ ವಯಸ್ಸು 37 ಆಗಿದ್ದರೂ, ಅವರ ಫಿಟ್‌ನೆಸ್ ಅತ್ಯುತ್ತಮವಾಗಿದೆ. ಅವರು ಕನಿಷ್ಠ ಇನ್ನು 5 ರಿಂದ 6 ವರ್ಷಗಳ ಕಾಲ ಟೆಸ್ಟ್, ಏಕದಿನ ಪಂದ್ಯಗಳನ್ನು ಆಡಬಹುದು. ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ಕೊಹ್ಲಿ ಸಿಡಿಸಿದ ಅಜೇಯ 69 ರನ್ ಕೇವಲ 'ಟ್ರೈಲರ್' ಮಾತ್ರ, ಅವರ ಅಸಲಿ ಆಟ ಇನ್ನೂ ಹೊರಬರಬೇಕಿದೆ ಬರಬೇಕಿದೆ," ಎಂದು ರಾಯುಡು ಹೊಗಳಿದ್ದಾರೆ.
ವಿರಾಟ್ ಕೊಹ್ಲಿ ಟೆಸ್ಟ್‌ಗೆ ವಿದಾಯ ಹೇಳಿದ್ದು ಯಾವಾಗ?
ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್ ಗೆದ್ದ ನಂತರ ಅಂತಾರಾಷ್ಟ್ರೀಯ ಟಿ20 ಮಾದರಿಯ ಕ್ರಿಕೆಟ್‌ಗೆ ಮತ್ತು ಮೇ 12, 2025ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಪ್ರಸ್ತುತ ಅವರು ಕೇವಲ ಏಕದಿನ ಪಂದ್ಯಗಳಲ್ಲಿ ಮಾತ್ರ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಇನ್ನೂ ಇತ್ತೀಚೆಗಷ್ಟೇ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ವಿರಾಟ್ ಕೊಹ್ಲಿ ತಮ್ಮ ಹಳೆಯ ಫಾರ್ಮ್‌ಗೆ ಮರಳುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು.
ಸನ್ ರೈಸರ್ಸ್ ಹೈದರಾಬಾದ್ ನೀಡಿದ್ದ 202 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಕೊಹ್ಲಿ ಸುಲಭ ಜಯ ತಂದುಕೊಟ್ಟರು. ಕೇವಲ 38 ಎಸೆತಗಳಲ್ಲಿ 5 ಬೌಂಡರಿ, 5 ಸಿಕ್ಸರ್‌ಗಳ ಸಹಿತ ಅಜೇಯ 69 ರನ್ ಸಿಡಿಸಿ ಆರ್‌ಸಿಬಿ ಅಭಿಮಾನಿಗಳಿಗೆ 'ವಿಂಟೇಜ್' ಕೊಹ್ಲಿಯನ್ನು ನೆನಪಿಸಿದರು. ಈ ಅದ್ಭುತ ಇನ್ನಿಂಗ್ಸ್‌ನಲ್ಲಿ ಅವರು ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟುವ ಮೂಲಕ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.
ಈ ಕುರಿತು ಮಾತನಾಡಿದ ಅಂಬಟಿ ರಾಯುಡು, ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಆರ್‌ಸಿಬಿ ಪರ ಕೊಹ್ಲಿ ಆಡಿದ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಕೇವಲ ಆರಂಭ ಮಾತ್ರ. ಈ ಬಲಗೈ ಬ್ಯಾಟರ್ ಇನ್ಮುಂದೆ ಐದರಿಂದ ಆರು ವರ್ಷಗಳ ಕಾಲ ಕ್ರಿಕೆಟ್‌ನಲ್ಲಿ, ಅದರಲ್ಲೂ ವಿಶೇಷವಾಗಿ ಐಪಿಎಲ್‌ನಲ್ಲಿ ಸಂಪೂರ್ಣವಾಗಿ ಪ್ರಾಬಲ್ಯ ಸಾಧಿಸಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ವಿರಾಟ್ ಕೊಹ್ಲಿ ಅವರು ಮತ್ತೆ ಟೆಸ್ಟ್‌ಗೆ ಮರಳಬೇಕು ಎಂದು ಅಂಬಟಿ ರಾಯುಡು ಆಗ್ರಹಿಸಿದ್ದಾರೆ.












Click it and Unblock the Notifications