India vs Bangladesh : ಭಾರತ ತಂಡದಲ್ಲಿ ಹಲವು ಬದಲಾವಣೆ: ಹೀಗಿರಲಿದ ಭಾರತದ ಆಡುವ ಬಳಗ!
ಏಷ್ಯಾಕಪ್ 2023ರ ಪಂದ್ಯಾವಳಿಯಲ್ಲಿ ಈಗಾಗಲೇ ಫೈನಲ್ ತಲುಪಿರುವು ಭಾರತ ತಂಡ ಶುಕ್ರವಾರ ಬಾಂಗ್ಲಾದೇಶದ ವಿರುದ್ಧ ಸೂಪರ್ 4 ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ಮತ್ತು ಶ್ರೀಲಂಕಾ ವಿರುದ್ಧ ಭಾರತ ತಂಡ ಸತತ ಮೂರು ದಿನಗಳ ಕಾಲ ಮೈದಾನಕ್ಕಿಳಿದಿತ್ತು. ಭಾನುವಾರ ಫೈನಲ್ ಪಂದ್ಯ ನಡೆಯಲಿದ್ದು, ಶುಕ್ರವಾರದ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.
ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ. ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಆಟಗಾರರು ಸ್ಪಿನ್ ಬೌಲಿಂಗ್ ವಿರುದ್ಧ ರನ್ ಗಳಿಸಲು ಪರದಾಡಿದ ಕಾರಣ ಸೂರ್ಯಕುಮಾರ್ ಯಾದವ್ ಅವರಿಗೆ ಅವಕಾಶ ಕೊಟ್ಟು ನೋಡಲು ರೋಹಿತ್ ಶರ್ಮಾ ಮತ್ತು ದ್ರಾವಿಡ್ ಚಿಂತಿಸಿರಬಹುದು.

ಆದರೆ ಸೂರ್ಯಕುಮಾರ್ ಯಾದವ್ ಅವರಿಗೆ ಯಾರು ಸ್ಥಾನ ಬಿಟ್ಟುಕೊಡುತ್ತಾರೆ ಎನ್ನುವುದು ಪ್ರಶ್ನೆಯಾಗಿದೆ. ಅಕ್ಷರ್ ಪಟೇಲ್ ಕಳೆದ ಪಂದ್ಯದಲ್ಲಿ ಉತ್ತಮ ಅವಕಾಶ ನೀಡದ ಕಾರಣ ಅವರ ಬದಲಾಗಿ ಕಣಕ್ಕಿಳಿದರೂ ಅಚ್ಚರಿ ಪಡಬೇಕಿಲ್ಲ.
ಮೊಹಮ್ಮದ್ ಶಮಿ ವಾಪಸ್
ಭಾನುವಾರ ಫೈನಲ್ ಪಂದ್ಯ ನಡೆಯುವ ಕಾರಣ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡುವ ಕಾರಣ, ಮೊಹಮ್ಮದ್ ಶಮಿ ಕೂಡ ತಂಡವನ್ನು ಸೇರಿಕೊಳ್ಳುವ ಸಾಧ್ಯತೆ ಇದೆ. ಪ್ರಮುಖ ವೇಗಿ ಬುಮ್ರಾಗೆ ಶುಕ್ರವಾರದ ಪಂದ್ಯದಲ್ಲಿ ವಿಶ್ರಾಂತಿ ನೀಡುವ ಸಾಧ್ಯತೆ ಇದ್ದು, ಶಮಿ ಅವಕಾಶ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಒಂದು ವೇಳೆ ಇಶಾನ್ ಕಿಶನ್ ಅವರಿಗೆ ವಿಶ್ರಾಂತಿ ನೀಡಿದರೂ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದು ಖಚಿತವಾಗಿದೆ. ಶ್ರೇಯಸ್ ಅಯ್ಯರ್ ಕೂಡ ಫಿಟ್ ಆಗಿದ್ದು, ಅವರಿಗೆ ಅವಕಾಶ ನೀಡುವ ಸಾಧ್ಯತೆ ಕಡಿಮೆ ಇದೆ ಎಂದೇ ಹೇಳಬಹುದು.
ಪ್ರಮುಖ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯಗೆ ವಿಶ್ರಾಂತಿ ನೀಡಿದರೆ ಶಾರ್ದೂಲ್ ಠಾಕೂರ್ ಮತ್ತೊಂದು ಅವಕಾಶ ಪಡೆಯುವ ಸಾಧ್ಯತೆ ಇದೆ. ಇವರೆಲ್ಲ ಏಕದಿನ ವಿಶ್ವಕಪ್ ತಂಡದಲ್ಲಿ ಇರುವ ಕಾರಣ ಒಂದು ಅವಕಾಶ ನೀಡುವ ಸಾಧ್ಯತೆ ಇದೆ.
ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಸ್ಪಿನ್ ದಾಳಿಗೆ ತತ್ತರಿಸಿದ್ದ ಭಾರತ ತಂಡಕ್ಕೆ ಶುಕ್ರವಾರ ಕೂಡ ಸವಾಲಾಗಲಿದೆ. ಬಾಂಗ್ಲಾದೇಶದಲ್ಲಿ ಕೂಡ ಶಕೀಬ್ ಅಲ್ ಹಸನ್ ಉತ್ತಮ ಸ್ಪಿನ್ನರ್ ಆಗಿದ್ದು, ಇವರನ್ನು ಎದುರಿಸಲು ಭಾರತ ತಂಡ ಯಾವ ಯೋಜನೆ ಮಾಡಿಕೊಂಡಿದೆ ಎನ್ನುವುದನ್ನು ನೋಡಬೇಕಿದೆ.
ಭಾರತದ ಆಡುವ ಬಳಗ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ /ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ / ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ / ಮೊಹಮ್ಮದ್ ಶಮಿ.












Click it and Unblock the Notifications