ಆರ್‌ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್
IPL 2026 RCB: ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿಯು ಸನ್‌ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಇದರ ಬೆನ್ನಲ್ಲೇ ಮತ್ತೆ ಇತ್ತೀಚೆಗಷ್ಟೇ ಆರ್‌ಸಿಬಿ ಖರೀದಿ ಮಾಡಿದ ಆರ್ಯಮಾನ್ ಬಿರ್ಲಾ ಹಾಗೂ ಅವರ ಸಹೋದರಿ ಅನನ್ಯಾ ಬಿರ್ಲಾ ಅವರು ಮತ್ತೆ ಸುದ್ದಿಯಲ್ಲಿದ್ದಾರೆ.
ಐಪಿಎಲ್ 2026 ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ಎದುರಾಳಿ ಎಸ್‌ಆರ್‌ಎಚ್ ನೀಡಿದ 202 ರನ್‌ಗಳ ಬೃಹತ್ ಗುರಿಯನ್ನು ಆರ್‌ಸಿಬಿ ಕೇವಲ 15.4 ಓವರ್‌ಗಳಲ್ಲಿ ತಲುಪಿತು. ಈ ಮೂಲಕ ಆರ್‌ಸಿಬಿ ಐಪಿಎಲ್ ಇತಿಹಾಸದಲ್ಲೇ 200ಕ್ಕೂ ಅಧಿಕ ರನ್‌ಗಳ ಗುರಿಯನ್ನು ಅತ್ಯಂತ ವೇಗವಾಗಿ ಬೆನ್ನಟ್ಟಿದ ಮೊದಲ ತಂಡ ಎಂಬ ದಾಖಲೆಯನ್ನು ತನ್ನದಾಗಿಸಿಕೊಂಡಿದೆ.

ಆರ್‌ಸಿಬಿ ದಾಖಲೆಯ ಮೊತ್ತಕ್ಕೆ ಮಾರಾಟ
ಆರ್‌ಸಿಬಿ ತಂಡವು ಐಪಿಎಲ್‌ನಲ್ಲೇ ಅತ್ಯಂತ ಹೆಚ್ಚು ಮೌಲ್ಯದ ಫ್ರಾಂಚೈಸಿಯಾಗಿ ಹೊರಹೊಮ್ಮಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಈ ತಂಡವನ್ನು ಅದರ ಹಿಂದಿನ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್‌ನಿಂದ ಬರೋಬ್ಬರಿ 1.78 ಬಿಲಿಯನ್ ಯುಎಸ್ ಡಾಲರ್ (ಸುಮಾರು 16,706 ಕೋಟಿ ರೂಪಾಯಿ) ನೀಡಿ ಖರೀದಿಸಿದೆ. ಇದು ಐಪಿಎಲ್ ಇತಿಹಾಸದಲ್ಲೇ ದಾಖಲೆಯ ಮೊತ್ತವಾಗಿದೆ.
ಆರ್‌ಸಿಬಿ ಗೆಲುವನ್ನ ಸಂಭ್ರಮಿಸಿದ ಅನನ್ಯಾ, ಆರ್ಯಮಾನ್
ಇನ್ನೂ ಶನಿವಾರ ನಡೆದ ಉದ್ಘಾಟನಾ ಪಂದ್ಯದಲ್ಲಿ ಆರ್‌ಸಿಬಿ ತಂಡದ ಐತಿಹಾಸಿಕ ಗೆಲುವಿಗೆ ಆದಿತ್ಯ ಬಿರ್ಲಾ ಗ್ರೂಪ್‌ನ ಅನನ್ಯಾ ಬಿರ್ಲಾ ಮತ್ತು ಸಹೋದರಿ ಆರ್ಯಮನ್ ಬಿರ್ಲಾ ಅವರು ಸಾಕ್ಷಿಯಾದರು. ಆರ್‌ಸಿಬಿ ದಾಖಲೆಯ ಗುರಿಯನ್ನು ಬೆನ್ನಟ್ಟಿ ಗೆಲುವು ಸಾಧಿಸುತ್ತಿದ್ದಂತೆ, ಸ್ಟೇಡಿಯಂನಲ್ಲಿದ್ದ ಅನನ್ಯಾ ಮತ್ತು ಆರ್ಯಮನ್ ಎದ್ದು ನಿಂತು ಚಪ್ಪಾಳೆ ತಟ್ಟುವ ಮೂಲಕ ಸಂಭ್ರಮಿಸಿದರು. ಈ ವಿಡಿಯೋ ಮತ್ತು ಫೋಟೋಗಳು ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಮೊದಲು ಬ್ಯಾಟಿಂಗ್ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 201 ರನ್ ಗಳಿಸಿತು. ಹೈದರಾಬಾದ್ ತಂಡವು 29 ರನ್‌ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದಾಗ, ನಾಯಕ ಇಶಾನ್ ಕಿಶನ್ ಜವಾಬ್ದಾರಿಯುತ ಆಟವಾಡಿ ಕೇವಲ 38 ಎಸೆತಗಳಲ್ಲಿ 80 ರನ್ ಸಿಡಿಸಿದರು. ಇನ್ನು ಕೆಳಕ್ರಮಾಂಕದಲ್ಲಿ ಅಂಕಿತ್ ವರ್ಮಾ ಕೇವಲ 18 ಎಸೆತಗಳಲ್ಲಿ 43 ರನ್ ಗಳಿಸುವ ಮೂಲಕ ತಂಡದ ಮೊತ್ತವನ್ನು 200ರ ಗಡಿ ದಾಟಿಸಿದರು.
ಸುಲಭವಾಗಿ ಗುರಿ ತಲುಪಿದ ಆರ್‌ಸಿಬಿ
ಹಾಲಿ ಚಾಂಪಿಯನ್ ಆರ್‌ಸಿಬಿ ಈ ಬೃಹತ್ ಗುರಿಯನ್ನು ಕೇವಲ 15.4 ಓವರ್‌ಗಳಲ್ಲಿ ಮುಟ್ಟುವ ಮೂಲಕ ಗೆಲುವು ಸಾಧಿಸಿತು. ಕನ್ನಡಿಗ ದೇವದತ್ ಪಡಿಕ್ಕಲ್ ಅವರು ಕೇವಲ 26 ಎಸೆತಗಳಲ್ಲಿ 61 ರನ್ ಸಿಡಿಸಿ ತಂಡಕ್ಕೆ ಭರ್ಜರಿ ಆರಂಭ ನೀಡಿದರು. ವಿರಾಟ್ ಕೊಹ್ಲಿ ಅಜೇಯ 69 ರನ್ ಸಿಡಿಸುವ ಮೂಲಕ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ರಜತ್ ಪಾಟಿದಾರ್ ಕೇವಲ 12 ಎಸೆತಗಳಲ್ಲಿ 31 ರನ್ ಚಚ್ಚುವ ಮೂಲಕ ರನ್ ವೇಗವನ್ನು ಹೆಚ್ಚಿಸಿದರು.
ಈ ಪಂದ್ಯದಲ್ಲಿ ಆರ್‌ಸಿಬಿ ಬೌಲಿಂಗ್ ವಿಭಾಗದಲ್ಲೂ ಮಿಂಚಿತು. ನ್ಯೂಜಿಲೆಂಡ್‌ನ ವೇಗಿ ಜೇಕಬ್ ಡಫಿ ಕೇವಲ 22 ರನ್ ನೀಡಿ 3 ಪ್ರಮುಖ ವಿಕೆಟ್ ಪಡೆಯುವ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಈ ಪಂದ್ಯದಲ್ಲಿ ಹೈದರಾಬಾದ್ ತಂಡವು ಆರಂಭಿಕ ಆಘಾತ ಅನುಭವಿಸಿದರೂ ಇಶಾನ್ ಕಿಶನ್ ಅವರ ಹೋರಾಟದ ಫಲವಾಗಿ 200ರ ಗಡಿ ದಾಟಲು ಸಾಧ್ಯವಾಯಿತು. ಆದರೆ ಆರ್‌ಸಿಬಿಯ ಸ್ಫೋಟಕ ಬ್ಯಾಟಿಂಗ್ ಮುಂದೆ ಈ ಮೊತ್ತ ಸಾಲದಾಯಿತು.
-
IPL 2026: ಆರ್‌ಸಿಬಿ-ಎಸ್‌ಆರ್‌ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL 2026 RCB Vs SRH: ಎಸ್ಆರ್ಎಚ್ನಿಂದ 13,00,00,000 ರೂಪಾಯಿ ಮೌಲ್ಯದ ಸ್ಟಾರ್ ಆಟಗಾರ ಔಟ್ -
RCB: ಆರ್‌ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB Playing 11 Prediction: ಎಸ್‌ಆರ್‌ಎಚ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11 -
RCB: ಆರ್‌ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
ಕಾಲ್ತುಳಿತದಲ್ಲಿ ಮೃತಪಟ್ಟ 11 ಅಭಿಮಾನಿಗಳಿಗೆ ಆರ್‌ಸಿಬಿ-ಎಸ್‌ಆರ್‌ಎಚ್ ಆಟಗಾರರಿಂದ ವಿಶೇಷ ಗೌರವ -
ಚಿನ್ನಸ್ವಾಮಿಯಲ್ಲಿ ಕನ್ನಡಿಗ ದೇವ್, ವಿರಾಟ್ ಅಬ್ಬರದ ಬ್ಯಾಟಿಂಗ್: ಆರ್‌ಸಿಬಿ ವಿರುದ್ಧ ಎಸ್‌ಆರ್‌ಎಚ್ ಹೀನಾಯು ಸೋಲು -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್‌ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ












Click it and Unblock the Notifications