Virat Kohli: ನಿಮ್ಮ ಕಣ್ಣೀರು, ಹೋರಾಟವನ್ನು ನೋಡಿದ್ದೇನೆ; ವಿರಾಟ್ ಕೊಹ್ಲಿ ಬಗ್ಗೆ ಅನುಷ್ಕಾ ಶರ್ಮಾ ಸಂದೇಶ
ಆಧುನಿಕ ಕ್ರಿಕೆಟ್ ಜಗತ್ತಿನ ದಿಗ್ಗಜ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಟೆಸ್ಟ್ ಕ್ರಿಕೆಟ್ ಅನ್ನು ಅತಿಯಾಗಿ ಪ್ರೀತಿಸುತ್ತಿದ್ದ ಕೊಹ್ಲಿ ಇನ್ನೂ ಹಲವು ವರ್ಷ ಆಡುವುದಾಗಿ ಹೇಳಿದ್ದರೂ ದಿಢೀರ್ ಎಂದು ನಿವೃತ್ತಿ ಘೋಷಣೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಆಯ್ಕೆ ಮಾಡುವ ಸಮಯದಲ್ಲೇ ಕೊಹ್ಲಿ ಈ ನಿರ್ಧಾರ ಮಾಡಿದ್ದಾರೆ.
ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆಯ ಬಗ್ಗೆ ಅನುಷ್ಕಾ ಶರ್ಮಾ ಪೋಸ್ಟ್ ಮಾಡಿದ್ದಾರೆ. ಕೊಹ್ಲಿ ಟೆಸ್ಟ್ ಕ್ರಿಕೆಟ್ ಅನ್ನು ಎಷ್ಟು ಪ್ರೀತಿಸುತ್ತಾರೆ ಎನ್ನುವುದನ್ನು ಅವರ ಪೋಸ್ಟ್‌ನಿಂದ ತಿಳಿಯಬಹುದಾಗಿದೆ.

ಅನುಷ್ಕಾ ಶರ್ಮಾ ಹೇಳಿದ್ದೇನು?
"ಬೇರೆಯವರು ನಿಮ್ಮ ದಾಖಲೆಗಳು ಮತ್ತು ಮೈಲಿಗಲ್ಲುಗಳ ಬಗ್ಗೆ ಮಾತನಾಡುತ್ತಾರೆ. ಆದರೆ ನೀವು ಎಂದಿಗೂ ತೋರಿಸದ ಕಣ್ಣೀರು, ಯಾರೂ ನೋಡದ ಹೋರಾಟಗಳು ಮತ್ತು ನೀವು ಟೆಸ್ಟ್ ಕ್ರಿಕೆಟ್ ಮೇಲೆ ಹೊಂದಿರುವ ಅಚಲ ಪ್ರೀತಿಯನ್ನು ನಾನು ನೆನಪಿಸಿಕೊಳ್ಳುತ್ತೇನೆ. ಇದಕ್ಕಾಗಿ ನೀವು ಎಷ್ಟು ಶ್ರಮಿಸಿದ್ದೀರಾ ಎನ್ನುವುದು ನನಗೆ ತಿಳಿದಿದೆ. ಪ್ರತಿ ಟೆಸ್ಟ್ ಸರಣಿಯ ನಂತರ, ನೀವು ಇನ್ನೂ ಸ್ವಲ್ಪ ಬುದ್ದಿವಂತರಾಗಿ, ಸ್ವಲ್ಪ ವಿನಮ್ರರಾಗಿ ಹಿಂತಿರುಗಿದ್ದೀರಿ. ಮತ್ತು ನೀವು ಅದರ ಮೂಲಕ ವಿಕಸನಗೊಳ್ಳುವುದನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.
ಅಂತರರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತರಾಗುತ್ತೀರಿ ಎಂದು ನಾನು ಯಾವಾಗಲೂ ಊಹಿಸಿದ್ದೆ. ಆದರೆ ನೀವು ಯಾವಾಗಲೂ ನಿಮ್ಮ ಹೃದಯದ ಮಾತು ಕೇಳಿದ್ದೀರಾ. ಆದ್ದರಿಂದ ನಾನು ನನ್ನ ಪ್ರೀತಿಯನ್ನು ಹೇಳಲು ಬಯಸುತ್ತೇನೆ, ನೀವು ಈ ವಿದಾಯದಲ್ಲಿ ಪ್ರತಿಯೊಂದನ್ನು ಗಳಿಸಿದ್ದೀರಿ ಎಂದು ಪತಿಯ ಟೆಸ್ಟ್ ಕ್ರಿಕೆಟ್ ಪ್ರೇಮವನ್ನು ತಿಳಿಸಿದ್ದಾರೆ. ಪತ್ನಿಯ ಪೋಸ್ಟ್‌ಗೆ ಹೃದಯದ ಎಮೋಜಿಗಳೊಂದಿಗೆ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಅನುಷ್ಕಾ ಬಗ್ಗೆ ಅಪಪ್ರಚಾರ
ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಘೋಷಣೆ ಮಾಡಿದ ಕೆಲವೇ ಗಂಟೆಗಳಲ್ಲಿ ಅನುಷ್ಕಾ ಶರ್ಮಾ ವಿರುದ್ಧ ಕೆಲವು ಕಿಡಿಗೇಡಿಗಳು ಅಪಪ್ರಚಾರ ಮಾಡಿದ್ದಾರೆ. ವಿರಾಟ್ ಕೊಹ್ಲಿ ನಿವೃತ್ತಿಯಾಗಲು ಅನುಷ್ಕಾ ಶರ್ಮಾ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾದಲ್ಲಿ ನಿಂದಿಸಲಾಗುತ್ತಿದೆ. ಇದೆಲ್ಲದರ ನಡುವೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಮುಂಬೈನ ವಿಮಾನ ನಿಲ್ದಾಣದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದು ಎಲ್ಲಾ ಊಹಾಪೋಹಗಳಿಗೂ ತೆರೆ ಎಳೆದಿದ್ದಾರೆ.
ವಿರಾಟ್ ಕೊಹ್ಲಿ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಹಲವು ದಿಗ್ಗಜ ಕ್ರಿಕೆಟಿಗರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಇನ್ನೂ ಹಲವು ಕ್ರಿಕೆಟಿಗರು ವಿದಾಯದ ಬಳಿಕದ ಬದುಕಿಗೆ ಶುಭ ಕೋರಿದ್ದಾರೆ. ಸಚಿನ್ ತೆಂಡೂಲ್ಕರ್ ಕೂಡ ಕೊಹ್ಲಿಗೆ ವಿಶೇಷ ಸಂದೇಶ ನೀಡಿದ್ದಾರೆ.












Click it and Unblock the Notifications