• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Asia Cup 2022: ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಹಲವು ಬದಲಾವಣೆ ಸಾಧ್ಯತೆ

|
Google Oneindia Kannada News

ಏಷ್ಯಾಕಪ್ ಗುಂಪು ಹಂತದ ಪಂದ್ಯಗಳ ಮುಕ್ತಾಯವಾಗಿದ್ದು, ಸೂಪರ್ 4 ಹಂತದ ಪಂದ್ಯಗಳು ನಡೆಯುತ್ತಿವೆ. ಸೂಪರ್ 4 ಹಂತದ ಮೊದಲನೇ ಪಂದ್ಯದಲ್ಲಿ ಈಗಾಗಲೇ ಅಫ್ಘಾನಿಸ್ತಾನದ ವಿರುದ್ಧ ಶ್ರೀಲಂಕಾ ಭರ್ಜರಿ ಜಯಸಾಧಿಸಿದೆ.

ಸೂಪರ್ 4 ಹಂತದ ಎರಡನೇ ಪಂದ್ಯ ಸೆಪ್ಟೆಂಬರ್ 4 ರ ಭಾನುವಾರ ನಡೆಯಲಿದ್ದು ಒಂದು ವಾರದ ನಂತರ ಭಾರತ-ಪಾಕಿಸ್ತಾನ ಮತ್ತೆ ಮುಖಾಮುಖಿಯಾಗುತ್ತಿವೆ. ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದ ಭಾರತ ಈಗ ಎರಡನೇ ಬಾರಿಗೆ ಸಾಂಪ್ರದಾಯಿಕ ಎದುರಾಳಿಯ ವಿರುದ್ಧ ಸೆಣಸಲಿದೆ. ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ 7.30ಕ್ಕೆ ಪಂದ್ಯ ಆರಂಭವಾಗಲಿದೆ.

ಎರಡೂ ತಂಡಗಳಿಗೆ ಆಟಗಾರರ ಗಾಯದ ಸಮಸ್ಯೆ ಕಾಡುತ್ತಿದೆ. ಭಾರತದ ಪ್ರಮುಖ ಆಲ್‌ರೌಂಡರ್ ರವೀಂದ್ರ ಜಡೇಜಾ ಮೊಣಕಾಲು ನೋವಿನಿಂದ ಏಷ್ಯಾಕಪ್ ಟೂರ್ನಿಯಿಂದ ಹೊರಬಿದ್ದಿದ್ದಾರೆ, ಅವರ ಬದಲಿಗೆ ಬಿಸಿಸಿಐ ಮತ್ತೊಬ್ಬ ಯುವ ಆಲ್‌ರೌಂಡರ್ ಅಕ್ಸರ್ ಪಟೇಲ್‌ರನ್ನು ಹೆಸರಿಸಿದೆ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ತಂಡಕ್ಕೆ ರವೀಂದ್ರ ಜಡೇಜಾ ಅನುಪಸ್ಥಿತಿ ಕಾಡಲಿದೆ. ಅವರ ಬದಲಿಗೆ ತಂಡದಲ್ಲಿ ಯಾರು ಸ್ಥಾನ ಪಡೆಯುತ್ತಾರೆ ಎನ್ನುವ ಕುತೂಹಲ ಇದೆ.

 ರವೀಂದ್ರ ಜಡೇಜಾ ಬದಲಿಗೆ ಯಾರಿಗೆ ಅವಕಾಶ

ರವೀಂದ್ರ ಜಡೇಜಾ ಬದಲಿಗೆ ಯಾರಿಗೆ ಅವಕಾಶ

ರವೀಂದ್ರ ಜಡೇಜಾ ಗಾಯದ ಸಮಸ್ಯೆಯಿಂದಾಗಿ ಭಾರತ ಆಡುವ 11ರ ಬಳಗದಲ್ಲಿ ಹಲವು ಬದಲಾವಣೆಗಳಾಗುವ ಸಾಧ್ಯತೆ ಇದೆ. ಜಡೇಜಾ ಸ್ಥಾನಕ್ಕೆ ಅಕ್ಸರ್ ಪಟೇಲ್ ನೇರವಾಗಿ ಅವಕಾಶ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.

ಹಾಂಗ್ ಕಾಂಗ್ ವಿರುದ್ಧ ಬ್ಯಾಟಿಂಗ್ ಮಾಡುವ ಅವಕಾಶ ಪಡೆಯದೆ ನಿರಾಸೆ ಅನುಭವಿಸಿದ್ದ ರಿಷಬ್ ಪಂತ್ ಪಾಕಿಸ್ತಾನ ವಿರುದ್ಧ ಪಂದ್ಯದಲ್ಲಿ ಅವಕಾಶ ಪಡೆಯುವ ನಿರೀಕ್ಷೆ ಇದೆ, ಎಡಗೈ ಬ್ಯಾಟರ್ ಆಗಿರುವ ರಿಷಬ್ ಪಂತ್ ಪಾಕ್‌ ಬೌಲರ್ ಗಳನ್ನು ಎದುರಿಸಲು ಜಡೇಜಾ ಬದಲಿಗೆ ಉತ್ತಮ ಆಯ್ಕೆ ಎನ್ನಲಾಗುತ್ತಿದೆ.

ಟಿ20 ವಿಶ್ವಕಪ್, ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟಟಿ20 ವಿಶ್ವಕಪ್, ಭಾರತ ವಿರುದ್ಧದ ಸರಣಿಗೆ ಆಸ್ಟ್ರೇಲಿಯಾ ತಂಡ ಪ್ರಕಟ

 ಹಾರ್ದಿಕ್ ಪಾಂಡ್ಯ ವಾಪಸ್, ಅವೇಶ್ ಖಾನ್ ಹೊರಕ್ಕೆ?

ಹಾರ್ದಿಕ್ ಪಾಂಡ್ಯ ವಾಪಸ್, ಅವೇಶ್ ಖಾನ್ ಹೊರಕ್ಕೆ?

ಭಾರತದ ವೇಗದ ಬೌಲರ್ ಅವೇಶ್ ಖಾನ್ ಶನಿವಾರ ಟೀಂ ಇಂಡಿಯಾದ ಅಭ್ಯಾಸದ ವೇಳೆ ಕಾಣಿಸಿಕೊಂಡಿಲ್ಲ. ಜ್ವರದಿಂದ ಬಳಲುತ್ತಿದ್ದಾರೆ ಎಂದು ಮೂಲಗಳು ತಿಳಿಸಿದ್ದು, ಭಾನುವಾರದ ಪಂದ್ಯಕ್ಕೆ ಅವರು ಲಭ್ಯವಾಗುವ ಬಗ್ಗೆ ಇನ್ನೂ ಖಚಿತವಾಗಿಲ್ಲ.

ಒಂದು ವೇಳೆ ಅವೇಶ್ ಖಾನ್ ಪಂದ್ಯದಿಂದ ಹೊರಗುಳಿದರೆ ಹಿರಿಯ ಆಟಗಾರ ಸ್ವಿನ್ನರ್ ರವಿಚಂದ್ರನ್ ಅಶ್ವಿನ್‌ ಆಯ್ಕೆಯಾಗುವ ಸಾಧ್ಯತೆ ಇದೆ. ಇನ್ನು ಹಾಂಗ್‌ ಕಾಂಗ್ ವಿರುದ್ಧದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಹಾರ್ದಿಕ್ ಪಾಂಡ್ಯ ಪಾಕಿಸ್ತಾನ ವಿರುದ್ಧ ಕಣಕ್ಕಿಳಿಯಲಿದ್ದಾರೆ.

 ಗಾಯದ ಸಮಸ್ಯೆಯಿಂದ ಶಹನವಾಜ್ ದಹಾನಿ ಹೊರಕ್ಕೆ

ಗಾಯದ ಸಮಸ್ಯೆಯಿಂದ ಶಹನವಾಜ್ ದಹಾನಿ ಹೊರಕ್ಕೆ

ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಪಾಕಿಸ್ತಾನದ ಪ್ರಮುಖ ವೇಗದ ಬೌಲರ್ ಶಹನವಾಜ್ ದಹಾನಿ ಭಾನುವಾರ ಭಾರತದ ವಿರುದ್ಧ ನಡೆಯಲಿರುವ ಪಂದ್ಯದಿಂದ ಹೊರಗುಳಿಯಲಿದ್ದಾರೆ. ದಹಾನಿ ಗಾಯದ ಸಮಸ್ಯೆ ಪಾಕಿಸ್ತಾನಕ್ಕೆ ಹಿನ್ನಡೆಯಾಗಿದೆ.

ಗಾಯಗೊಂಡಿರುವ ದಹಾನಿ ಬದಲಿಗೆ ತಂಡದಲ್ಲಿ ಮತ್ತೊಬ್ಬ ವೇಗದ ಬೌಲರ್ ಹಸನ್ ಅಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಮತ್ತೊಬ್ಬ ಯುವ ವೇಗಿ ಮೊಹಮ್ಮದ್ ಹಸ್ನೇನ್‌ ಇದ್ದು, ಅನುಭವಿ ಹಸನ್ ಅಲಿಗೆ ಮಣೆ ಹಾಕುವುದು ಬಹುತೇಕ ಖಚಿತವಾಗಿದೆ.

 ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಇನ್ನೂ ಸುಧಾರಣೆ ಬೇಕು

ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಇನ್ನೂ ಸುಧಾರಣೆ ಬೇಕು

ಭಾರತ ತಂಡಕ್ಕೆ ಆರಂಭಿಕ ಆಟಗಾರರ ಫಾರ್ಮ್ ಚಿಂತೆ ಕಾಡುತ್ತಿದೆ. ರೋಹಿತ್ ಶರ್ಮಾ ಮೊದಲ ಎರಡೂ ಪಂದ್ಯಗಳಲ್ಲಿ ಹೆಚ್ಚಿನ ರನ್ ಗಳಿಸಿಲ್ಲ, ಇನ್ನು ಕೆ.ಎಲ್ ರಾಹುಲ್ ಹಾಂಗ್ ಕಾಂಗ್ ವಿರುದ್ಧ ಆಡಿದ ಇನ್ನಿಂಗ್ಸ್ ಎಲ್ಲರ ಟೀಕೆಗೆ ಗುರಿಯಾಗಿದೆ. ವಿರಾಟ್ ಕೊಹ್ಲಿ ಹಾಂಗ್‌ಕಾಂಗ್ ವಿರುದ್ಧ ಅರ್ಧ ಶತಕ ಗಳಿಸಿರುವುದು ಕೊಂಚ ಸಮಾಧಾನ ತಂದಿದೆ. ಸೂರ್ಯಕುಮಾರ್ ಯಾದವ್ ಮೇಲೆ ಭಾರಿ ನಿರೀಕ್ಷೆ ಇದೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಅವೇಶ್ ಖಾನ್ ನಿರೀಕ್ಷಿತ ಮಟ್ಟದಲ್ಲಿ ಪ್ರದರ್ಶನ ನೀಡುತ್ತಿಲ್ಲ. ಹಾಂಗ್‌ ಕಾಂಗ್ ವಿರುದ್ಧ ಪಂದ್ಯದಲ್ಲಿ 4 ಓವರ್ ಗಳಲ್ಲಿ 53 ರನ್ ಬಿಟ್ಟುಕೊಟ್ಟಿದ್ದರು. ಭಾನುವಾರ ಒಂದು ವೇಳೆ ಅವೇಶ್ ಖಾನ್ ಕಣಕ್ಕಿಳಿದರೆ ಪಾಕಿಸ್ತಾನದ ಬ್ಯಾಟರ್ ಗಳು ಅವರನ್ನು ಟಾರ್ಗೆಟ್ ಮಾಡುವ ಸಾಧ್ಯತೆ ಇದೆ.

ಎರಡೂ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ

ಎರಡೂ ತಂಡಗಳ ಸಂಭಾವ್ಯ ಆಟಗಾರರ ಪಟ್ಟಿ

ಭಾರತ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್/ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್/ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್

ಪಾಕಿಸ್ತಾನ: ಬಾಬರ್ ಆಜಮ್, ಮೊಹಮ್ಮದ್ ರಿಜ್ವಾನ್, ಫಖರ್ ಜಮಾನ್, ಇಫ್ತಿಕರ್ ಅಹ್ಮದ್, ಖುಷ್ದಿಲ್ ಶಾ, ಶಾದಾಬ್ ಖಾನ್, ಆಸಿಫ್ ಅಲಿ, ಮೊಹಮ್ಮದ್ ನವಾಜ್, ಹಾರಿಸ್ ರೌಫ್, ನಸೀಮ್ ಶಾ, ಹಸನ್ ಅಲಿ

English summary
India were handed a major blow ahead of the crucial Asia Cup Super 4 match against Pakistan with star all-rounder Ravindra Jadeja ruled out of the rest of the tournament with a knee injury. Pakistan face a selection dilemma, following the injury to Shahnawaz Dahani.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X