IPL 2023: ಆಟವನ್ನು ಅರ್ಥ ಮಾಡಿಕೊಳ್ಳುವುದರಲ್ಲಿ ಆತ ಎಂಎಸ್ ಧೋನಿಗೆ ಸಮ ಎಂದ ಅನಿಲ್ ಕುಂಬ್ಳೆ
ಇಂಡಿಯನ್ ಪ್ರೀಮಿಯರ್ ಲೀಗ್‌ನ 16ನೇ ಆವೃತ್ತಿ ಇಂದಿನಿಂದ ಆರಂಭವಾಗುತ್ತಿದೆ. ಅಭಿಮಾನಿಗಳು ಈ ಟೂರ್ನಿಗಾಗಿ ಕಾತರದಿಂದ ಕಾಯುತ್ತಿದ್ದು ಈ ಕಾಯುವಿಕೆ ಇಂದಿಗೆ ಅಂತ್ಯವಾಗಲಿದೆ. ಈ ಟೂರ್ನಿಯಲ್ಲಿ ತಂಡಗಳು ಯಾವ ರೀತಿಯಲ್ಲಿ ಪ್ರದರ್ಶನ ನೀಡಲಿದೆ ಹಾಗೂ ತಮ್ಮ ನೆಚ್ಚಿನ ಆಟಗಾರರಿಂದ ಯಾವ ರೀತಿಯ ಪ್ರದರ್ಶನಗಳು ಬರಲಿದೆ ಎಂಬುದು ಕುತೂಹಲ ಮೂಡಿಸಿದೆ. ಈ ಸಂದರ್ಭದಲ್ಲಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಪ್ರತಿಕ್ರಿಯೆ ನೀಡಿದ್ದು ಹಾರ್ದಿಕ್ ಪಾಂಡ್ಯ ಬಗ್ಗೆ ವಿಶೇಷ ಪ್ರಶಂಸೆಯ ಮಾತುಗಳನ್ನು ಆಡಿದ್ದಾರೆ.
ಮಾಜಿ ನಾಯಕ ಅನಿಲ್ ಕುಂಬ್ಳೆ ಹಾರ್ದಿಕ್ ಪಾಂಡ್ಯ ಅವರನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿಗೆ ಹೋಲಿಸಿದ್ದಾರೆ. ದಿಗ್ಜ ಕ್ರಿಕೆಟಿಗ ಎಂಎಸ್ ಧೋನಿ ಅವರಂತೆಯೇ ಆಟವನ್ನು ಅರ್ಥೈಸಿಕೊಳ್ಳುವ ಜಾಣ್ಮೆ ಹಾರ್ದಿಕ್ ಪಾಂಡ್ಯ ಅವರಲ್ಲಿಯೂ ಇದೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹಾಗೂ ಈ ಬಾರಿಯ ಐಪಿಎಲ್‌ನಲ್ಲಿ ಕಾಮೆಂಟೇಟರ್ ಆಗಿ ಕರ್ತವ್ಯ ನಿರ್ವಹಿಸಲಿರುವ ಅನಿಲ್ ಕುಂಬ್ಳೆ.

ಜಿಯೋ ಸಿನಿಮಾದಲ್ಲಿ ವಿಶ್ಲೇಷಣೆಯನ್ನು ಮಾಡುತ್ತಾ ಮಾತನಾಡಿದ ಅನುಲ್ ಕುಂಬ್ಳೆ ಹಾರ್ದಿಕ್ ಪಾಂಡ್ಯ ಆಟವನ್ನು ಅದ್ಭುತವಾಗಿ ಅರ್ಥ ಮಾಡಿಕೊಳ್ಳುತ್ತಾರೆ ಎಂದಿದ್ದಾರೆ. ಈ ವಿಚಾರವಾಗಿ ಅವರು ಎಂಎಸ್ ಧೋನಿಯಂತೆಯೇ ಯೋಚಿಸುತ್ತಾರೆ ಎಂದಿರುವ ಅನಿಲ್ ಕುಂಬ್ಳೆ ಆತನೋರ್ವ ಸಂಪೂರ್ಣವಾದ ಪ್ಯಾಕೇಜ್ ಎಂದಿದ್ದಾರೆ. ಕಳೆದ ಆವೃತ್ತಿಯಲ್ಲಿ ಮೊದಲ ಬಾರಿಗೆ ನಾಯಕತ್ವದ ಜವಾಬ್ಧಾರಿ ವಹಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ ನಾಯಕನಾಗಿ ಅದ್ಭುತ ಯಶಸ್ಸು ಸಾಧಿಸಿ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದಲ್ಲದೆ ಆಟಗಾರನಾಗಿಯೂ 487 ರನ್ ಹಾಗೂ 8 ವಿಕೆಟ್‌ಗಳನ್ನು ಪಡೆದು ಮಿಂಚಿದ್ದರು.
Most Runs In IPL History: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಗಣ್ಯರ ಪಟ್ಟಿಗೆ ಸೇರಲು ಸಜ್ಜಾದ ಎಂಎಸ್ ಧೋನಿ
"ವೇಗದ ಬೌಲರ್ ಆಗಿ ಅಷ್ಟು ವೇಗವಾಗಿ ಬೌಲಿಂಗ್ ನಡೆಸಿ ಬಳಿಕ ಬ್ಯಾಟಿಂಗ್‌ನಲ್ಲಿ ಯಾವುದೇ ಸಂದರ್ಭದಲ್ಲಿಯೂ ಬ್ಯಾಟಿಂಗ್ ನಡೆಸುವ ಸಾಮರ್ಥ್ಯ ಅವರಲ್ಲಿದೆ. ಆತನನ್ನು ಮುಂಬೈ ಇಂಡಿಯನ್ಸ್ ತಂಡದಲ್ಲಿ ಹತ್ತಿರದಿಂದ ಬಲ್ಲೆ. ಅಲ್ಲಿ ಆತ ಫಿನಿಷರ್ ಜವಾಬ್ಧಾರಿಯನ್ನು ವಹಿಸಿಕೊಂಡಿದ್ದರು. ಆದರೆ ಗುಜರಾತ್ ತಂಡಕ್ಕೆ ಆತ ನಾಯಕನಾಗಿ ವಿಭಿನ್ನವಾದ ಜವಾಬ್ಧಾರಿಯನ್ನು ನಿರ್ವಹಿಸಿದ್ದಾರೆ" ಎಂದಿದ್ದಾರೆ ಅನಿಲ್ ಕುಂಬ್ಳೆ.
ಕಳೆದ ಆವೃತ್ತಿಯಲ್ಲಿ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಕಾಣಿಸಿಕೊಂಡ ಗುಜರಾತ್ ಟೈಟನ್ಸ್ ತಂಡ ಹಾರ್ದಿಕ್ ಪಾಂಡ್ಯ ನೇತೃತ್ವದಲ್ಲಿ ಮೊದಲ ಆವೃತ್ತಿಯಲ್ಲಿಯೇ ಅಮೋಘ ಪ್ರದರ್ಶನ ನೀಡಿದೆ. ಈ ಮೂಲಕ ಪ್ರಪ್ರಥಮ ಪ್ರಯತ್ನದಲ್ಲಿಯೇ ಜಿಟಿ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದು ಈ ಬಾರಿಯೂ ಅಂಥಾದ್ದೇ ಪ್ರದರ್ಶನ ನೀಡುವ ವಿಶ್ವಾಸದಲ್ಲಿದೆ. ಬಹುತೇಕ ಕಳೆದ ಆವೃತ್ತಿಯ ಆಟಗಾರರನ್ನು ಹೊಂದಿರುವ ಜಿಟಿ ತಂಡ ಈ ಬಾರಿ ಕಳೆದ ಬಾರಿಯ ಪ್ರದರ್ಶನವನ್ನು ಪುನರಾವರ್ತಿಸುವ ಆತ್ಮವಿಶ್ವಾಸದೊಂದಿಗೆ ಕಣಕ್ಕಿಳಿಯುತ್ತಿದೆ
ಇನ್ನು ಈ ಬಾರಿಯ ಆವೃತ್ತಿಯಲ್ಲಿ ಗುಜರಾತ್ ಟೈಟನ್ಸ್ ತಂಡ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಎದುರಿಸಲಿದ್ದು ಹಾರ್ದಿಕ್ ಪಾಂಡ್ಯ ಹಾಗೂ ಎಂಎಸ್ ಧೋನಿ ನಾಯಕರಾಗಿ ಮುಖಾಮುಖಿಯಾಗುತ್ತಿದ್ದಾರೆ. ಇದು ಕೂಡ ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಇನ್ನು ಈ ಉದ್ಘಾಟನಾ ಪಂದ್ಯಕ್ಕೂ ಮುನ್ನ ಬಿಸಿಸಿಐ ಅದ್ದೂರಿ ಉದ್ಘಾಟನಾ ಕಾರ್ಯಕ್ರಮವನ್ನು ಕೂಡ ಆಯೋಜನೆ ಮಾಡಿದೆ.
ಗುಜರಾತ್ ಟೈಟನ್ಸ್ ಸಂಪೂರ್ಣ ಸ್ಕ್ವಾಡ್: ಹಾರ್ದಿಕ್ ಪಾಂಡ್ಯ(ನಾಯಕ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ಅಭಿನವ್ ಮನೋಹರ್, ವಿಜಯ್ ಶಂಕರ್, ರಶೀದ್ ಖಾನ್, ಸಾಯಿ ಕಿಶೋರ್, ನೂರ್ ಅಹ್ಮದ್, ಜಯಂತ್ ಯಾದವ್, ಅಲ್ಜಾರಿ ಜೋಸೆಫ್, ಮೊಹಮ್ಮದ್ ಶಮಿ, ಯಶ್ ದಯಾಳ್, ದರ್ಶನ್ ನಲ್ಕಂಡೆ, ಪ್ರದೀಪ್ ಸಾಂಗ್ವಾನ್, ಶಿವಂ ಮಾವಿ, ಜೋಶುವಾ ಲಿಟಲ್, ಕೇನ್ ವಿಲಿಯಮ್ಸನ್, ಕೆಎಸ್ ಭರತ್, ಒಡಿಯನ್ ಸ್ಮಿತ್, ಮೋಹಿತ್ ಶರ್ಮಾ, ಉರ್ವಿಲ್ ಪಟೇಲ್.












Click it and Unblock the Notifications