Asia Cup 2023: ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಸಿಕ್ತು ಅವಕಾಶ

ಆಗಸ್ಟ್ 30ರಿಂದ ಆರಂಭವಾಗಲಿರುವ ಏಷ್ಯಾಕಪ್ ಪಂದ್ಯಾವಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಸಂಜು ಸ್ಯಾಮ್ಸನ್ ಮೀಸಲು ಆಟಗಾರನಾಗಿ ತಂಡದ ಜೊತೆ ಇರಲಿದ್ದಾರೆ. ಟಿ20 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ತಿಲಕ್ ವರ್ಮಾ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಪುರುಷರ ಆಯ್ಕೆ ಸಮಿತಿಯು ಮುಂಬರುವ ಏಷ್ಯಾ ಕಪ್ 2023 ಗಾಗಿ 17 ಆಟಗಾರರ ತಂಡವನ್ನು ಆಗಸ್ಟ್ 21 ರಂದು ಬಹಿರಂಗಪಡಿಸಿದೆ. ಪಂದ್ಯಾವಳಿಯು ಆಗಸ್ಟ್ 30 ರಂದು ಮುಲ್ತಾನ್‌ನಲ್ಲಿ ಪ್ರಾರಂಭವಾಗಲಿದೆ.

asia-cup-2023

ನವದೆಹಲಿಯ ತಾಜ್ ಪ್ಯಾಲೇಸ್‌ನಲ್ಲಿ ನಡೆದ ಆಯ್ಕೆ ಸಭೆಗೆ ನಾಯಕ ರೋಹಿತ್ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಉಪಸ್ಥಿತರಿದ್ದರು.

ಗಾಯದಿಂದ ಚೇತರಿಸಿಕೊಂಡ ಬಳಿಕ ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಮಿಂಚುತ್ತಿರುವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಏಷ್ಯಾಕಪ್ ತಂಡದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ.

ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್ ಮತ್ತು ಬುಮ್ರಾ ಏಕದಿನ ತಂಡಕ್ಕೆ ಮರಳಿದ್ದಾರೆ. ಹಿರಿಯ ವೇಗಿ ಮೊಹಮ್ಮದ್ ಶಮಿ ಕೂಡ ತಂಡಕ್ಕೆ ವಾಪಸಾಗಿದ್ದಾರೆ. ಟಿ20ಯಲ್ಲಿ ಭಾರತ ತಂಡದ ನಾಯಕನಾಗಿರುವ ಹಾರ್ದಿಕ್ ಪಾಂಡ್ಯ, ಏಕದಿನ ಮಾದರಿಯಲ್ಲಿ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ.

ಏಷ್ಯಾಕಪ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+